ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…

Read More