ಡಾ.ಸುಜಾತಾ ಚಲವಾದಿ ಸ್ವಾಭಿಮಾನಿಪುಸ್ತಕ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9 :ಸ್ವಾಭಿಮಾನಿ ಕರ್ನಾಟಕ ವೇದಿಕೆಯುಡಾ. ಸುಜಾತಾ.ಚಲವಾದಿ ಸೇರಿದಂತೆ ಹಲವರಿಗೆ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಯನ್ನು ಪ್ರಕಟಿಸಿದೆ.ಡಾ. ಸಿ. ಸೋಮಶೇಖರ್ಸರ್ವಮಂಗಳ ದತ್ತಿ ಪ್ರಶಸ್ತಿಗೆ ಡಾ. ಸುಜಾತಾ ಚಲವಾದಿ ಅವರ‘ಮನುಷ್ಯ ಮತ್ತು ಪ್ರೀತಿ’ ಪ್ರಬಂಧ ಸಂಕಲನವನ್ನು ಆಯ್ಕೆಮಾಡಲಾಗಿದೆ.ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷಡಾ. ಆರ್.ಸುನಂದಮ್ಮ, ವೇದಿಕೆಯ ಅಧ್ಯಕ್ಷ ಡಾ. ದ್ವಾರನಕುಂಟೆಪಾತಣ್ಣ ಹಾಗೂ ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷಎಚ್.ಆರ್ ಸುಜಾತ ಅವರ ನೇತೃತ್ವದ ಸಮಿತಿಯುಪುರಸ್ಕೃತರನ್ನು ಆಯ್ಕೆ ಮಾಡಿದೆ. ಜೂ.13ರಂದು ಸಂಜೆ 5ಗಂಟೆಗೆ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರೊ. ಎಸ್.ಜಿ.ಸಿದ್ದರಾಮಯ್ಯಅವರು…

Read More

ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡಿ: ಪೂಜಾರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 9:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಜನರು ಬೇಷರತ್ತಾಗಿ, ಇಡೀ ಒಂದು ವರ್ಗವಾಗಿ ಮತ ನೀಡಿರುವುದೇ ಮುಖ್ಯ ಕಾರಣ. ಇದರಿಂದಾಗಿ ರಾಜ್ಯದಲ್ಲಿ ಸ್ಪಷ್ಟ ಬಹುಮತದ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಸಾಧ್ಯವಾಗಿದೆ. ಆದರೆ, ವಿಜಯಪುರ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಈ ಸಮುದಾಯವು ರಾಜಕೀಯ ಅಧಿಕಾರದ ಅಸ್ಪೃಶ್ಯತೆಯನ್ನು ಅನುಭವಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ವಿಧಾನಪರಿಷತ್ ಸ್ಥಾನಗಳ ಆಯ್ಕೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ಹಾಗೂ ಅವಕಾಶ ಮಾಡಿಕೊಡಬೇಕು ಎಂದು…

Read More

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಿ. ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.9:ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಆರೋಗ್ಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ ಐಆರ್) ಕುರಿತು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮತದಾರರ ಪಟ್ಟಿ…

Read More

ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 9: ಮೊಬೈಲ್ ಒಂದು ಸಂವಹನ ಸಾಧನ, ಆದರೆ ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ.’ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಇದು ಘೋಷಣೆ ಅಷ್ಟೇ ಅಲ್ಲ. ಬದಲಿಗೆ ಇಂದಿನ ಮಕ್ಕಳನ್ನು ರಕ್ಷಿಸುವ ಜೀವನಾಡಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್‌ ಜಗತ್ತಿನಿಂದ ಹೊರಬಂದು, ನೈಜ ಜ್ಞಾನದ ಮೂಲವಾದ ಪುಸ್ತಕವನ್ನು ಹಿಡಿದಾಗ ಮಾತ್ರ…

Read More

ವಿಜಯಪುರದಲ್ಲಿ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶಕ್ಕೆ ಬ್ಯಾನರ್ ಅನಾವರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 8:ಸಮಸ್ತ ಬ್ರಾಹ್ಮಣ ಸಂಘಟನೆಗಳು ತಾಲೂಕು ಹಾಗೂ ಜಿಲ್ಲಾ ಘಟಕಗಳ ಸಹಕಾರದೊಂದಿಗೆ, ಶ್ರೀ ಚಿದಂಬರ ಸೇವಾ ಸಮಿತಿ ಮತ್ತು ಮಂಗಳಸೂತ್ರ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀ ಚಿದಂಬರೇಶ್ವರ ಸಾಂಸ್ಕೃತಿಕ ಭವನ, ರಿಂಗ್ ರೋಡ್, ಮನಗೂಳಿ ರಸ್ತೆಯಲ್ಲಿನಡೆಯಲಿರುವ 68ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರ ಅನ್ವೇಷಣಾ ಸಮಾವೇಶದ ಬ್ಯಾನರ್ ಅನ್ನು ಅನಾವರಣಗೊಳಿಸಲಾಯಿತು.ಈ ಸಮಾವೇಶವು ಜು. 11 ಮತ್ತು 12 ರಂದು ಎರಡು ದಿನಗಳ ಕಾಲ ನಡೆಯಲಿದೆ. ಜೊತೆಗೆ, ಕಲ್ಯಾಣ ಪ್ರಾಪ್ತಿಗಾಗಿ…

Read More

ಸಚಿವ ಎಂ. ಬಿ. ಪಾಟೀಲ ಟೆಂಪಲ್ ರನ್

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 8:ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಾನಾ ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಸಲ್ಲಿಸಿದರು.ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಅವರು, ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡದಲ್ಲಿರುವ ಶ್ರೀ ಅಮೋಘಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೋಘಸಿದ್ಧೇಶ್ವರ ದೇವಸ್ಥಾನ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ…

Read More

ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ- ಸಚಿವ ಯತೀಂದ್ರ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 8:ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಳರ್ 301ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಹಲ್ಯಾಬಾಯಿ ಹೋಳ್ಕರ ಶ್ರೇಷ್ಠ ಮಹಿಳೆ. ಅಪ್ರತಿಮ ಹೋರಾಟಗಾರ್ತಿ. ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದರು ಎಂದರು.ಸಮಾಜದ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ. ಹೀಗಾಗಿ ನಾವು ನಮ್ಮ…

Read More

ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ: ಯತೀಂದ್ರ ವಾಗ್ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 7:ಗೃಹಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ನಗರಾಭಿವೃದ್ಧಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಬಿಜೆಪಿ ಯಾವಾಗಲೂ ಜನವಿರೋಧಿ ನೀತಿಯನ್ನು ಅನುಸರಿಸುತ್ತ ಬಂದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದಾಗಲೂ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲಿಲ್ಲ. ಇದೀಗ ಕಚ್ಚಾ…

Read More

ವಿಶ್ವ ಪರಿಸರ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 6:ನಗರದ ಚಿದಂಬರೇಶ್ವರ ದೇವಸ್ಥಾನ ಹತ್ತಿರ ವಿಶ್ವ ಪರಿಸರ ದಿನ ಅಂಗವಾಗಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯ ಸಂದೇಶ ಸಾರಲಾಯಿತು.ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಮಾತನಾಡಿ, ಪರಿಸರ ರಕ್ಷಿತ: ರಕ್ಷತ: ಎನ್ನುವಂತೆ ಪರಿಸರವನ್ನು ನಾವು ರಕ್ಷಿಸಿದರೆ, ಅದು ನಮ್ಮನ್ನು ರಕ್ಷಿಸುತ್ತದೆ. ಪರಿಸರ ನಮಗೆ ಪ್ರಾಣವಾಯು, ಆಹಾರ ಎಲ್ಲವೂ ನೀಡಿದೆ, ಆದರೆ ನಾವು ಪ್ರತಿಯಾಗಿ ಪರಿಸರವನ್ನು ವಿನಾಶ ಮಾಡುತ್ತಿದ್ದೇವೆ. ಮಾಲಿನ್ಯಗೊಳಿಸುತ್ತಿದ್ದೇವೆ. ಹೀಗಾಗಿ ಪರಿಸರ ರಕ್ಷಣೆ ನಮ್ಮ ಜೀವನದ ಭಾಗವಾಗಬೇಕು ಎಂದರು.ಯುವ ಧುರೀಣ ಪ್ರಕಾಶ…

Read More

ಲಂಚ: ಕೆ. ಬಿ. ಜೆ. ಎನ್. ಎಲ್ ಇಬ್ಬರು ಅಭಿಯಂತರರು ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 6:ಲಂಚ ಪಡೆಯುತ್ತಿದ್ದ ಕೆಬಿಜೆಎನ್ ಎಲ್ ಇಬ್ಬರು ಅಭಿಯಂತರರು ಸಾಲೋಟಗಿ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಸೇವಾಲಾಲ್ ಚೌವಾಣ, ಕಿರಿಯ ಅಭಿಯಂತರ ಸಾತಲಿಂಗಪ್ಪ ರೊಡಗಿ ಲೋಕಾಯುಕ್ತ ಬಲೆಗೆ ಬಿದ್ದ ಅಭಿಯಂತರರು.ಕೆಬಿಜೆಎನ್ಎಲ್ ಕೆನಾಲ್ ಕಾಮಗಾರಿ ಪೂರೈಸಿದ 3,71,419 ಮೊತ್ತದ ಬಿಲ್ ಪಾಸ್ ಮಾಡಿ ಮೇಲಾಧಿಕಾರಿ ಕಚೇರಿಗೆ ಕಳುಹಿಸಲು ಅಭಿಯಂತರ ಸೇವಾಲಾಲ್ 10,000 ರೂ. ಹಾಗೂ ಕಿರಿಯ ಅಭಿಯಂತರ ಸಾತಲಿಂಗಪ್ಪ ಅವರು 8,000 ರೂ. ಗಳ ಲಂಚದ ಬೇಡಿಕೆಯನ್ನು ಇಟ್ಟಿದ್ದರು.ನಾನಾಸಾಹೇಬ ರೋಡಗಿ…

Read More