ಕಾರ್ಗಿಲ್ ವಿಜಯ ದಿನ: ದೇಶಸೇವೆಗೆ ಸೈನ್ಯ ಸೇರುವುದು ಪುಣ್ಯದ ಅವಕಾಶ – ಕಲ್ಮೇಶ ಆಸಂಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ದೇಶ ಸೇವೆ ಮಾಡುವ ಅನೇಕ ಮಾರ್ಗಗಳಿದ್ದರೂ, ರಾಷ್ಟ್ರಕ್ಕಾಗಿ ಜೀವವನ್ನೇ ಅರ್ಪಿಸುವ ಅವಕಾಶ ಸೈನಿಕರಿಗೆ ಮಾತ್ರ ದೊರೆಯುತ್ತದೆ. ಸೈನ್ಯದಲ್ಲಿ ಸೇವೆ ಸಲ್ಲಿಸುವುದು ಪ್ರತಿಯೊಬ್ಬರಿಗೂ ಸಿಗದ ಪುಣ್ಯದ ಅವಕಾಶ ಎಂದು ಭೂಸೇನೆಯ ನಿವೃತ್ತ ಹವಾಲ್ದಾರ್ ಹಾಗೂ ದ್ರೋಣ ಸೋಲ್ಜರ್ಸ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಕಲ್ಮೇಶ ಆಸಂಗಿ ಹೇಳಿದರು.ನಗರದ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಹಾಗೂ ಗುರುಪೂರ್ಣಿಮೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರೂ ತಮ್ಮ…

Read More

ಸುಪ್ರೀಂಕೋರ್ಟ್ ತೀರ್ಪಿನಿಂದ ವಿಜಯಪುರ ವಿಮಾನ ನಿಲ್ದಾಣ ಆರಂಭಕ್ಕೆ ಹಸಿರು ನಿಶಾನೆ

ಪರಿಸರ ಅನುಮತಿ ದೊರೆತರೆ ಮೂರು ತಿಂಗಳಲ್ಲಿ ವಿಮಾನ ಹಾರಾಟ ಆರಂಭ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 29: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಕಾನೂನು ತೊಡಕು ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನಿಂದ ಯೋಜನೆಗೆ ಹೊಸ ಚೈತನ್ಯ ಸಿಕ್ಕಿದೆ. ಪರಿಸರ ಸಂಬಂಧಿತ ಅಂತಿಮ ಅನುಮತಿ ನಿರೀಕ್ಷೆಯಂತೆ ದೊರೆತರೆ ಮುಂದಿನ ಮೂರು ತಿಂಗಳೊಳಗೆ ವಿಜಯಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ವಿಶ್ವಾಸವಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್ ಆಗಸ್ಟ್ 1ರಂದು ವಿಜಯಪುರದಲ್ಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ನೃತ್ಯ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ‘ಸೂಪರ್ ಮಾಮ್’ ವಿಶೇಷ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲಿದ್ದು, ಇದರ ಆಡಿಷನ್‌ಗಳು ಆಗಸ್ಟ್ 1ರಂದು ವಿಜಯಪುರದಲ್ಲಿ ನಡೆಯಲಿವೆ.ಮನೆ, ಕುಟುಂಬ, ಉದ್ಯೋಗ ಹಾಗೂ ಮಕ್ಕಳ ಜವಾಬ್ದಾರಿಗಳ ನಡುವೆ ತಮ್ಮ ಪ್ರತಿಭೆಯನ್ನು ಮರೆಮಾಚಿಕೊಂಡಿರುವ ಅಮ್ಮಂದಿರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ಆಡಿಷನ್ ಆಯೋಜಿಸಲಾಗಿದೆ. ನೃತ್ಯದ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರು ಆಡಿಷನ್‌ನಲ್ಲಿ…

Read More

ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್‌ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ…

Read More

ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕಡ್ಡಾಯಗೊಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ರಾಷ್ಟ್ರಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕಾಲ ರಾಷ್ಟ್ರೀಯ ಕೆಡೆಟ್ ದಳ (ಎನ್‌ಸಿಸಿ) ತರಬೇತಿಯನ್ನು ಕಡ್ಡಾಯಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅನೇಕ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುವುದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಅಪಘಾತಗಳಿಗೆ…

Read More

ಯುವ ಪ್ರತಿಭೆಗಳ AI ಸ್ಟಾರ್ಟ್‌ಅಪ್‌ಗೆ ಸಚಿವ ಎಂ.ಬಿ. ಪಾಟೀಲ ಚಾಲನೆ

Merakify.ai ವೇದಿಕೆ ಉದ್ಘಾಟನೆ; ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರ ಪುತ್ರಿ ಸಾನ್ವಿ ಪಾಟೀಲ ಹಾಗೂ ಅವರ ತಂಡ ಆರಂಭಿಸಿರುವ ಪ್ರವಾಹ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ Merakify.ai ಕೃತಕ ಬುದ್ಧಿಮತ್ತೆ…

Read More

ಬುರಣಾಪುರದ 5 ಎಕರೆ ಜಮೀನಿನಲ್ಲಿ ನೀರು, ವಿದ್ಯುತ್, ಹಕ್ಕುಪತ್ರ ಸೇರಿ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಸ್ವರಾಜ್ಯ ಸೇನೆ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿಗಾಗಿ ಬುರಣಾಪುರ ಗ್ರಾಮದ ಸರ್ವೆ ನಂ. 67/1ರಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಸ್ವಾಗತಿಸಿದೆ.ಆದರೆ, ಜಮೀನು ಮಂಜೂರಾದರೂ ಪುನರ್ವಸತಿ ಕಾಮಗಾರಿ ವಿಳಂಬವಾಗದಂತೆ ತಕ್ಷಣವೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಮನವಿಯಲ್ಲಿ, ಪುನರ್ವಸತಿ ಪ್ರದೇಶದಲ್ಲಿ ನಿವಾಸಿಗಳು ಕೂಡಲೇ ನೆಲೆಸಲು ಅಗತ್ಯವಾದ ಕುಡಿಯುವ ನೀರು, ವಿದ್ಯುತ್,…

Read More

ಆನ್‌ಲೈನ್ ದ್ರಾಕ್ಷಿ ವ್ಯಾಪಾರಕ್ಕೆ ಯತ್ನಾಳ್ ಒತ್ತು

ವಾರಕ್ಕೆ ಎರಡು ದಿನ ಕಡ್ಡಾಯ ಇ-ಟ್ರೇಡಿಂಗ್; ರೈತರ ಹಿತಕ್ಕಾಗಿ ಸರ್ವಾನುಮತದ ನಿರ್ಣಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ದ್ರಾಕ್ಷಿ ಬೆಳೆಗಾರರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ವಹಿವಾಟು ಒದಗಿಸುವ ಉದ್ದೇಶದಿಂದ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಆನ್‌ಲೈನ್ ಟ್ರೇಡಿಂಗ್ ವ್ಯವಸ್ಥೆಯಲ್ಲೇ ಒಣ ದ್ರಾಕ್ಷಿ ವ್ಯಾಪಾರ ನಡೆಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಮಂಗಳವಾರ ನಡೆದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು,…

Read More

ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ಆಗಸ್ಟ್ 15ರಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ…

Read More

25ನೇ ವರ್ಷದ ಗಂಗಾಪೂಜೆಗೆ ಮಹಾಬಳೇಶ್ವರದತ್ತ ಉತ್ತರ ಕರ್ನಾಟಕದ ರೈತರ ಮಹಾಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28: ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ನದಿಯ ಉಗಮಸ್ಥಳ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬುಧವಾರ ನಡೆಯಲಿರುವ 25ನೇ ವರ್ಷದ ನಿರಂತರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 100ಕ್ಕೂ ಅಧಿಕ ರೈತರು, ರೈತ ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಮಹಾಬಳೇಶ್ವರದತ್ತ ಪ್ರಯಾಣ ಬೆಳೆಸಿದರು.ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಿಂದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ವಿಶೇಷ ವಾಹನಗಳಲ್ಲಿ ರೈತರ ತಂಡವನ್ನು ಬೀಳ್ಕೊಡಲಾಯಿತು….

Read More