ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…


