ಋತುಚಕ್ರ ರಜೆಯ ಸೌಲಭ್ಯ ಒದಗಿಸಲು ಸರ್ಕಾರದ ನಿರ್ಧಾರ: ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಮಹಿಳಾ ನೌಕರರಿಗೆ ವರ್ಷಕ್ಕೆ 12 ಋತುಚಕ್ರ ರಜೆಯ ಸೌಲಭ್ಯವನ್ನು ಒದಗಿಸಲು ಸರಕಾರ ನಿರ್ಧಾರ ಮಾಡಿದ್ದನ್ನು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಮಹಿಳೆಯರ ಸಾಂವಿಧಾನಿಕ ಸ್ಥಾನಮಾನ ಎತ್ತಿ ಹಿಡಿದಂತಾಗಿದೆ. ಏಕೆಂದರೆ ಇದು ಸಂವಿಧಾನದ 21 ನೇ ವಿಧಿಗನುಗುಣವಾಗಿ ಮಹಿಳೆಯರಿಗೆ ಘನತೆಯಿಂದ ಬದುಕುವ ಹಕ್ಕನ್ನು ಒದಗಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಘನ ಸರ್ಕಾರವು ಈ ಐತಿಹಾಸಿಕ ಮಹತ್ವದ…

Read More

ನಾಗಠಾಣದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಇಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಹೆಣ್ಣು ಮಕ್ಕಳಾದ ಅನುಶ್ರೀ- ಶ್ರೀನಿಧಿ ಬಂಡೆ, ಸಮೃದ್ಧಿ-ದೀಪಾ,ಭಾಗ್ಯ-ಸನ್ನಿಧಿ ಅವರು ಪರಸ್ಪರ ಸಿಹಿ ಹಂಚಿಕೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಿದರು.ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು…

Read More

ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ ಅ.10: ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು.ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿಧ ನರ್ಸಿಂಗ್ ಕಾಲೇಜು ಹಾಗೂ…

Read More

ಸಹಕಾರಿ ಯಶಸ್ಸಿಗೆ ಕಾನೂನು ಅರಿವು ಅಗತ್ಯ : ಸಚಿವ ಶಿವಾನಂದ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ಸಹಕಾರಿ ರಂಗದಲ್ಲಿರುವ ಎಲ್ಲರೂ ಪ್ರಾಮಾಣಿಕ, ಪಾರದರ್ಶಕ ಹಾಗೂ ಸೇವಾ ಮನೋಭಾವದ ಜೊತೆಗೆ ಕಾನೂನಿನ ಅರಿವಿನೊಂದಿಗೆ ಕೆಲಸ ಮಾಡಿಬೇಕಿದೆ. ಹಾಗಾದಲ್ಲಿ ಸಹಕಾರಿ ರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯವಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ವಿಜಾಪುರ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಹಾಗೂ ಸಹಕಾರಿ…

Read More

ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More

ಸಿದ್ಧಸಿರಿ: ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9: ನಗರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘವು ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2006ರ ಮೇ 29 ರಂದು ಶುಭ ಗಳಿಗೆಯಲ್ಲಿ ಪ್ರಾರಂಭವಾಗಿ ಕರ್ನಾಟಕ ರಾಜ್ಯದಾದ್ಯಂತ ಕಾರ್ಯಕ್ಷೇತ್ರ…

Read More

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ:ಮಹಾಬರಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9 : ಮಳೆ ನೀರು ಬಂದಾಗ ಅನೇಕ ಬಡಾವಣೆಗಳು ಅಕ್ಷರಶ: ನಡುಗಡ್ಡೆಯಾಗುತ್ತವೆ. ಈ ಎಲ್ಲ ಸಮಸ್ಯೆಗಳಿಗೆ ರಾಜಕಾಲುವೆಗಳ ವ್ಯವಸ್ಥೆ ಪುನರುಜ್ಜೀವನಗೊಳಿಸುವುದೇ ಪರಿಹಾರವಾಗಿದೆ. ಆದಿಲ್‌ಶಾಹಿ ಕಾಲದಲ್ಲಿ ಈಗಿರುವ ಜನಸಂಖ್ಯೆಗಿಂತ ೧೦ ಪಟ್ಟು ಹೆಚ್ಚು ಜನಸಂಖ್ಯೆ ಇತ್ತು. ಅರಸು ನೀರಿನ ಸಮರ್ಥ ಸದ್ಭಳಕೆಯ ಜೊತೆಗೆ ಮಳೆ ನೀರು ಹರಿದು ಹೋಗಲು, ಚರಂಡಿ ನೀರು ಹರಿದು ಹೋಗಲು ರಾಜಕಾಲುವೆ ನಿರ್ಮಿಸಿದ್ದರು. ಈ ವ್ಯವಸ್ಥೆ ಈಗಲೂ ಇದೆ. ಆದರೆ ರಾಜಕಾಲುವೆಗಳ ಒತ್ತುವರಿಯಿಂದಾಗಿ ನಗರದ ನೀರು ಹೊರ ಹೋಗದೇ…

Read More

ಶಿಫಾಗೆ ಜಿಲ್ಲಾಧಿಕಾರಿ ಆನಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿಯ ಸಂದೇಶ ಸಾರಿದ ವಿಜಯಪುರದ ಹೆಮ್ಮೆಯ ಕುಮಾರಿ ಶಿಫಾ ಜಮಾದಾರ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೃದಯಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ….

Read More