ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿವಿಶ್ವ ತಾಯಂದಿರ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ಇಲ್ಲಿನ ಜಲನಗರದಲ್ಲಿರುವ ಬಿಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೇಕರ್ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರ ಬದುಕಿನ ಯಶಸ್ಸಿನ ಹಿಂದೆ ತಾಯಿಯ ಆಶೀರ್ವಾದ, ಪ್ರೋತ್ಸಾಹ, ಪರಿಶ್ರಮ ಮತ್ತು ತ್ಯಾಗದ ಮಹತ್ವದ ಪಾತ್ರವಿದೆ. ತಾಯಿಯನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.ಕಾರ್ಯಕ್ರಮದ ಅಂಗವಾಗಿ ತಾಯಂದಿರಿಗಾಗಿ ವಿವಿಧ ಮನರಂಜನಾ ಸ್ಪರ್ಧೆಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ…

Read More

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ವಂಚನೆ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು

8 ಆರೋಪಿಗಳ ಬಂಧನ – ₹11.32 ಕೋಟಿ ಹಣ ವಶ, ಬ್ಯಾಂಕ್ ಖಾತೆಗಳು ಫ್ರೀಜ್ ಸಪ್ತಸಾಗರ ವಾರ್ತೆ,ವಿಜಯಪುರ, ಜೂ.30:ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ತೂಕದಲ್ಲಿ ಬೋಗಸ್ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ದುರುಪಯೋಗ ಮಾಡಿದ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, 8 ಆರೋಪಿಗಳನ್ನು ಬಂಧಿಸಿ ₹11.32 ಕೋಟಿ ಮೊತ್ತವನ್ನು ವಶಪಡಿಸಿಕೊಂಡಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಜೂನ್ 12ರಂದು ದಾಖಲಾದ ಪ್ರಕರಣದ ತನಿಖೆಯಲ್ಲಿ, 2020-21ರಿಂದ 2025-26ರವರೆಗೆ ಆರು…

Read More

ಗ್ರಾಮೀಣ ಉದ್ಯೋಗ, ಜೀವನೋಪಾಯ ಅಭಿವೃದ್ಧಿ ಹಾಗೂ ಶಾಶ್ವತ ಆಸ್ತಿ ನಿರ್ಮಾಣಕ್ಕೆ ಆದ್ಯತೆ : ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29: ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯೋಜನೆಯ ಉದ್ದೇಶ, ಮಾರ್ಗಸೂಚಿಗಳು ಹಾಗೂ ಅನುಷ್ಠಾನ ಪ್ರಕ್ರಿಯೆಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಜಿಲ್ಲಾ ಪಂಚಾಯಿತಿ ವತಿಯಿಂದ ವಿಬಿ-ಜಿ ರಾಮ್ ಜಿ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ…

Read More

ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 29 :ವಿಶೇಷ ಚೇತನ ಮಕ್ಕಳ ಆರೋಗ್ಯ ಹಿತರಕ್ಷಣೆ ಹಾಗೂ ಶೈಕ್ಷಣಿಕ ಕಳಕಳಿಗೆ ಬಿ.ಎಲ್.ಡಿ.ಇ ಸಂಸ್ಥೆ ಮಾನವೀಯ ಕಳಕಳಿಯ ಹೆಜ್ಜೆ ಇರಿಸಿದ್ದು ವಿಶೇಷ ಚೇತನ ಮಕ್ಕಳಿಗೆ ಸಮನ್ವಯ ಶಿಕ್ಷಣವನ್ನು ನೀಡಲು ಸುಸಜ್ಜಿತ ತರಬೇತಿ ಕೇಂದ್ರ ಹಾಗೂ ವಿಶೇಷ ಶಾಲೆ ಸ್ಥಾಪಿಸುವ ಉದ್ದೇಶದಿಂದ ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹಾಗೂ ಸಮನ್ವಯ ಟ್ರಸ್ಟ್‌ ಪ್ರಮುಖರ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಪರಸ್ಪರ…

Read More

ಸಂಸದ ರಮೇಶ ಜಿಗಜಿಣಗಿ ವಿರುದ್ಧ ಸುಳ್ಳು ಆರೋಪ ಬೇಡ: ವಿವೇಕಾನಂದ ಡಬ್ಬಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಸಾತ್ವಿಕ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವ ಪ್ರಯತ್ನವನ್ನು ವಿರೋಧಿಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ಧಿಗೆ ಲಕ್ಷ ಕೋಟಿ ರೂ.ಗೂ ಅಧಿಕ ಅನುದಾನ ತಂದು ರೈಲ್ವೆ ಓವರ್‌ಬ್ರಿಡ್ಜ್, ವಿಮಾನ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ವಿಜಯಪುರ–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ…

Read More

ಪ್ರೊ. ರೇವಣಸಿದ್ದ ಮೇತ್ರಿಯವರಿಗೆ ಪಿ.ಎಚ್. ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ.ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಗಣಿತ ವಿಭಾಗದ ಅಧ್ಯಾಪಕ ಪ್ರೊ. ರೇವಣಸಿದ್ದ ಶಂಕ್ರೆಪ್ಪ ಮೇತ್ರಿ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ” ಎಫೆಕ್ಟ್ ಆಪ್ ಪೊರಾಸಿಟಿ ಆನ್ ಪೆರಿಸ್ಟಾಲ್ಟಿಕ್ ಪ್ಲೊ ಆಪ್ ನಾನ್ – ನ್ಯೂಟೋನಿಯನ್ ಪ್ಲುಡ್ ಮಾಡೆಲ್.’” ಎಂಬ ಶೀರ್ಷಿಕೆಯ ಅವರ ಪ್ರಬಂಧವನ್ನು ಗಣಿತ ವಿಭಾಗದ ಪ್ರಾಧ್ಯಾಪಕ ಡಾ. ಗುರುನಾಥ ಸಂಕದ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲಾಯಿತು.ಪ್ರಾಂಶುಪಾಲರಾದ ಡಾ. ಮಂಜುನಾಥ…

Read More

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 2026-27ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ ಬಿಪಿ) ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳನ್ನು ಮೆರೆದ ಮಕ್ಕಳಿಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.18 ವರ್ಷದೊಳಗಿನ ಅರ್ಹ ಮಕ್ಕಳು ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಹಾಗೂ…

Read More

ಬಿಸಿ ಊಟಕ್ಕೆ ಎಣ್ಣೆ, ತೊಗರಿ ಬೇಳೆ ವಿತರಿಸಿ: ಸಿಇಒಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 28: ಅಕ್ಷರ ದಾಸೋಹ ಯೋಜನೆಯಡಿಶಾಲೆಗಳಲ್ಲಿ ಮಧ್ಯಾಹ್ನ ಬಿಸಿ ಊಟಕ್ಕೆ ಮಕ್ಕಳಿಗೆ ಎಣ್ಣೆ, ತೊಗರಿ ಬೇಳೆ ವಿತರಿಸಬೇಕು. ಮೊಟ್ಟೆಗಳ ಖರೀದಿಮೊತ್ತ ಹೆಚ್ಚಳವಾಗಿದ್ದು, ದರ ಮರುನಿಗದಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದಅವರಿಗೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ, ಶೈಕ್ಷಣಿಕ ವರ್ಷ ಆರಂಭವಾಗಿ ಜೂನ ತಿಂಗಳು ಮುಗಿಯುತ್ತಾ ಬಂದರೂ ಶಾಲೆಗಳಿಗೆ ಬೇಳೆ ಹಾಗೂ ಎಣ್ಣೆಪೂರೈಕೆಯಾಗಿಲ್ಲ. ಮುಖ್ಯಗುರುಗಳು ಬೇಳೆ ಹಾಗೂ ಎಣ್ಣೆ…

Read More

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026:ಜೂನ್ 30 ರಿಂದ ಮನೆ-ಮನೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.28:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 30 ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ ಎಂದು ವಿಜಯಪುರ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಆನಂದ ಕೆ ಅವರು ತಿಳಿಸಿದ್ದಾರೆ.ಜೂ.30 ರಿಂದ ಜು. 29 ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಅವರು ಜಿಲ್ಲೆಯ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಎನ್ಯೂಮರೇಷನ್ ಫಾರ್ಮ್ ಗಳನ್ನು…

Read More