ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ. ಶಾಲೆ ವಿದ್ಯಾರ್ಥಿಗಳ ಸಾಧನೆ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 22:ದೆಹಲಿಯ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟ್ಯಾಕ್) ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ನಗರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ ಸಾವಳಗಿ ಹಾಗೂ ದರ್ಶ ಕುಲಕರ್ಣಿ ಅವರ…


