ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.3:ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.9 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಬಿಡುಗಡೆ ಮಾಡಲಾಗಿದೆ.ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪಿನ ಸದಸ್ಯರು, ಎನ್ ಆರ್ ಎಲ್ಎಮ್ ಫಲಾನುಭವಿಗಳು ಹಾಗೂ ಎನ್ ಆರ್ ಎಲ್ಎಮ್ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕಾಸಿಯಾ (ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಜ್ ಅಸೋಷಿಯೇಶನ್) ಘಟಕಗಳ ಮಹಿಳಾ…

Read More

ನಿರಾಶಾದಾಯಕ ಬಜೆಟ್:ಡಾ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಕೇಂದ್ರ ಬಜೆಟ್ ಎಲ್ಲ ವರ್ಗದವರಿಗೆ ನಿರಾಶದಾಯಕ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರವಿಕುಮಾರ ಬಿರಾದಾರ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ರೈತರು, ಯುವಜನತೆ ಮತ್ತು ಮಧ್ಯಮ ವರ್ಗದ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದು, ಕಠಿಣ ಆರ್ಥಿಕ ವಾಸ್ತವಗಳನ್ನು ಎದುರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ನಿರುದ್ಯೋಗದ ಸಮಸ್ಯೆ ತಾಂಡವವಾಡುತ್ತಿದ್ದರೂ ಮತ್ತು ಉತ್ಪಾದನಾ ವಲಯವು ಕುಸಿತದ ಹಾದಿಯಲ್ಲಿದ್ದರೂ, ಸರ್ಕಾರವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಬದಲು ಕೇವಲ…

Read More

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ದೇಶದ ಬ್ಯಾಂಕಿಂಗ್ ವಲಯದ ಹಣಕಾಸಿನ ಸ್ಥಿತಿ ಅತ್ಯಂತ ಗಟ್ಟಿಯಾಗಿದೆ ಎಂದು ಹೇಳಿರುವುದನ್ನು ನಾವು ಸ್ವಾಗತಿಸುತ್ತೇವೆ. ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ, ಬ್ಯಾಂಕ್ ನೌಕರರು ಹೆಚ್ಚಿನ ಶ್ರಮ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ ಸಾಧಿಸಿದ ಪ್ರಗತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘದಪ್ರಧಾನ ಕಾರ್ಯದರ್ಶಿ ಜಿ. ಜಿ. ಗಾಂಧಿ ತಿಳಿಸಿದ್ದಾರೆ.ಭಾರತ ನಿರ್ಮಾಣದ ಉದ್ದೇಶದಿಂದ…

Read More

ತಂತ್ರಜ್ಞಾನ-ಕೌಶಲ್ಯಾಭಿವೃದ್ದಿ ಅಳವಡಿಸಿಕೊಂಡು ಉದ್ಯೋಗ ಪಡೆಯಲು ಮುಂದಾಗಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.2: ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಆಯ್), ರೋಬೋಟ ತಂತ್ರಜ್ಞಾನ, ಗ್ರೀನ್ ಎನರ್ಜಿ ದಾಪುಗಾಲಿಟ್ಟಿದ್ದು, ಈ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು, ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಪಡೆಯಲು ಇಂದಿನ ಯುವ ಜನಾಂಗ ಮುಂದಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ…

Read More

ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ ಹಾಗೂ ದೀಪಕ ಶಿಂತ್ರೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ ಅವರ ಅಧ್ಯಕ್ಷತೆಯಲ್ಲಿ ಚಾಲುಕ್ಯ ನಗರದ ಕಚೇರಿಯಲ್ಲಿ ಜರುಗಿತು.ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಸಹಕಾರಿ ಕ್ಷೇತ್ರದಲ್ಲಿ ಅನುಭವಿಗಳನ್ನು, ಪರಿಣಿತರನ್ನು ಕೋಪ್ಟ್ ಮಾಡಿಕೊಳ್ಳಲು ತೀರ್ಮಾನಿಸಲಾಯಿತು.ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಪರಶುರಾಮ ಚಿಂಚಲಿ ಅವರು ನಿವೃತ್ತಿ ನಂತರ ವಿವಿಧ…

Read More

ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ಸಂತ ರವಿದಾಸರ ತತ್ತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ಸಂಸದ ಗೋವಿಂದ ಕಾರಜೋಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸಂತ ರವಿದಾಸರು ಕಂಡ ಜಾತಿರಹಿತ ಮತ್ತು ಸಮಾನತೆಯ ಸಮಾಜದ ಕನಸನ್ನು ನನಸಾಗಿಸಲು ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರು ಕರೆ ನೀಡಿದರು.ನಗರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸಂತ ಶಿರೋಮಣಿ ಶ್ರೀ ರವಿದಾಸರ ಜಯಂತಿ’ ಕಾರ್ಯಕ್ರಮದಲ್ಲಿ ರವಿದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಭಾರತದ ಭಕ್ತಿ ಪರಂಪರೆಯಲ್ಲಿ ಸಂತ ರವಿದಾಸರ ಸ್ಥಾನ ಹಿರಿದಾದುದು. 15ನೇ ಶತಮಾನದಲ್ಲಿಯೇ ಅವರು ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ…

Read More

ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್: ಮಖಣಾಪೂರ ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಆಗಿದೆ ಎಂದು ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವಾನಂದ ಮಖಣಾಪೂರ ಪ್ರತಿಕ್ರಿಯೆ ನೀಡಿದ್ದಾರೆ.ಕೇಂದ್ರ ಬಜೆಟ್ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ,…

Read More

ಸರ್ವೇ ಜನ ಸುಖಿನೋ ಭವಂತು ಬಜೆಟ್: ಕಾರಜೋಳ ಪ್ರತಿಕ್ರಿಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದ ಪ್ರತೀಕವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತ, ಕಾರ್ಮಿಕ, ಮಹಿಳಾ ಸಬಲೀಕರಣ, ಯುವ ಶಕ್ತಿಗೆ ಉತ್ತೇಜನ ನೀಡುವ ಮೂಲಕ ಎಲ್ಲರೂ ಸುಖವಾಗಿರಲು ಬೇಕಾಗುವ ನಿಟ್ಟಿನಲ್ಲಿ ಅನೇಕ ಮಹತ್ವದ ಕಾರ್ಯಯೋಜನೆ ರೂಪಿಸಲಾಗಿದೆ.ಮೂಲ ಸೌಕರ್ಯಗಳ ಪ್ರಗತಿಗೆ…

Read More

ಕ್ರೀಡೆಗಳಲ್ಲಿ ಸೋಲು ಗೆಲವು ಸಮಾನವಾಗಿ ಸ್ವೀಕರಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1:ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ…

Read More