ಆಲಮಟ್ಟಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…

Read More

ಬಸವರಾಜ ಬಾಗೇವಾಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…

Read More

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ- ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 5 :ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ” ದಲ್ಲಿ ಮಾತನಾಡಿದರು.ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ…

Read More

ಎಂಬಿಬಿಎಸ್ ಕೋರ್ಸಿಗೆ ಹೆಚ್ಚುವರಿ 50 ಸೀಟು ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 5: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರಕ್ಕೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಂ.ಬಿ.ಬಿ.ಎಸ್ ಕೋರ್ಸಿಗೆ 50 ಹೆಚ್ಚುವರಿ ಸೀಟುಗಳು ಮಂಜೂರಾಗಿವೆ. ಇದರಿಂದಾಗಿ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನಲ್ಲಿ ಈ ಬಾರಿ ಒಟ್ಟು 250 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಸಿಗಲಿದೆ.ಕಾಲೇಜು ಈ ವರ್ಷದ ಜನೇವರಿಯಲ್ಲಿ ಹೆಚ್ಚುವರಿ ಸೀಟು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಅದರಂತೆ ಜೂನ್ 2025ರಲ್ಲಿ ನ್ಯಾಶನಲ್…

Read More

ರಮಾಬಾಯಿ ಪ್ರೌಢಶಾಲೆಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆ, ಸಿದ್ದಾರ್ಥ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜಿನಲ್ಲಿ ಶುಕ್ರವಾರ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಜ್ಯೋತಿಬಾಪುಲೆ ಶಿಕ್ಷಕ ದಿನವನ್ನು ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ತುಕಾರಾಂ ಚಂಚಲಕರ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಚಂಚಲಕರ ಅವರು ಮಾತನಾಡಿ, ಆಗಿನ ಕಾಲಘಟ್ಟದಲ್ಲಿ ಶಿಕ್ಷಣದ ಕೊರತೆ ಇದ್ದುದರಿಂದ ಬಹಳ ಪ್ರಯತ್ನಪಟ್ಟು ಮಾತೆ ಸಾವಿತ್ರಿಬಾಯಿ…

Read More

ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5:ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ…

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸೋಲಾಪುರ ಸ್ವಾಗತ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ಧಟತನ ಒಂದು ಕಡೆ. ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು…

Read More

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ…

Read More