
ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು
ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…