ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ:ರಕ್ಷಿತಾ ರಾಜು ಹರ್ಷ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 3: ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗುತ್ತಿರುವುದು ಸಂತಸದ ವಿಷಯ ಎಂದು ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ರಕ್ಷಿತಾ ರಾಜು ಹೇಳಿದ್ದಾರೆ.ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಲೇಟಿಕ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ನಾನಾ…


