ಬಿರುಗಾಳಿ ಸಹಿತ ಮಳೆಗೆ ನೆಲಕ್ಕೆ ಬಿದ್ದ ಬಾಳೆ:15 ಲಕ್ಷಕ್ಕೂ ಅಧಿಕ ಹಾನಿ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಮೇ. 23 :ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬವರ ಸರ್ವೆ ನಂ. 33ರ ಜಮೀನಿನಲ್ಲಿ ಬೆಳೆದಿದ್ದ 5 ಏಕರೆ ಪ್ರದೇಶದಲ್ಲಿಯ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದ ಘಟನೆ ನಡೆದಿದೆ.ಇನ್ನೇನು ವಾರ ಕಳೆಯುವಷ್ಟರಲ್ಲಿ ಬಾಳೆ ಗೊನೆಗಳನ್ನು ಕಟಾವಿಗೆ ಬಂದಿದ್ದವು. ಒಟ್ಟು 5 ಎಕರೆ ಪ್ರದೇಶದಲ್ಲಿ ಸುಮಾರು 1200 ಕ್ಕೂ ಅಧಿಕ ಬಾಳೆಗಿಡಗಳನ್ನು ಬೆಳೆದಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ…

Read More

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ. ಸಮಗ್ರ ಅಭಿವೃದ್ಧಿಗೆ ಆದ್ಯತೆ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ23: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ…

Read More

ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ನಿರ್ಧಾರ :ಯತ್ನಾಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:ಗುರುವಾರ (ಮೇ 21) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. 2022 ರಲ್ಲಿ ಸದರಿ ದರ್ಗಾದಲ್ಲಿ ದೊಡ್ಡ ಮಟ್ಟದ ಗಲಾಟೆಯಾಗಿ, ತಿಳಿಗೇಡಿಗಳು ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿದ್ದರು.ಆರೋಪಿತರು ‘ಅಮಾಯಕರು’ ಎಂದು ಬಿಂಬಿಸುತ್ತಿರುವ ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ. ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಉದ್ದೇಶಪೂರ್ವಕವಾಗಿ ದೊಂಬಿ, ಹಿಂಸಾಚಾರ, ಕೋಮು ಗಲಭೆ, ವಿಗ್ರಹ…

Read More

ಮುಂಬೈ, ಬೆಂಗಳೂರುಗಳಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಜಿಗಜಿಣಗಿ ಶ್ರಮಿಸಲಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:)ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು,…

Read More

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 22:2026-27 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು. ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ…

Read More

ಪ್ರಕೃತಿ ವಿಕೋಪ: ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 22:ಮುಂಗಾರು ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ಪ್ರವಾಹದಲ್ಲಿ ಜೀವ ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಗಳು ಮೊದಲ ಆದ್ಯತೆ ನೀಡುವುದರೊಂದಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಶುಕ್ರವಾರ 2026-27 ನೇ ಸಾಲಿನ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಕುರಿತ ಜಿಲ್ಲಾ…

Read More

ಶೈಲಾ ದೊಡ್ಡಮನಿಗೆ ಪಿಎಚ್ ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 22:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೈಲಾ ದೊಡ್ಡಮನಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆನ್ ವುಡ್ ಟೆಕ್ಸ÷್ಚರ್ ಇಮೇಜ್ ಅನಾಲಿಸಿಸ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಶೈಲಾ ದೊಡ್ಡಮನಿ ಅವರು ಗಣಕ ವಿಜ್ಞಾನ ವಿಭಾಗದ ಡಾ. ರೋಹಿಣಿ ಎ. ಭೂಸನೂರಮಠ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೈಲಾ ದೊಡ್ಡಮನಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ…

Read More

ಭಯೋತ್ಪಾದನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 21:ಭಯೋತ್ಪಾದನೆಯು ಇಡೀ ಮಾನವಕುಲಕ್ಕೆ ದೊಡ್ಡ ಶಾಪವಾಗಿದ್ದು, ಜನರಲ್ಲಿ ಶಾಂತಿ, ಏಕತೆ, ಸಾಮರಸ್ಯ, ಮಾನವೀಯತೆಯನ್ನು ಜೀವಂತವಾಗಿಟ್ಟಾಗ ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ‘ಭಯೋತ್ಪಾದನೆ- ಮಾನವೀಯತೆಗೆ ಮಾರಕ’ ಕುರಿತು ಅವರು ಮಾತನಾಡಿದರು.ಯುವ ಜನತೆಗೆ ದೇಶಭಕ್ತಿ, ಸತ್ಯ, ಅಹಿಂಸೆಯ ಮೌಲ್ಯ ತಿಳಿಸಿಕೊಟ್ಟು, ಅವರು ತಪ್ಪು ದಾರಿಗೆ…

Read More

ಮನೆಯ ಮೇಲ್ಛಾವಣೆ ಕುಸಿದು ವೃದ್ಧೆ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 21:ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ದುರಂತಜಿಲ್ಲೆಯ ನಿಡಗುಂದಿ ಪಟ್ಟಣದಗೌರೀಶ್ವರ ದೇವಸ್ಥಾನ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.ನಿಡಗುಂದಿ ನಿವಾಸಿ ಮಹಾದೇವಿ ವಾರದ (55) ಮೃತಪಟ್ಟ ಮಹಿಳೆ.ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಕುಸಿದು ಈ ಅವಘಡ ಸಂಭವಿಸಿದೆ.ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.ಮನೆಯ ಹೊರಗೆ ಮಲಗಿದ್ದ ಪತಿಶಿವಾನಂದ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾದೇವಿ…

Read More

ವಿದ್ಯುತ್ ಚಿತಾಗಾರ ನಿರ್ಮಾಣ: ಶಾಸಕ ಯತ್ನಾಳ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 20:ನಗರದ ವಾರ್ಡ್ ನಂ.8 ರಲ್ಲಿ ಬರುವ ಚಾಲುಕ್ಯ ನಗರ ಪೂರ್ವ ಭಾಗದ ದೇವಗಿರಕರ ಸ್ಮಶಾನದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಂಜೂರಿಸಲಾದ ರೂ.4 ಕೋಟಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಸಕರಾತ್ಮಕವಾಗಿ ಸ್ಪಂದಿಸಿದರು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಅಶೋಕ…

Read More