ಫೆ.2 ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.1:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಫೆ.2ರಂದು ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ. 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಾಂಪ್ರದಾಯಿಕ ಹಬ್ಬಗಳು ಮನಸ್ಸಿಗೆ ಉಲ್ಲಾಸ ತರುತ್ತವೆ- ರಾಜಶ್ರೀ ಜುಗತಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಭಾರತೀಯ ಸಂಸ್ಕೃತಿ ಅತ್ಯಂತ ಅಮೋಘವಾದದ್ದು, ಶ್ರೇಷ್ಠ ಸಂಸ್ಕೃತಿಯನ್ನು ಒಳಗೊಂಡ ಭಾರತ ದೇಶ ವಿಶ್ವಕ್ಕೆ ಮಾದರಿಯಾಗಿದೆ. ಆಧ್ಯಾತ್ಮಿಕತೆ, ಧಾರ್ಮಿಕತೆ, ವೈಜ್ಞಾನಿಕತೆ, ಕಲೆ, ಸಾಹಿತ್ಯ, ಸಂಪ್ರದಾಯದ ಆಚರಣೆಗಳಲ್ಲಿ ಭಾರತ ದೇಶ ತನ್ನದೇ ಆದ ವಿಶಿಷ್ಟತೆಯನ್ನು ಒಳಗೊಂಡಿದೆ. ದೇಶಿಯ ಬಣ್ಣ ಬಣ್ಣದ ಉಡುಗೆ, ತೊಡುಗೆಯನ್ನು ಧರಿಸಿಕೊಂಡು ಆಚರಿಸುವ ಸಾಂಪ್ರದಾಯಿಕ ಹಬ್ಬ. ಪ್ರತಿಯೊಬ್ಬರಲ್ಲಿ ಉಲ್ಲಾಸವನ್ನು ತರುತ್ತದೆ ಎಂದು ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಹೇಳಿದರು.ಭಾನುವಾರ ನಗರದ ಚೇತನಾ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ…

Read More

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿಜಿ ಹುತಾತ್ಮ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹುತಾತ್ಮ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.ಶಾಂತಿ-ಅಹಿಂಸಾ ಮಾರ್ಗದಲ್ಲಿ ದೇಶವನ್ನು ದಾಸ್ಯಮುಕ್ತಗೊಳಿಸಲು ತಮ್ಮನ್ನೆ ತಾವು ಸಮರ್ಪಣೆಗೊಳಿಸಿ ಮನುವಾದಿಗಳ ಕುತಂತ್ರಕ್ಕೆ ಬಲಿಯಾಗಿ ಇಂದಿಗೆ 78 ವರ್ಷಗಳು ಕಳೆದ ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಗೌರವವನ್ನು ಸಲ್ಲಿಸಲಾಯತು.ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಾಗಲಾವ,…

Read More

ಫೆ. 2ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಫೆ.2ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಯುವ ಸಮೃದ್ಧಿ ಸಮ್ಮೇಳನ- ವಿಜಯಪುರ ಉದ್ಯೋಗ ಮೇಳವನ್ನು ದರಬಾರ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾ‌ಂತಾ ನಾಯ್ಕ ಅವರು ಉದ್ಯೋಗ‌ ಮೇಳದ ಕುರಿತು ವಿವರ ಹಂಚಿಕೊಂಡರು.ಈ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ…

Read More

ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ನಮನ

ಸಪ್ತಸಾಗರ ವಾರ್ತೆ, ವಿಜಯಪುರ ಜ.30: ಸ್ವಾತಂತ್ರ‍್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೇಶದ…

Read More

ಫೆ. 4ರಂದು ಉಚಿತ ಕ್ಯಾನ್ಸರ್ ತಪಾಸಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿದೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗವು, ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ, ಸಂಶೋಧನಾ ಸಮಿತಿ (SARS), ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ (ASI) ಮತ್ತು ಭಾರತೀಯ ವೈದ್ಯಕೀಯ ಸಂಘ (IMA) ಸಹಯೋಗದೊಂದಿಗೆ ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.ಫೆಬ್ರವರಿ 3 ಮತ್ತು 4 ರಂದು ಮಧ್ಯಾಹ್ನ 12 ರಿಂದ…

Read More

ವಿಕಸಿತ ಭಾರತಕ್ಕಾಗಿ ತಪ್ಪದೇ ಮತದಾನ‌ ಮಾಡಿ: ಡಾ ಔದ್ರಾಮ, ಅಪರ ಜಿಲ್ಲಾಧಿಕಾರಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29: ಪ್ರತಿಯೊಂದು ಮತದಾನ ದೇಶಕಟ್ಟುವ ಮಹಾತ್ ಕಾರ್ಯಕ್ಕೆ ಮುನ್ನುಡಿ ಎಂದುವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಅವರು ತಿಳಿಸಿದ್ದಾರೆ.ಭಾರತ ಸರ್ಕಾರದ ಮೇರಾ ಯುವ ಭಾರತ ಕೇಂದ್ರ, ಜಿಲ್ಲಾಡಳಿತ, ಕೇಂದ್ರ ಸಂವಹನ ಇಲಾಖೆ, ಬಿ ಎಲ್‌ ಡಿ ಇ ಎ ಜೆಎಸ್‌ಎಸ್‌ ಶಿಕ್ಷಣ ಮಹಾವಿದ್ಯಾಲಯ, ಎನ್‌ಎಸ್‌ಎಸ್‌ ಘಟಕ, ಭಾರತ ಸೇವಾ ದಳ, ರೆಡ್‌ ಕ್ರಾಸ್‌ ಘಟಕ, ವಿಜಯಪುರ ಮತ್ತು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾಂಸ್ಕ್ರತಿಕ ಕ್ರೀಡಾ ಹಾಗೂ ಸಾಮಾಜಿಕ ಶ್ರೇಯೋಭಿವೃದ್ಧಿ…

Read More

ಗುಡುಗು-ಸಿಡಿಲು ಪರಿಣಾಮ ತಗ್ಗಿಸಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಡಿಸಿ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.29: ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಕುರಿತು ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ…

Read More

ಕಗ್ಗೋಡದಲ್ಲಿ ಗೋರಕ್ಷಾ ಕೇಂದ್ರದಮಹಾದ್ವಾರ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಕಗ್ಗೋಡದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರ ಶ್ರೀ ಸಿದ್ಧೇಶ್ವರ ಸಂಸ್ಥೆಯ ನಿರ್ದೇಶಕ ಸಾಯಿಬಣ್ಣ ಎಸ್ ಬೋವಿ. ಇವರ ಕುಟುಂಬದವರಿಂದ ಮಹಾದ್ವಾರ ನಿರ್ಮಿಸಿದ್ದು, ಮಹಾದ್ವಾರದ ಉದ್ಘಾಟನೆಯನ್ನು ಗೋಮಾತೆಯ ಪೂಜೆಯೊಂದಿಗೆ ವಿಜಯಪುರ ನಗರ ಶಾಸಕ ಹಾಗೂ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತು.ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಚೇರಮನ್ ಬಸಯ್ಯ ಹಿರೇಮಠ, ಕಾರ್ಯದರ್ಶಿಗಳಾದ ಸದಾನಂದ ಎಚ್. ದೇಸಾಯಿ,…

Read More

ಒತ್ತಡದ ಬದುಕಿಗೆ ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಸಿಳ್ಳಿ- ಮಡಿವಾಳಪ್ಪ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ,ಜ.29: ಒತ್ತಡದ ಜೀವನ ಶೈಲಿಯಲ್ಲಿ ಕ್ರೀಡೆ ಅತ್ಯಮೂಲ್ಯ ಸಾಧನ ಸದೃಢ ಆರೋಗ್ಯ ಹೊಂದಿ ಕ್ರೀಯಾಶೀಲತೆ ಮೈಗೂಢಿಸಿಕೊಂಡು ನೆಮ್ಮದಿ ಹಾಗೂ ಉಲ್ಲಸಿತವಾಗಿರಲು ಆಟೋಟ ಹಾಗೂ ಸಾಂಸ್ಕೃತಿಕವಾಗಿ ತೊಡಗಿಕೊಳ್ಳುವುದು ಅಗತ್ಯವಾಗಿದೆ ಎಂದು ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ…

Read More