ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ-ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.7: ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರವಿವಾರ ನಗರದ ಮರಾಠಿ ವಿದ್ಯಾಲಯ ಹಾಗೂ ಅಂಜುಮನ್ ಬಾಲಕಿಯರ ಪದವಿ-ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ,ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ಪರೀಕ್ಷಾ…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರದಲ್ಲಿ ಚಳಿ ಲೆಕ್ಕಿಸದೇ ಓಡಿದ ಓಟಗಾರರು….!

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 7 :ಮೈ ಕೊರೆವ ಚಳಿ ಲೆಕ್ಕಿಸದೇ ನೂರಾರು ಓಟಗಾರರು ವಿಜಯಪುರದ ಪ್ರಮುಖ ಬೀದಿಗಳಲ್ಲಿ ಭಾನುವಾರ ಬೆಳ್ಳಂಬೆಳಗ್ಗೆಓಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.ಪರಿಸರ ರಕ್ಷಣೆಯ ಧ್ಯೇಯದೊಂದಿಗೆ ನಡೆದ ಮ್ಯಾರಾಥಾನ್ ಯಶಸ್ವಿಯಾಗಿ ನಡೆಯಿತು.ಡಾ.ಬಿ.ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡ ಮ್ಯಾರಾಥಾನ್‌ನಲ್ಲಿ ಪರಿಸರ ರಕ್ಷಣೆಯ ಕಾಳಜಿಯ ರಣ ಕಹಳೆ ಮೊಳಗಿತು.ಎಲ್ಲೆಡೆ ಹಳದಿ ವರ್ಣದ ಟೀ-ಶರ್ಟ್ ಧರಿಸಿ ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡ ಯುವಕರ, ಹಿರಿಯ ದಂಡು ಕಂಡು ಬಂದಿತು. ಓಡು…ಓಡು….ಪರಿಸರಕ್ಕಾಗಿ ಓಡು ಎಂಬ ದಿವ್ಯ ಸಂದೇಶದೊಂದಿಗೆ…

Read More

ಜನಾರ್ಧನ ರೆಡ್ಡಿ ವಿರುದ್ದ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಎಂ.ಬಿ.ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜರ್ನಾಧನ ರೆಡ್ಡಿನನ್ನ ಬಗ್ಗೆ ಮಾತನಾಡಿದ್ದಾರೆ. ಅದು ಗೊತ್ತಿದೆ. ಆದರೆ ನಾನು ಮಾತನಾಡಿದರೆ ಬಹಳ ದೊಡ್ಡದಾಗುತ್ತದೆ. ರೆಡ್ಡಿ ಇತಿಹಾಸ ಇಡೀ ಜಗತ್ತಿಗೆ ಗೊತ್ತಿದೆ ಎಂದು ಸಚಿವ ಎಂಬಿಪಿ ಹರಿ ಹಾಯ್ದರು.ಇಂತಹ ಲೂಟಿಕೋರ, ದರೋಡೆಕೋರ.ಹೂ ಇಜ್ ಜನಾರ್ಧನ ರೆಡ್ಡಿ ಎಂದು ಖಾರವಾಗಿ ಪ್ರಶ್ನಿಸಿದರು.ಈ ಸಲ ಜನಾರ್ಧನ ರೆಡ್ಡಿ ಸೋಲುತ್ತಾರೆ.ಹೋದ ಸಲ ಸುಮ್ಮನೆ ಗೆದ್ದರು.ಇವರು…

Read More

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಮಹಾ ಪರಿ ನಿರ್ವಾಣ ದಿನ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.೬: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರವರ, ೬೯ನೇ ಮಹಾಪರಿನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲಹಮೀದ ಮುಶ್ರೀಫ್ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿ ಪ್ರಮುಖ ನಾಯಕರಾಗಿದ್ದರು. ಅವರು ನ್ಯಾಯಶಾಸ್ತ್ರಜ್ಞ ಅರ್ಥಶಾಸ್ತ್ರಜ್ಞ, ಸಾಮಾಜಿಕ ಸುಧಾರಕ ರಾಜಕಾರಣಿಯಾಗಿದ್ದರು. ಭಾರತ ಸಂವಿಧಾನವನ್ನು ರಚಿಸಿದ ಸಮಿತಿಯ ಅಧ್ಯಕ್ಷರಾಗಿ ಡಾ. ಅಂಬೇಡ್ಕರರವರು ಎಲ್ಲ ದೇಶದ ನಾಗರಿಕರಿಗೆ ನ್ಯಾಯ, ಸಮಾನತೆ ಮತ್ತು ಘನತೆಯನ್ನು ತರುವಲ್ಲಿ ನಿರಂತರವಾಗಿ ಶ್ರಮಿಸಿದರು. ಸಂವಿಧಾನ…

Read More

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಮಹಾಪರಿ ನಿರ್ವಾಣ ದಿನ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 69ನೇ ಮಹಾಪರಿ ನಿರ್ವಾಣ ದಿನವನ್ನು ಶನಿವಾರ ಆಚರಿಸಲಾಯಿತು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಹಂಗಿಗೂ ಒಳಗಾಗದ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಮಾತು ಕೃತಿ ಭಾಷಣಗಳಿಂದ ಸೂರ್ಯನ ಕಿರಣಗಳಿಗಿಂತಲೂ ಪ್ರಖರವಾಗಿದ್ದು. ಅವರು ಅಂದು ನಡೆದ ಬಂದಂತ ಕಲ್ಲು ಮುಳ್ಳಿನ ದಾರಿ ಇಂದು ನಮಗೆಲ್ಲ ರಾಜ್ಯಮಾರ್ಗವಾಗಿದೆ. ಬಾಬಾ ಸಾಹೇಬ ಅಂಬೇಡ್ಕರ ಅವರು 1939…

Read More

ಸರ್ಕಾರಿ ಮೆಡಿಕಲ್‌ ಕಾಲೇಜು: ಹೋರಾಟಗಾರರ ಜೊತೆ ಸಭೆ ನಿಗದಿಗೆ ಸಿಎಂಗೆ ಸಚಿವ ಶಿವಾನಂದ ಪಾಟೀಲ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6 : ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಗೆ ಬದಲಾಗಿ ಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಸೆಪ್ಟೆಂಬರ್‌ 18 ರಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಬೇಡಿಕೆ ಆಲಿಸಿ, ಚರ್ಚಿಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಜವಳಿ,‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಶಿವಾನಂದ…

Read More

ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಡಿಜಿಟಲೀಕರಣ ವೇಗವಾಗಿ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ ಸೈಬರ್ ಅಪರಾಧಗಳೂ ಆತಂಕಕಾರಿ ಮಟ್ಟಕ್ಕೆ ಏರಿದ್ದು, ಅದಕ್ಕೆ ಬಲಿಯಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಯುಜಿ ಬ್ಲಾಕ್ ಹಾಗೂ ಪ್ರಧಾನಮಂತ್ರಿ ಉಚ್ಛತರ…

Read More

ಕೃಷಿ ಕಾಯಕಯೋಗಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಕೃಷಿಯಲ್ಲಿ ವಿಶಿಷ್ಟ ಸಾಧನೆ ಅದರಲ್ಲೂ ಸಾವಯವ, ಸುಸ್ಥಿರ, ಶೂನ್ಯಬಂಡವಾಳ, ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವದರ ಜೊತೆಗೆ ಇತರೆ ರೈತರಿಗೂ ತಮ್ಮ ಸಾಧನೆಯನ್ನು ತಿಳಿಸಿಕೊಡುತ್ತ ಅವರನ್ನು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸುವಂತೆ ಪ್ರೆರೇಪಿಸುತ್ತಿರುವ ವಿಜಯಪುರ ಜಿಲ್ಲೆಯ ಅರ್ಹ ರೈತರಿಂದ ವಿಜಯಪುರ ತಾಲೂಕಿನ ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಶಿಕ್ಷಣ ಸೇವಾ ಸಂಸ್ಥೆಯ ವತಿಯಿಂದ ಅರ್ಜಿಯನ್ನು ಆವ್ಹಾನಿಸಲಾಗಿದೆ.ಡಿ. ೧೩ ರಂದು ಜರುಗುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೃಷಿ ಕಾಯಕಯೋಗಿ ಪ್ರಶಸ್ತಿ ಜೊತೆಗೆ ರೂ. ೨೫,೦೦೦ ನಗದು…

Read More

ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ಶ್ರೀ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ ೫೦ ವಸಂತಗಳ ಸಂಭ್ರಮ. ಅದರಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರುತ್ತಿವೆ.ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಶ್ರೀಮಠಕ್ಕೆ ಭೇಟಿ ನೀಡಿ ರಾಯರ ಪವಿತ್ರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡಿದರು. ನಂತರ ಫಲ-ಪುಷ್ಪಗಳನ್ನು ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಂಸ್ಥಾನ ಪೂಜೆಯನ್ನು ನೆರವೇರಿಸಿದರು. ನಂತರ ಭಕ್ತಾದಿಗಳಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದರು.ಇದಕ್ಕೂ ಮುನ್ನ ಧರ್ಮ ಬೋಧನೆ ಸಂದೇಶ…

Read More