ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More

ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ‌ ಕಲ್ಯಾಣ ಇಲಾಖೆಯ‌ ಉಪ‌ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ‌ ಕಳಸಗೊಂಡ‌ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ

ಸಪ್ತಸಾಗರ ವಾರ್ತೆ ಹುಬ್ಬಳ್ಳಿ, ಅ. 5: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಹೌದು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಬ್ಯಾಗ್ ಮರೆತು ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು.ಘಟನೆ ನಡೆದ ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಮಹಿಳಾ ಪ್ರಯಾಣಿಕರಿಗೆ ಬ್ಯಾಗ್ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಗ್ ಹುಡುಕಿದ್ದು ಹೇಗೆ? : ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರು ಆಕಸ್ಮಿಕವಾಗಿ ತಮ್ಮ ಲಗೇಜ್ ಒಂದನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ಬಿಟ್ಟು,…

Read More

ಕಲ್ಯಾಣ ಕರ್ನಾಟಕದಲ್ಲಿ ನೆರೆ: ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ

ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…

Read More