ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ಯುವಕರ ನ್ಯಾಯಯುತ ಹೋರಾಟವನ್ನು ಗೌರವಿಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯುವಕರ ನ್ಯಾಯಯುತ ಬೇಡಿಕೆಗಳನ್ನು ಹತ್ತಿಕ್ಕುವ ಯಾವುದೇ ಪ್ರಜಾಪ್ರಭುತ್ವ ವಿರೋಧಿ ನಿಲುವು ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಇಂತಹ ನಡೆ ಅಪಾಯಕಾರಿ ಹಾಗೂ ಆತ್ಮಹತ್ಯಾತ್ಮಕ ಬೆಳವಣಿಗೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಸಂವಿಧಾನಬದ್ಧ ಹಕ್ಕು. ನೀಟ್…

Read More

ಯುವಕರನ್ನು ಕೆಣಕಿದವರು ಉದ್ಧಾರವಾಗಿಲ್ಲ; ಅವರ ಧ್ವನಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ದೇಶದ ಯುವಕರನ್ನು ಯಾರೂ ಕೆಣಕಬಾರದು. ಅವರನ್ನು ಕೆಣಕಿದವರು ಯಾರೂ ಉದ್ಧಾರವಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಭಾರತ ಯುವಕರ ದೇಶ. ಯುವಶಕ್ತಿಯೇ ರಾಷ್ಟ್ರದ ನಿಜವಾದ ಬಲವಾಗಿದ್ದು, ದೇಶದ ಭವಿಷ್ಯ ಅವರ ಕೈಯಲ್ಲಿದೆ. ಯುವಕರು ಮನಸ್ಸು ಮಾಡಿದರೆ ಇತಿಹಾಸವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ” ಎಂದು ಹೇಳಿದರು.ದೇಶದಲ್ಲಿ ಪ್ರತಿವರ್ಷ 20 ಲಕ್ಷಕ್ಕೂ ಹೆಚ್ಚು ಯುವಕರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದು, ಯಶಸ್ಸಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಾರೆ. ಆದರೆ…

Read More

ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More

ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತು ಬಿಜೆಪಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಭಾರತೀಯ ಜನತಾ ಪಕ್ಷದ ವಿಜಯಪುರ ಮಹಾನಗರ ಘಟಕದ ವತಿಯಿಂದ ವಾರ್ಡ್ ಸಂಖ್ಯೆ 21, 22, 23, 24 ಹಾಗೂ 25ರ ವ್ಯಾಪ್ತಿಯ ಶ್ರೀ ಸಾಕ್ಷಿ ಗಣಪತಿ ದೇವಸ್ಥಾನದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಹಾಶಕ್ತಿ ಕೇಂದ್ರ–04ರ ಆಶ್ರಯದಲ್ಲಿ ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತ ಮಹತ್ವದ ಸಭೆ ನಡೆಯಿತು. ರಾಜ್ಯದಲ್ಲಿ ಪಕ್ಷವು ಎಸ್‌ಐಆರ್ ಅಭಿಯಾನ ಹಾಗೂ ಬಿಎಲ್‌ಎ-2 ಕಾರ್ಯವನ್ನು ಸಂಘಟನಾತ್ಮಕವಾಗಿ ಬಲಪಡಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಭೆಗಳು ಆಯೋಜಿಸಲಾಗುತ್ತಿವೆ.ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಎಸ್‌ಐಆರ್…

Read More

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…

Read More

ಹಿರಿಯ ಪತ್ರಕರ್ತ ಪ್ರದೀಪ ಕುಲಕರ್ಣಿಗೆ ಮಾ. ರಾಮಮೂರ್ತಿ ದತ್ತಿನಿಧಿ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಮಾ. ರಾಮಮೂರ್ತಿ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗೆ ವಿಜಯಪುರದ ಹಿರಿಯ ಪತ್ರಕರ್ತ ಪ್ರದೀಪ ಅಣ್ಣಾಜಿ ಕುಲಕರ್ಣಿ ಅವರು ಭಾಜನರಾಗಿದ್ದಾರೆ.ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ದೀರ್ಘಕಾಲದ ನಿಷ್ಠಾವಂತ ಸೇವೆ, ವೃತ್ತಿಪರತೆ, ಪ್ರಾಮಾಣಿಕತೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸಂದ ಈ ಗೌರವ ನಿಜಕ್ಕೂ ಅವರ ಸಾಧನೆಯ ಪ್ರತೀಕವಾಗಿದೆ.ಅವರ ಮಾರ್ಗದರ್ಶನ, ಸರಳ ವ್ಯಕ್ತಿತ್ವ ಹಾಗೂ ಪತ್ರಿಕೋದ್ಯಮದ ಮೇಲಿನ ಬದ್ಧತೆ ಅನೇಕ ಯುವ ಪತ್ರಕರ್ತರಿಗೆ ಸ್ಫೂರ್ತಿದಾಯಕವಾಗಿದೆ.ಪ್ರದೀಪ ಕುಲಕರ್ಣಿ ಅವರಿಗೆ…

Read More

ರಾಷ್ಟ್ರಧ್ವಜ ಗೌರವವೇ ರಾಷ್ಟ್ರಗೌರವ: ರಾಷ್ಟ್ರೀಯ ಧ್ವಜ ದಿನ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಕಾಲೇಜು, ಕವಲಗಿಯಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಿದ ಐತಿಹಾಸಿಕ ದಿನವನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಕಾಲೇಜಿನ ಪ್ರಾಚಾರ್ಯರಾದ ಹೇಮಂತ್ ಕೃಷ್ಣ ಮಾತನಾಡಿ, “ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ಸ್ವಾತಂತ್ರ್ಯದ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ಗೌರವ…

Read More

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಸೈಬರ್ ಭದ್ರತಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆಯಾಗಿ, ಬಿಎಲ್‌ಡಿಇ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಅಮೆರಿಕ ಮೂಲದ ಬರಾಕುಡಾ ನೆಟ್‌ವರ್ಕ್ಸ್ ಸಂಸ್ಥೆಯೊಂದಿಗೆ ಪರಸ್ಪರ ಸಹಕಾರ ಒಪ್ಪಂದ (MoU)ಕ್ಕೆ ಸಹಿ ಹಾಕಿ, ಬರಾಕುಡಾ ಬೆಂಬಲಿತ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಅನ್ನು ಉದ್ಘಾಟಿಸಿತು.ಸೈಬರ್ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಬರಾಕುಡಾ ನೆಟ್‌ವರ್ಕ್ಸ್, ಕೌಶಲ್ಯಾಭಿವೃದ್ಧಿ, ವಿಶೇಷ ತರಬೇತಿ, ಹ್ಯಾಕಥಾನ್‌,…

Read More

‘ರಾಮ ಮಂದಿರ ಕುರಿತು ಸುಳ್ಳು ಮಾಹಿತಿ ಹರಡಿದ ಎಸ್.ಎಂ. ಪಾಟೀಲ ಗಣಿಹಾರ ದೇಶದ ಜನರ ಕ್ಷಮೆಯಾಚಿಸಲಿ’

ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿ ಮುಖಂಡ ರವೀಂದ್ರ ಲೋಣಿ ಸವಾಲು ಸಪ್ತಸಾಗರ ವಾರ್ತೆ,ವಿಜಯಪುರ, ಜು. 21:ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣವು ಜನರ ತೆರಿಗೆ ಹಣದಿಂದ ನಡೆದಿದೆ ಎಂಬ ಕಾಂಗ್ರೆಸ್ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಅವರ ಹೇಳಿಕೆ ಸಂಪೂರ್ಣ ಸುಳ್ಳು, ಜನರನ್ನು ದಿಕ್ಕು ತಪ್ಪಿಸುವ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದದ್ದು. ಕೂಡಲೇ ದೇಶದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರವೀಂದ್ರ ಲೋಣಿ ಆಗ್ರಹಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More