ಹಿರಿಯರ ಮರೆವಿನ ಕಾಯಿಲೆ ನಿರ್ಲಕ್ಷಿಸದಿರಿ, ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಲು ಸಲಹೆ
ಸಪ್ತಸಾಗರ ವಾರ್ತೆ,ವಿಜಯಪುರ, ಅ.13:ಹಿರಿಯ ನಾಗರಿಕರಲ್ಲಿ ಹೆಚ್ಚುತ್ತಿರುವ ಬುದ್ಧಿಮಾಂದ್ಯತೆ (ಡಿಮೆನ್ಷಿಯಾ) ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಕಾಯಿಲೆ ಪತ್ತೆಹಚ್ಚುವ ಉದ್ದೇಶದಿಂದ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ವೃದ್ಧಾಪ್ಯ ವೈದ್ಯಕೀಯ ವಿಭಾಗದಲ್ಲಿ ಮಂಗಳವಾರ ಬುದ್ಧಿಮಾಂದ್ಯತೆ ತಪಾಸಣಾ ಶಿಬಿರ ನಡೆಯಿತು.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಕಚೇರಿ ಸಹಯೋಗದಲ್ಲಿ, ಅಟಲ್ ವಯೋ ಅಭ್ಯುದಯ ಯೋಜನೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿ ಆಯೋಜಿಸಿದ್ದ…


