ಫೆ.10ರಂದು ಕಾಯಕ ಶರಣರ ಜಯಂತಿ
ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಫೆ.10ರ ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10:30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು…


