66 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಶಾಲಾ ಮಕ್ಕಳು ಬೆಂಬಲ

ಸಪ್ತ ಸಾಗರ ವಾರ್ತೆ, ವಿಜಯಪುರ, ನ. 22:ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿಗೆ ಆಗ್ರಹಿಸಿ ಹೋರಾಟ ಸಮಿತಿಯ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಬಸವನ ಬಾಗೇವಾಡಿ ಮತಕ್ಷೇತ್ರದ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ ಎ. ಎಂ. ಪಾಟೀಲ ಅವರು ಮಾತನಾಡಿ, ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬಡ ಮಕ್ಕಳಿಗಾಗಿ,ಕೃಷಿ ಕಾರ್ಮಿಕರ ಮಕ್ಕಳು…

Read More

39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಹಾನುಭೂತಿ ಒಗ್ಗೂಡಿ ಸಾಗಬೇಕು ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ…

Read More

ಕನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ತಾಲೂಕಿನ ಕನ್ನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕನ್ನೂರ ಗ್ರಾಮ ಪಂಚಾಯಿತಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷ ವಿಠ್ಠಲ ಭಜಂತ್ರಿ ಮಾತನಾಡಿ, ವಿಜಯಪುರ ತಾಲೂಕಿನ ಕನ್ನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕನ್ನೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪರೇಷನ್ ಥೇಟರ್ ಸಲಕರಣೆಗಳಿದ್ದು, ಅದರ ತಂಕ್ಕಂತೆ ಟೆಕ್‌ನಿಷನ್‌ಗಳಿಲ್ಲ, ಲ್ಯಾಬರೊಟರಿ ಇದ್ದು…

Read More

ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು-ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಮುಸ್ಸಂಜೆ ತಿಕೋಟಾ ತಾಲೂಕಿನ‌ ಸೋಮದೇವರಹಟ್ಟಿ ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿ.ಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಿಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ…

Read More

ರಸ್ತೆ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತುಸೂಕ್ತ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.21: ಮಾನವ ಜೀವ ಅತ್ಯಂತ ಅಮೂಲ್ಯವಾದದ್ದು. ಅಪಘಾತದಿಂದಾಗುವ ಜೀವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ತಿಳಿವಳಿಕೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು…

Read More

ವೃಕ್ಷಥಾನ್ ಹೆರಿಟೇಜ್ ರನ್- 20 ಸಾವಿರ ದಾಖಲೆಯ ಓಟಗಾರ ನೋಂದಣಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವೃಕ್ಷಥಾನ್ ಹೆರಿಟೇಜ್ ರನ್ ಆರನೇ ಆವೃತಿಯಲ್ಲಿ ಈ ಬಾರಿ 20 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿ ಮತ್ತು ಚೆನೈ ಮಹಾನಗರಗಳನ್ನು ಹೊರತು ಪಡಿಸಿದರೆ, ವಿಜಯಪುರದಂತಹ ಟೈರ್-3 ನಗರದಲ್ಲಿ ನಡೆಯುವ ಮ್ಯಾರಥಾನ್ ನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಓಟಗಾರರು ಭಾಗವಹಿಸುತ್ತಿರುವುದು ಇತಿಹಾಸ ಸೃಷ್ಟಿಸಲಿದೆ ಎಂದು ಕೋಟಿ ವೃಕ್ಷ ಅಭಿಯಾನ ಪ್ರತಿಷ್ಠಾನ ತಿಳಿಸಿದೆ.ಒಂದು ಸಾಮಾಜಿಕ ಉದ್ದೇಶಕ್ಕಾಗಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಒಂದಡೆ ಸೇರಿ ಓಟದ ಮೂಲಕ ವಿಜಯಪುರದ…

Read More

ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯ: ಸಚಿವ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡಲು ಸಿ.ಎಸ್.ಆರ್ ಅನುದಾನಡಿ ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆ ಪ್ರಾರಂಭೋತ್ಸವದ ಅಂಗವಾಗಿ 9ನೇ ತರಗತಿ ಉದ್ಘಾಟನೆ, ಸರಸ್ವತಿ ಪೂಜೆ ಹಾಗೂ ಸಿ.ಎಸ್.ಆರ್ ಅನುದಾನದಲ್ಲಿ ಶಾಲಾ ಮಕ್ಕಳಿಗಾಗಿ ಅಳವಡಿಸಿರುವ ಕ್ರೀಡಾ ಸಲಕರಣೆಗಖನ್ನು ವಿದ್ಯಾರ್ಥಿಗಳಿಂದ ಉದ್ಘಾಟಿಸಿದ…

Read More

ವೃಕ್ಷಥಾನ್ ಹೆರಿಟೇಜ್ ರನ್: ಮಕ್ಕಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 21: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ನವೆಂಬರ್ 23 ರಂದು ರವಿವಾರ ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.ರವಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಗಗನ ಮಹಲ ಉದ್ಯಾನದಲ್ಲಿ ಈ ಸ್ಪರ್ಧೆ ನಡೆಯಲಿದೆ. ಪ್ರಾಥಮಿಕ, ಹೈಸ್ಕೂಲು ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮೂರು ಪ್ರತ್ಯೇಕ ವಿಭಾಗಗಳಲ್ಲಿ ನಿಬಂಧ ಸ್ಪರ್ಧೆ ಆಯೋಜಿಸಲಾಗಿದೆ.ಬ್ರಿಟಿಷರ ಕಾಲದಿಂದಲೂ ಬರದ ಜಿಲ್ಲೆ ಎಂದು ಹೆಸರಾಗಿದ್ದ ವಿಜಯಪುರದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ. ನೀರಾವರಿ, ಕೋಟಿ…

Read More

ಶ್ರೀಲಂಕಾದಲ್ಲಿ ವಿಜಯಪುರದ ನಾಟ್ಯಕಲಾ ನೃತ್ಯ ಅಕಾಡೆಮಿ ತಂಡದ ನೃತ್ಯ ಪ್ರದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ನ.೨೦: ಇಲ್ಲಿಯ ನಾಟ್ಯಕಲಾ ನೃತ್ಯ ಅಕಾಡೆಮಿ ತಂಡ ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದೆ.ನವೆಂಬರ್ ೧೫ರಿಂದ ೧೮ ರ ವರೆಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ನೃತ್ಯ ಸಮರ್ಪಣ- ೨೦೨೫ ಉತ್ಸವದಲ್ಲಿ ತಂಡದ ಸದಸ್ಯರು ರೋಮಾಂಚನಕಾರಿ ನೃತ್ಯ ಪ್ರದರ್ಶನ ನೀಡಿದರು.ತಂಡದ ಸದಸ್ಯೆ ಸಾನ್ವಿ ದೊಡಮನಿ ಅವರು ನೀಡಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಸನ್‌ಫೊ ಗ್ಲೋಬಲ್ ಫೆಡರೇಶನ್ ಸಸ್ಟೇನಬಿಲಿಟಿ ಕಲ್ಚರಲ್ ಡಿಪ್ಲೊಮಸಿ ಪ್ರಶಸ್ತಿ (ಯುನೈಟೆಡ್ ರಿಪಬ್ಲಿಕ್ ಆಫ್ ಇಂಡಿಯಾ ಮತ್ತು ಡೆಮಾಕ್ರಟಿಕ್ ಸೋಷಿಯಲಿಸ್ಟ್…

Read More

ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಭುವನೇಶ್ವರಿ ಮಠಪತಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ನ. 20:ನಗರದ ಭುವನೇಶ್ವರಿ ದಾನಯ್ಯ ಮಠಪತಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮಿಜಾ ನದಾಫ ಅವರು ತಕ್ಷಣ ಜಾರಿಗೆ ಬರುವಂತೆ ಈ ನೇಮಕ ಮಾಡಿ ಆದೇಶಿಸಿದ್ದಾರೆ.

Read More