ಮಹಿಳೆಯಿಂದ ಯುವಕನ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 17:ಮಹಿಳೆಯೊಬ್ಬಳು ಯುವಕನನ್ನು ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ನಗರದ ಜುಮ್ಮಾ ಮಸೀದಿ ಬಳಿಯ ಅಮನ್ ಕಾಲೋನಿಯಲ್ಲಿ ನಡೆದಿದೆ.ಸಮೀರ್ ಉರ್ಫ ಪಿಕೆ ಇನಾಂದಾರ್ (26) ಕೊಲೆಯಾದ ಯುವಕ.ಲೀವಿಂಗ್ ರಿಲೇಷನ್ ನಲ್ಲಿದ್ದ ಮಹಿಳೆಯಿಂದ ಪ್ರಿಯಕರನ‌ ಕೊಲೆ ನಡೆದಿದ್ದು, ಸಹೋದರನ‌ ಸಹಾಯದಿಂದ ಲೀವಿಂಗ್ ರಿಲೇಷನ್ ನಲ್ಲಿದ್ದ ವ್ಯಕ್ತಿಯ ಕೊಲೆಯಾಗಿದೆ. ತಯ್ಯಬಾ ಬಾಗವಾನ್ ಎಂಬ ಮಹಿಳೆಯಿಂದ ಈ ಕೃತ್ಯ ನಡೆದಿದೆ.ತಯ್ಯಾಬಾ ಸಹೋದರಅಸ್ಲಮ್ ಬಾಗವಾನ್ ಸಹಾಯದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.ಸಮೀರ್ ನ ಕಿರುಕುಳದಿಂದ ಬೇಸತ್ತು ಮಹಿಳೆ…

Read More

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ…

Read More

ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡ ಶುಕ್ರವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಬಾಗಲಕೋಟೆ ಜಿಲ್ಲೆಯ ಇಳಕಲ ನಗರದ ಎಸ್. ವಿ. ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಈರಪ್ಪ ಇಕ್ಕಳಕಿ ಅವರ…

Read More

ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ವಿಶ್ವ ಮಧುಮೇಹ ರೋಗ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜಿನ ನಗರ…

Read More

ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ಭಾನುವಾರ ನಗರದ ಪ್ರಾಚೀನ ಸ್ಮಾರಕ ಗಗನ ಮಹಲ್ ಆವರಣದಲ್ಲಿ ನಡೆಯಿತು.ಪ್ರಾಥಮಿಕ ವಿಭಾಗ, ಹೈಸ್ಕೂಲು ವಿಭಾಗ ಹಾಗೂ ಪಿಯು ಕಾಲೇಜು ವಿಭಾಗ ಒಟ್ಟು ಮೂರು ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.ಹೆರಿಟೇಜ್ ರನ್ 21 ಕಿ. ಮೀ….

Read More

ಪುಸ್ತಕಗಳೆಂದರೆ ಹುಟ್ಟಲಿರುವ ಜನಾಂಗದ ಆಸ್ತಿ: ಶಂಕರ ಬೈಚಬಾಳ ಅಭಿಮತ

ಸಪ್ತ ಸಾಗರ ವಾರ್ತೆ, ವಿಜಯಪುರ, ನ. 15: ಲೇಖಕ, ಪುಸ್ತಕ, ಪ್ರಕಾಶಕ ಹಾಗೂ ಓದುಗರ ನಡುವೆ ಅವಿನಾಭಾವ ಸಂಬಂಧವಿದೆ. ಈ ನಾಲ್ಕು ಪ್ರಮುಖರನ್ನು ಒಂದೇ ಕಡೆ ಸೇರಿಸುವ ಮೂಲಕ ಕನ್ನಡ ಪುಸ್ತಕ ಪರಿಷತ್ತು ಆಗಾಗ್ಗೆ ತನ್ನ ಪುಸ್ತಕ ಪ್ರಿಯ ಕನ್ನಡದ ಕೆಲಸ ಮಾಡುತ್ತಲೆ ಇದೆ. ಪುಸ್ತಕೋದ್ಯಮ ಈಗ ಸವಾಲುಗಳನ್ನು ಎದುರಿಸುತ್ತಲಿದೆ. ಪುಸ್ತಕಗಳೆಂದರೆ ಹುಟ್ಟಲಿರುವ ಜನಾಂಗದ ಆಸ್ತಿ ಎಂದು ಸಾಹಿತಿ ಶಂಕರ ಬೈಚಬಾಳ ಹೇಳಿದರು.ನಗರದ ಪ್ರಗತಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆದ ಕನ್ನಡ ಪುಸ್ತಕ ಪರಿಷತ್ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ…

Read More

ಬಿಹಾರ್ ನಲ್ಲಿ ಎನ್ ಡಿ ಎ ಜಯಭೇರಿ: ಬಿಜೆಪಿ ವಿಜಯೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ಬಿಹಾರಿನಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಸಂಭ್ರಮೋತ್ಸವದಲ್ಲಿ ಭಾಗಿಯಾದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಸಂಭ್ರಮದಲ್ಲಿ ಮಿಂದೆದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಬಿಜೆಪಿಯ ಜನಪರ ನಿಲುವಿಗೆ ಬಿಹಾರ ಜನತೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಬಿಹಾರ ಸರ್ವತೋಮುಖ ವಿಕಾಸವನ್ನು ಕೇಂದ್ರವಾಗಿರಿಸಿಕೊಂಡು ಚುನಾವಣೆ ಎದುರಿಸಿದ್ದ…

Read More

ಯುವಶಕ್ತಿಯೇ ದೇಶದ ಅಮೂಲ್ಯ ಸಂಪನ್ಮೂಲ – ಡಾ. ಜಾವೀದ ಜಮಾದಾರ

ಸಪ್ತ ಸಾಗರ ವಾರ್ತೆ, ವಿಜಯಪುರ,ನ. 15: ಪ್ರತಿಯೊಬ್ಬ ಭಾರತೀಯನು ನಮ್ಮ ರಾಷ್ಟ್ರವನ್ನು ಬಲಿಷ್ಟ ಮತ್ತು ಸಮರ್ಥಗೊಳಿಸಲು ಕೆಲಸ ಮಾಡಬೇಕು. ಒಂದು ಶಕ್ತಿಶಾಲಿ ರಾಷ್ಟ್ರಕ್ಕಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕಾಗಿದೆ ಎಂದು ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಕರೆ ನೀಡಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಮಂತ್ರಾಲಯ ಎನ್.ಎಸ್.ಎಸ್. ಕೇಂದ್ರ ಸಂವನ ಇಲಾಖೆ, ಮೆರಾ ಭಾರತ ಕೇಂದ್ರ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ…

Read More

ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಕುದಾಪುರ ಪ್ರಕಟಿಸಿದರು.ಶನಿವಾರ ನಡೆದ ಸಭೆಯಲ್ಲಿ ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ,ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ,ಮೋನೇಶ ಪತ್ತಾರ, ಸತೀಶ ಶಿಂತ್ರೆ,ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ),ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ ),…

Read More

ವಚನ ಸಾಹಿತ್ಯ ಅನುವಾದಕ್ಕೆ 5 ಕೋಟಿ ನೆರವು: ಸಚಿವ ಎಂ.ಬಿ. ಪಾಟೀಲ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 15: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ….

Read More