
ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…