ವಿಜಯಪುರದ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 20:ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರು ಬಸ್ ನಿಲ್ದಾಣವನ್ನು ಅವಲಂಬಿಸಿಕೊಂಡಿದ್ದರೂ, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿ ಎದ್ದು…

Read More

ಬಸವನ ಬಾಗೇವಾಡಿಯಲ್ಲಿ ಇಂಧನ, ಅಡುಗೆ ಅನಿಲ ಕೃತಕ ಅಭಾವ: ದಾಸ್ತಾನು ಪರಿಶೀಲಿಸಲು ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಮೇ. 20:ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೃತಕ ಅಭಾವ ಸೃಷ್ಟಿಯಾಗುತ್ತಿದ್ದು, ಸಾರ್ವಜನಿಕರು, ರೈತರು ಹಾಗೂ ಬಡ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಪಟ್ಟಣದ ಪೆಟ್ರೋಲ್ ಬಂಕ್‌ಗಳಲ್ಲಿ ಸಕಾಲಕ್ಕೆ ಇಂಧನ ಸಿಗದೆ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ನಂಬಿಕೊಂಡಿರುವ ರೈತರು ನಿತ್ಯ ಪರದಾಡುವಂತಾಗಿದೆ. ಇನ್ನೊಂದೆಡೆ,…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ…

Read More

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಖಂಡಿಸಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಇಲ್ಲಿನ ಜಿಲ್ಲಾಸ್ಪತ್ರೆಯ ಖಂಡಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮಂಗಳವಾರ ಪ್ರತಿಭಟನೆ ನಡೆಸಿದೆ.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆಯಿಂದ ರೋಗಿಗಳು ದುರಂತ ಅನುಭವಿಸುತ್ತಿದ್ದಾರೆ. ಪ್ರತಿದಿನ 2,000 ರಿಂದ 3,000ಕ್ಕೂ ಹೆಚ್ಚು ಹೊರ ರೋಗಿಗಳು ಇಂಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕುಗಳಿಂದ, ಬಾಗಲಕೋಟೆ , ಬೆಳಗಾವಿ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಜತ್ತ ಜಿಲ್ಲೆಗಳಿಂದ ಬರುತ್ತಿದ್ದರೂ ಸಹ, ಆಸ್ಪತ್ರೆಯಲ್ಲಿ ಕನಿಷ್ಠ ಮೂಲಭೂತ ವ್ಯವಸ್ಥೆಯನ್ನೂ ಕಲ್ಪಿಸಲಾಗಿಲ್ಲ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ…

Read More

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ನಗರದಲ್ಲಿ ಸೋಮವಾರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.ನಗರದ ವಾರ್ಡ್ ನಂ.33 ರಲ್ಲಿ ಬರುವ ಶಹಾಪೇಟೆ ಲೇಔಟ್ ದಲ್ಲಿ 2025-26ನೇ ಸಾಲಿನ‌ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಿಸಲಾದ ರೂ.10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಬನಶಂಕರಿ ದೇವಸ್ಥಾನದ ಆವರಣದಲ್ಲಿ 2025-26ನೇ ಸಾಲಿನ‌ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ…

Read More

ಶರಣರ ವಚನಗಳಲ್ಲಿ ಹೃದಯತುಂಬಿದ ಅನುಭಾವ: ರೆಡ್ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ಶರಣರು ತಮ್ಮ ವಚನಗಳ ಮೂಲಕ ಸತ್ಯ, ನಿಷ್ಠೆ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದ ಮಹಾಂತರು, ಅದರಲ್ಲಿ ಕಾಯಕ, ದಾಸೋಹ ಪೂಜೆಯಾಗಬೇಕು. ಶರಣರ ವಚನಗಳಲ್ಲಿ ಹೃದಯ ತುಂಬಿದ ಅನುಭಾವ ಎಂದು ಉಪನ್ಯಾಸಕ ಸಂಗನಬಸಪ್ಪ ರೆಡ್ಡಿಹೇಳಿದರು.ನಗರದ ಅ.ಭಾ.ವಿ. ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದವರು ವೀರಶೈವ ಲಿಂಗಾಯತ ಸಭಾಭವನದಲ್ಲಿ ಏರ್ಪಡಿಸಿದ 77ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಸಕಲೇಶ ಮಾದರಸ ಅವರ ಅನುಭಾವ ಕುರಿತು ಮಾತನಾಡಿದರು.ರಾಜ ಪರಿವಾರದ ಸಕಲೇಶರು ಸಂಸಾರವನ್ನುತ್ಯಾಗಮಾಡಿ ಸದ್ಗುರುವನ್ನು ಕಾಣಲು ಶ್ರೀಶೈಲಕ್ಕೆ ಹೋಗುತ್ತಾರೆ. ಶಿವನ…

Read More

ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ 15 ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತುತ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಈ ತಾತ್ಕಾಲಿಕ ಅತಿಥಿ ಉಪನ್ಯಾಸಕರನ್ನು ಮುಂದುವರಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆಯಾ ವಿಷಯದ‌ ಹುದ್ದೆಗಳಿಗೆ ಜಿಲ್ಲಾ…

Read More

ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…

Read More

ಬೈಕ್ ಸವಾರಿ ಮಾಡಿದ ಸಂಸದ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 18:ಪ್ರಧಾನಿ ನರೇಂದ್ರ ಮೋದಿ ಅವರ ಮಿತ ವ್ಯಯ ಸೂತ್ರ ಪಾಲನೆ ಹಿನ್ನೆಲೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಹೆಲ್ಮೇಟ್ ಧರಿಸಿ ಇಲೆಕ್ಟ್ರಿಕ್ ವಾಹನದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.ಬಿಜೆಪಿ ಮುಖಂಡ ಪಾಪುಸಿಂಗ್ ರಜಪೂತ ಅವರ ಜೊತೆ ಹೆಲ್ಮೇಟ್ ಧರಿಸಿ ಜಿಲ್ಲಾದಿಕಾರಿಗಳ ಕಚೇರಿಗೆ ಆಗಮಿಸಿದಾಗ ಎಲ್ಲರಿಗೂ ಅಚ್ಚರಿ…..ಯುದ್ಧದ ಸಂಕಷ್ಟಗಳ ಕಾಲಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮಿತ ಬಳಕೆ, ಚಿನ್ನ ಖರೀದಿ ಮುಂದೂಡಿಕೆ ಸಲಹೆ ನೀಡಿದ್ದಾರೆ. ಈ ಸಲಹೆ ಪಾಲನೆ ಹಿನ್ನೆಲೆಯಲ್ಲಿ ನಾನು…

Read More

ಸಕಾಲಕ್ಕೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಮನಗೂಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಒ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಪ್ರತಿ ರೋಗಿಗೂ ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಸಕಾಲಕ್ಕೆ ನೀಡಬೇಕು. ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದರು.ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ದಿಢೀರ್‌ ಭೇಟಿ ನೀಡಿ, ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಸೇವೆಗಳ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಅವರು ಈ ಸೂಚನೆ ನೀಡಿದರು.ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಅವಶ್ಯಕ…

Read More