ಏ. 21ರಂದು ಅಕ್ಕಮಹಾದೇವಿ ವಿವಿಯ 17 ನೇ ಘಟಿಕೋತ್ಸವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ
ಸಪ್ತಸಾಗರ ವಾರ್ತೆ,ವಿಜಯಪುರ ಏ, 20: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ಘಟಿಕೋತ್ಸವ ಏ. 21ರಂದು ಮಂಗಳವಾರ ಬೆಳಿಗ್ಗೆ 11.30ಕ್ಕೆ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾಂಗಣದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದಾರೆ ಎಂದು ಕುಲಪತಿ ಡಾ. ವಿಜಯಾ ಕೋರಿಶೆಟ್ಟಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಅತಿಥಿಗಳಾಗಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಉಜ್ವಲಾ ಚಕ್ರದೇವ್ ಅವರು ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ…


