ಜು. 28ರಂದು ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ ಕಾರ್ಯಕ್ರಮ

Bಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮ ಜು. 28ರಂದು ನಗರದ ರಾಘವೇಂದ್ರ ಕಾಲೋನಿ ಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿದೆ.ರೋಟರಿ ಸಂಸ್ಥೆ ವಿಜಯಪುರ ಉತ್ತರ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ಎಲ್ಲ ಮುದ್ದು ನಾಯಿ ಮಾಲೀಕರು…

Read More

ಪ್ರೊ. ಕೊಳಮಲಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಚೇತನಾ ಶಿಕ್ಷಣ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಾಹಿತಿ, ಕನ್ನಡದ ಪ್ರಾಧ್ಯಾಪಕ ಪ್ರೊ, ಎ. ಎಚ್. ಕೊಳಮಲಿಯವರಿಗೆ ಭಾರತೀಯ ಶಿಕ್ಷಣ ಮಂಡಲ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಇವರು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.ಕೊಳಮಲಿಯವರ ಶಿಕ್ಷಣ ಕ್ಷೇತ್ರದ ಸಾಧನೆ ಮತ್ತು ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.ಬಹುಮುಖ ಪ್ರತಿಭಾ ಸಂಪನ್ನರಾದ ಪ್ರೊ….

Read More

ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 20:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ ಜು. 23 ಹಾಗೂ ಎರಡು ದಿನಗಳವರೆಗೆ ಜರುಗುವದು.ಜು.23 ರ ರಾತ್ರಿ 8 ಗಂಟೆಗೆ ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ ದೇವರ ಫಲ್ಲಕ್ಕಿ ಆಗಮನವಾಗುವದು. ಚಿತ್ರ ವಿಚಿತ್ರ ಮದ್ದು ಸುಡುವದು. ಡೊಳ್ಳಿನ ಹಾಡಿಕೆ ಇರುವದು.ಜು.24 ರಂದು ಬೆಳಗಿನ ಜಾವ 4 ಗಂಟೆಗೆ ನಾಗಠಾಣ ಭೀರದೇವರ, ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ…

Read More

ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ: ಸಚಿವ ಎಂ.ಬಿ. ಪಾಟೀಲ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More

ನಂಜನಗೂಡು ಮಠದಲ್ಲಿ ಜಯತೀರ್ಥರ ಆರಾಧನೆ: ರಥೋತ್ಸವ, ವಿಶೇಷ ಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 16:ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಶ್ರೀ ಜಯತೀರ್ಥರ ಆರಾ ಧನೆಯನ್ನು ಅತ್ಯಂತ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.ತನ್ನಿಮಿತ್ತ ಬೆಳಿಗ್ಗೆ ಗುರುಸಾರ್ವಭೌಮರ ಅಷ್ಟೋತ್ತರ, ಸುಧಾ ಪಾರಾಯಣ, ಬಳಿಕ ವೃಂದಾವನಕ್ಕೆ ಫಲ ಪಂಚಾ ಮೃತ, ಅಲಂಕಾರ, ಮಹಾಪೂಜೆ ಜರುಗಿದವು. ಶ್ರೀ ಜಯತೀರ್ಥರ ಭಾವಚಿತ್ರಕ್ಕೆ ಹೂಮಾಲೆಗಳಿಂದ ಅಲಂಕರಿಸಿ ಶ್ರದ್ಧಾಭಕ್ತಿಯಿಂದ ನಮಿಸಲಾಯಿತು. ಆನಂತರ ಶ್ರೀ ಮಠದ ಒಳಾವರಣದಲ್ಲಿ ಟೀಕಾರಾಯರ ರಚಿಸಿದ ಗ್ರಂಥಗಳನ್ನು ಹಾಗೂ ಭಾವಚಿತ್ರ ಪುಷ್ಪಗಳನ್ನಿಟ್ಟ ಅಲಂಕೃತ ರಥೋತ್ಸವ ಜರುಗಿತು. ರಥೋತ್ಸವ ಸಮಯದಲ್ಲಿ ದೇವರ ನಾಮಗಳ ಸುಮಧುರ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More