ಅನ್ನದಾತರ ಸಮೃದ್ಧಿಯಲ್ಲಿ ಸಂತೃಪ್ತಿ: ಸಚಿವ ಎಂಬಿಪಿ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 3:ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ. ಈ ನಿಟ್ಟಿನಲ್ಲಿ ಕಾಯಕನಿರತನಾಗಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಎನ್.ಆರ್.ಎಲ್.ಎಂ ಕಲಿಕಾ ಕಟ್ಟಡ, ಗೋದಾಮು ಹಾಗೂ ಜಲ ಸಂಗ್ರಹಕ್ಕೆ ಅನುಕೂಲವಾಗುವ ಕಲ್ಯಾಣಿ ಉದ್ಘಾಟನೆ ಹಾಗೂ ಡೋಣಿ ಪ್ರವಾಹದಿಂದಾಗಿ ಪುನರ್ವಸತಿ…


