ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನ
ಸಪ್ತಸಾಗರ ವಾರ್ತೆ ವಿಜಯಪುರ, ನ. 25:ಮಹಿಳೆಯರ ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ವಿರೋಧಿಸಿ ರಾಜ್ಯದ ಎಲ್ಲೆಡೆಯಂತೆ ಮಂಗಳವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಉದ್ದೇಶಿಸಿ ಎಐಎಮ್‌ಎಸ್‌ಎಸ್ ನ ಜಿಲ್ಲಾಧ್ಯಕ್ಷೆ ಗೀತಾ ಎಚ್. ಮಾತನಾಡಿ, ಮಹಳೆಯರು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ಗೈದಿದ್ದಾರೆ. ೨೦೨೪ ಇಸ್ರೋದ ನ್ಯನೊ ಉಪಗ್ರಹ ವನ್ನು ಅಭಿವೃದ್ಧಿ ಪಡಿಸಿದರು. ೨೦೨೫ ರ ವಿಶ್ವಕಪ್ ಕ್ರಿಕೆಟ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಪುರುಷ ಪ್ರಾಬಲ್ಯಕ್ಕೆ ಸೆಡ್ಡು ಹೊಡೆದು ಭಾರತದ ಇತಿಹಾಸಕ್ಕೆ…


