ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More

ಮಹಿಳೆಯರು ಜಾಣ್ಮೆಯಿಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 21: ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಜಾಣ್ಮೆಯಿಂದ ಸದುಪಯೋಗ ಪಡಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಅತ್ಯುತ್ತಮ‌ ಸಾಧನೆ ಮಾಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿನಿಯರೊಂದಿಗೆ…

Read More

ಆನಂದ ಕಂಬಾರಗೆಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಜಿಲ್ಲೆಯ ತಿಕೋಟಾ ಪಿ ಎಂ ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮಾದರಿ ಶಾಲೆ ಆಂಗ್ಲ ಶಿಕ್ಷಕ ಆನಂದ ಕಂಬಾರ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಂದ ವಿದ್ಯಾರ್ಥಿ ಸ್ನೇಹಿ, ಇಂಗ್ಲಿಷ ವಿಷಯದ ರಾಜ್ಯ ಸಂಪನ್ಮೂಲ ಶಿಕ್ಷಕನಾಗಿ ಹಲವಾರು ಕಾರ್ಯಗಾರಗಳಲ್ಲಿ ಭಾಗವಹಿಸಿ ಹಲವಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರಸ್ತುತ…

Read More

ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್: ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೊಳಿಸಿ-ಸಚಿವ ಎಂ.ಬಿ.ಪಾಟೀಲ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣಕ್ಕಾಗಿ, ಸ್ವಚ್ಛತೆಗಾಗಿ 2025ನೇ ಸಾಲಿನ ಡಿಸೆಂಬರ್ 7 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೃಕ್ಷೋತ್ಥಾನ ಹೆರಿಟೇಜ್ ರನ್‍ನಲ್ಲಿ ಜಿಲ್ಲಾಡಳಿತ, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದರು.ಶನಿವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ವೃಕ್ಷೋತ್ಥಾನ ಹೆರಿಟೇಜ್ ರನ್…

Read More

ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?- ಡಿಕೆಶಿ ಪ್ರಶ್ನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…

Read More

ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ: ಯತ್ನಾಳ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…

Read More