ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲೆಗೆ ನೀಡಿದ ಕೊಡುಗೆ ಅಪಾರ -ಡಾ.ಔದ್ರಾಮ್
ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್…


