ಡಿ.21 ರಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.2 :ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24ರವರೆಗೆ ನಾಲ್ಕು ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ…

Read More

ಮಾನಸಿಕ ಆರೋಗ್ಯ ಕಾಪಾಡುವುದು ಅವಶ್ಯ: ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾನಸಿಕ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮಹತ್ವದ ಅಂಶವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್ -ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ “ಮಾನಸಿಕ ಬೆಂಬಲ ಹೊಂದಲು ಆಪ್ತಸಮಾಲೋಚನೆ”…

Read More

ಮೆಡಿಕಲ್ ಕಾಲೇಜು ಹೋರಾಟ 76 ನೇ ದಿನಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅಗ್ರಹಿಸಿ ಹೋರಾಟ ಸಮಿತಿಯಿಂದ ಕೈಗೊಂಡ ಅನಿರ್ದಿಷ್ಟ ಧರಣಿ ಮಂಗಳವಾರ 76ನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಅಸೋಸಿಯೇಷನ್ ವಿಜಯಪುರ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.ಧರಣಿಯನ್ನು ಉದ್ದೇಶಿಸಿ ರಾಜ್ಯ ಕೋಅರ್ಡಿನೇಟರ್ ಆನಂದ ಔದಿ ಮಾತನಾಡಿ, ಸರ್ಕಾರದ ಪ್ರಭಾವಿ ಸಚಿವರು ಈ ವಿಷಯದಲ್ಲಿ ಮುತುವರ್ಜಿ ವಹಿಸದೆ ಇರುವುದು ತಪ್ಪು. ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ನಮ್ಮ ಸಚಿವರು ಮುಖ್ಯಮಂತ್ರಿಗಳ ಮನವೊಲಿಸಿ ಸರ್ಕಾರಿ ವೈದ್ಯಕೀಯ…

Read More

ವೃಕ್ಷಥಾನ್ ಹೆರಿಟೇಜ್ ರನ್: ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು

ಸಪ್ತ ಸಾಗರ ವಾರ್ತೆ:ವಿಜಯಪುರ,ಡಿ.2: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಪರಿಸರ ಪ್ರಿಯರು, ಕ್ರೀಡಾಸಕ್ತರು ಹಾಗೂ ಗಣ್ಯರು ಸೇರಿದಂತೆ ಹಲವಾರು ಸಂಘ- ಸಂಸ್ಥೆಗಳು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.ಪ್ರತಿವರ್ಷ ವೃಕ್ಷಥಾನ್ ಹೆರಿಟೇಜ್ ರನ್ ಪ್ರಖ್ಯಾತವಾಗುತ್ತಿದ್ದು, ಪ್ರಾಯೋಜಕರೂ ಕೂಡ ಸ್ವಯಂ ಪ್ರೇರಿತರಾಗಿ ಸಂತೋಷದಿಂದ ಹಣಕಾಸಿನ ನೆರವು ನೀಡಿದ್ದಾರೆ.ಮಾಜಿ ಮೇಯರ್ ಸಜ್ಜಾದೆ ಪೀರಾ ಮುಶ್ರಿಫ್ ರೂ. 2 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ಮುಖಂಡರಾದ ಹಮೀದ್ ಮುಶ್ರಿಫ್ ರೂ. 1.50…

Read More

ವಿಜಯಪುರದಲ್ಲಿ ಡಿ. 6ರಂದು ಬೃಹತ್ ಕ್ಯಾಂಡಲ್ ಮಾರ್ಚ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ್ ಅಜಮನಿ ಹಾಗೂ ಮಾದೇಶ ಚಲವಾದಿ ಮಂಗಳವಾರ ಕಾರ್ಯಕ್ರಮದ ಪೋಸ್ಟರ್‌ನ್ನು ಬಿಡುಗಡೆ…

Read More

ಹೆರಿಟೇಜ್ ರನ್ : ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ- ಎಸ್ಪಿ ಲಕ್ಷ್ಮಣ ನಿಂಬರಗಿ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ಡಿಸೆಂಬರ್ 7 ರಂದು ರವಿವಾರ ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಸೂಸೂತ್ರವಾಗಿ ನಡೆಸಬೇಕು ಮತ್ತು ಅದೇ ದಿನ ನಡೆಯಲಿರುವ ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ವೃಕ್ಷಥಾನ್ ಹೇರಿಟೆಜ್ ರನ್ ಕೋರ್ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹೆರಿಟೇಜ್ ರನ್ ನಡೆಯುವ ಎರಡು ದಿನಗಳ…

Read More

ಭಗವದ್ಗೀತೆ ಕಂಠಪಾಠ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2 : ನಗರದ ವ್ಯಾಸ ಮದ್ವ ಸಂಸ್ಕೃತ ವಿದ್ಯಾಲಯದಲ್ಲಿ ಕುಮುದಿನಿ ಪ್ರತಿಷ್ಠಾನ ವತಿಯಿಂದ ಗೀತಾ ಜಯಂತಿಯ ನಿಮಿತ್ತವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಆಯೋಜಿಸಲಾಗಿತ್ತು. ಸುಮಾರು 50ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು. ನಿರ್ಣಾಯಕರಾಗಿ ಪಂಡಿತ್ ಅಜಯ ಆಚಾರ್ ಜೋಶಿ ಹಾಗೂ ಆನಂದ್ ಆಚಾರ್ ಜೋಶಿ ಅವರು ನಿರ್ವಹಿಸಿದರು . ಅಧ್ಯಕ್ಷ ವಹಿಸಿದ್ದ ಬಾಬುರಾವ್ ಕುಲಕರ್ಣಿ ಅವರು ಮಾತನಾಡಿ, ಇದು ಒಂದು ಯೋಗಶಾಸ್ತ್ರ ಎಂದು ಹೇಳುತ್ತೇವೆ. ಆದ್ದರಿಂದ…

Read More

ಸುರೇಶ ಜತ್ತಿಗೆ ರಾಷ್ಟ್ರ ಮಟ್ಟದ ಕರುನಾಡು ಕಲ್ಪವೃಕ್ಷ ರಾಷ್ಟ್ರೀಯ ಪ್ರಶಸ್ತಿ

ವಾರ್ತೆ, ವಿಜಯಪುರ, ಡಿ. 2: ನಗರದ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ನ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ಅವರಿಗೆರಾಷ್ಟ್ರ ಮಟ್ಟದ ಕರುನಾಡು ಕಲ್ಪವೃಕ್ಷ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.ಕರುನಾಡು ಕಲ್ಪವೃಕ್ಷ ಫೌಂಡೇಶನ(ರಿ),ಕರುನಾಡು ಕಲ್ಪವೃಕ್ಷ ಸಾಹಿತ್ಯ ವೇದಿಕೆ ಹಾಗೂ ಚಿತ್ರದುರ್ಗದಕರುನಾಡು ಕಲ್ಪವೃಕ್ಷ ಪ್ರಕಾಶನ ಇವರ ಸಹಯೋಗದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಸುರೇಶ ಜತ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಮೂಲಕ ಉತ್ತರ ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವ ಸಂಸ್ಥಾಪಕ ಅಧ್ಯಕ್ಷ ಸುರೇಶ…

Read More

ಡಿ.೪, ೫ರಂದು ಎರಡು ದಿನಗಳ ಕಾಲಶ್ರೀ ದತ್ತ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2:ನಗರದ ಬಸ್ ನಿಲ್ದಾಣದ ಬಳಿ ಇರುವ ಪುರಾತನ ಶ್ರೀ ನರಸಿಂಹ ದೇವಾಲಯದಲ್ಲಿ ಡಿ.೪ ಹಾಗೂ ೫ ರಂದು ಎರಡು ದಿನಗಳ ಕಾಲ ಶ್ರೀ ದತ್ತ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಶ್ರೀ ದತ್ತ ಜಯಂತಿ ಉತ್ಸವ ಮಂಡಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಂಡಳ, ಡಿ.೪ ರಂದು ಬೆಳಿಗ್ಗೆ ಶ್ರೀ ಗುರುಚರಿತ್ರ ಪಾರಾಯಣ ನಡೆಯಲಿದ್ದು, ಸಂಜೆ ೪-೩೦ಕ್ಕೆ ಶ್ರೀ ಉಮೇಶ ಉಪಾಧ್ಯಾಯ ಇವರಿಂದ ಕೀರ್ತನ ಸೇವೆ, ಸಂಜೆ…

Read More

ಶ್ರೀಶೈಲಯ್ಯ ಮಠಪತಿ ನಿಧನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 1: ಸರಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಚಾಲುಕ್ಯ ನಗರ ನಿವಾಸಿ ಶ್ರೀಶೈಲಯ್ಯ ಮಡಿವಾಳಯ್ಯ ಮಠಪತಿ (84) ಸೋಮವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ.ನಗರದ ಕೆ.ಎಚ್.ಬಿ ಕಾಲನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಅವರು ಸೇವೆ ಸಲ್ಲಿಸಿದ್ದರು.ವಯೋಸಹಜ ಕಾಯಿಲೆಯಿಂದ ನಿಧನರಾದ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು,‌ ಮೊಮ್ಮಕ್ಕಳು, ಮರಿಮೊಮ್ಮಗಳು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಚಾಲುಕ್ಯ ನಗರದ ರುದ್ರಭೂಮಿಯಲ್ಲಿ ಸಂಜೆ ನಡೆಯಿತು.

Read More