ಕಳ್ಳತನ ಹಾಗೂ ಸುಲಿಗೆ ಪ್ರಕರಣ: 42 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26 :ಜಿಲ್ಲೆಯ ಇಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 42 ಆರೋಪಿಗಳನ್ನು ಬಂಧಿಸಿ ಸುಮಾರು ₹1,20,04,750 ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳು ಸೇರಿದಂತೆ ವಿವಿಧ ಕಳವು ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ವಿಶೇಷ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಒಟ್ಟು 20 ವಿವಿಧ ಸ್ವತ್ತಿನ ಪ್ರಕರಣಗಳನ್ನು…

Read More

ಶ್ರೀರಾಮನ ವೇಷಧಾರಿಯಾಗಿ ಅನುಶ್ರೀ-ಶ್ರೀನಿಧಿ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26:ಅಯೋಧ್ಯೆಯ ರಾಜ ದಶರಥ ಮತ್ತು ರಾಣಿ ಕೌಸಲ್ಯೆಯ ಮಗನಾಗಿ ಶ್ರೀರಾಮನು ಜನಿಸಿದ ದಿನವನ್ನು ರಾಮನವಮಿಯನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 1 ನೇ ವರ್ಗದ ಅವಳಿ ಸಹೋದರಿಯರಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಶ್ರೀ ರಾಮನ ವೇಷಧಾರಿಗಳಾಗಿ ಗಮನ ಸೆಳೆದರು.ಶ್ರೀ ರಾಮ ನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುವ ಭಗವಾನ್ ವಿಷ್ಣುವಿನ 7ನೇ ಅವತಾರವಾದ ಶ್ರೀರಾಮನ ಜನ್ಮದಿನವಾಗಿದೆ. ಇದು ಅಧರ್ಮದ ಮೇಲೆ ಧರ್ಮದ ವಿಜಯ, ದುಷ್ಟರ ಸಂಹಾರ, ಮತ್ತು…

Read More

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.25:ನಗರದ ಮರಾಠಿ ವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವ‌ ನಿಟ್ಟಿನಲ್ಲಿ ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವವಹಿಸುವಂತೆಯೂ, ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಅತ್ಯಂತ ಜಾಗೃತೆಯಿಂದ ಕಾರ್ಯ‌ ನಿರ್ವಹಿಸಿ ಸುಸೂತ್ರ‌ ಪರೀಕ್ಷೆ ನಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವಂತೆ ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭ ಪರೀಕ್ಷಾ ಕೇಂದ್ರದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯ, ಭದ್ರತೆ, ಕುಡಿಯುವ ನೀರು, ಅಳವಡಿಸಿರುವ…

Read More

ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ತಿಕೋಟಾ, ಮಾ. 25: ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯತಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.ಜೀವನದಲ್ಲಿ ಹೆಣ್ಣು, ಗಂಡು ಎಂದು ಭೇದಭಾವ ಮಾಡದೇ ಸಮಾನವಾಗಿ ಕಾಣಬೇಕು. ಹೆಣ್ಣನ್ನು ಕೀಳಾಗಿ ಎಂದೂ ಕಾಣಬಾರದು. ಹೆಣ್ಣಿಗೆ ಕೇವಲ ಅನುಕಂಪ ತೋರಿಸದೇ ಅವರಿಗೆ ಅವಕಾಶ ನೀಡಿದ್ದಲ್ಲಿ ಎಲ್ಲವನ್ನೂ ಮಾಡಿ ತೋರಿಸುವ ಶಕ್ತಿ ಅವರಲ್ಲಿ ಅಡಗಿದೆ. ಪ್ರಸ್ತುತ ದಿನಮಾನದಲ್ಲಿ…

Read More

ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.24:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ,ಸರ್ಕಾರದ ಯೋಜನೆ ಅನುಷ್ಠಾನಗೊಳಿಸಿ ಅವರಿಗೆ ಸರ್ಕಾರ ನೀಡುವ ಸೌಲಭ್ಯ ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಮಂಗಳವಾರ ‌ನಡೆದಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮುದಾಯ‌ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ,…

Read More

ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚೆಚ್ಚು ಓದಿ:ಡಾ. ಜೆ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ವಿಜಯಪುರ, ಮಾ. 24:ಇವತ್ತಿನ ಯುವ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿದ್ದು ಅತ್ಯಂತ ವಿಷಾದದ ಸಂಗತಿಯಾಗಿದೆ. ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚು ಹೆಚ್ಚು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ದಿನ ಡಾಟ್ ಕಾಮ್‌ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್.ಪಾಟೀಲ್ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜೈ ಹಿಂದ್,…

Read More

ಎಸ್ಎಸ್ಎಲ್ಸಿ ಪರೀಕ್ಷಾ‌ ಕೇಂದ್ರ, ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾರ್ಚ್ 23: ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ…

Read More

ದೇವರ ದಾಸಿಮಯ್ಯನವರ ವಚನಗಳ ಸಾರ ಸಮಾಜಕ್ಕೆ ದಾರಿ ದೀವಿಗೆ: ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.23:ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಇಂದಿನ‌ ಒತ್ತಡದ‌ ಬದುಕಿನಲ್ಲಿ‌ ಬಹುತೇಕರು ಭಕ್ತಿ‌ಮಾರ್ಗದಿಂದ‌ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ…

Read More

ಚೀಟಿ ಕಂಪನಿ :ಆಕ್ಷೇಪಣೆ ಆಹ್ವಾನ

ಸಪ್ತಸಾಗರವಾರ್ತೆ,ವಿಜಯಪುರ,ಮಾ.23:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೇ ಇರುವ ಹಾಗೂ ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರುತಿಳಿಸಿದ್ದಾರೆ.ಈ ಪ್ರಕಟಣೆ ಹೊರಡಿಸಿದ 07 ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್‌ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು…

Read More