ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 19:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಇರುವ ಅಲ್ಪಸಂಖ್ಯಾತರ ಇಲಾಖೆಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ‌ ನಡೆಸಿದರು.ವಿದ್ಯಾರ್ಥಿಗಳ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿ ದೆಸೆಯಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದಿಂದಿಗೆ ಪಠ್ಯೇತರ ಚಟುವಟಿಕಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು.‌ವಿದ್ಯಾರ್ಥಿ ಜೀವನದ ಅತ್ಯಂತ ಜೀವನದ ಅತ್ಯಂತ ಮಹತ್ವದ…

Read More

ಕಸ ಕಂಡರೆ ಫೋಟೋ ಕಳುಹಿಸಿ ಅಭಿಯಾನ: ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಿ- ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಡಾವಣೆ, ರಸ್ತೆ ಬದಿ, ಉದ್ಯಾನವನ, ಖಾಲಿ ನಿವೇಶನಗಳಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಸಾರ್ವಜನಿಕರ ಸಹಕಾರದೊಂದಿಗೆ ದೂರು ಸ್ವೀಕರಿಸಿದ 24 ಗಂಟೆಯೊಳಗೆ ವಿಲೇವಾರಿ ಮಾಡಲು ಕಸ ಕಂಡರೆ ಫೋಟೋ ಕಳುಹಿಸಿ ಎಂಬ ಅಭಿಯಾನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಈ ಅಭಿಯಾನದ ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸೂಚನೆ ನೀಡಿದ್ದಾರೆ.ಕಸ ಕಂಡರೆ ಫೋಟೋ…

Read More

ಆಗಸ್ಟ್ 20ರಂದು ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಶಾಂತಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 19:ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಶಾಂತಿ ಸಮಿತಿ ಸಭೆ ಆಗಸ್ಟ್ 20ರಂದು ಸಾಯಂಕಾಲ 4:00ಗೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಬೆಳೆ ಹಾನಿ ಕುರಿತು ಒಂದು ವಾರದಲ್ಲಿ ರೈತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ನಡಹಳ್ಳಿ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19:ರಾಜ್ಯದಲ್ಲಿ ಭಾರೀ ಮಳೆಯಿಂದ ರೈತರ ಬೆಳೆಗಳು ಹಾಳಾಗಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಿಎಂ ಹಾಗೂ ಸಚಿವರ ನಡೆ ಖಂಡನೀಯ. ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದಾಗ ತುರ್ತಾಗಿ ಪರಿಹಾರ ನೀಡಿದ್ದರು.ಆಗ ಯಡಿಯೂರಪ್ಪ ಒಂಟಿಯಾಗಿ 14 ಜಿಲ್ಲೆಗಳ ಪ್ರವಾಹ…

Read More

ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19:ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಗ್ರಾಹಕಸ್ನೇಹಿ ಆಗುವ ಉದ್ದೇಶ ಹೊಂದಿದೆ. ಜೊತೆಗೆ ಭದ್ರತೆಯ ದೃಷ್ಟಿಯಿಂದಾಗಿ ಆಧುನಿಕ ಸೌಲಭ್ಯಗಳನ್ನು ನೀಡಲು ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ತಿಳಿಸಿದರು.ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕಿನ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆ ಮಾಡಿ…

Read More

ಛಾಯಾಗ್ರಾಹಕರ ಉತ್ತೇಜನಕ್ಕೆ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಲು ಕಾರಜೋಳ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ಛಾಯಾಗ್ರಾಹಕರು ಇಂದು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭ ಮಾಡಿ ಛಾಯಾಗ್ರಾಹಕರ ತೊಂದರೆಗಳನ್ನು ನಿವಾರಿಸಬೇಕು ಎಂದು ಯುವ ಭಾರತ ಸಮಿತಿ ಅಧ್ಯಕ್ಷ ಹಾಗೂ ಹವ್ಯಾಸಿ ಛಾಯಾಗ್ರಾಹಕ ಉಮೇಶ ಕಾರಜೋಳ ಹೇಳಿದರು.ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಛಾಯಾಗ್ರಹಣ ಅಕಾಡೆಮಿಯಿಂದ ಛಾಯಾಗ್ರಾಹಕರಿಗೆ ಹೆಚ್ಚಿನ ಜ್ಞಾನ ವಿಸ್ತರಿಸಿಕೊಳ್ಳಲು ಮತ್ತು ಸರ್ಕಾರದ ಸವಲತ್ತುಗಳನ್ನು…

Read More

1001 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 18: ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ಥಾಪನೆಯಾಗಿರುವ ಶರತ್ ಪಾಟೀಲ ಫೌಂಡೇಶನ್ ಹಾಗೂ ನನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ನಗರದ ಆಶ್ರಮ ರಸ್ತೆಯಲ್ಲಿರುವ ಜಾಗೆಯಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ ನಡೆಯಿತು‌.ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ, ನಮ್ಮನ್ನು ಸಲುಹುತ್ತಿರುವ ಪರಿಸರ ನಮಗೆ ಬೆಲೆ ಕಟ್ಟಲಾಗದ…

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More

ತೋಟಗಾರಿಕೆ ಇಲಾಖೆಯಿಂದ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಹೊಸದಾಗಿ ನಿರ್ಮಿಸಿದ ತೋಟಗಾರಿಕೆ ಉತ್ಪನ್ನಗಳ ಪೂರ್ಣ ಪ್ರಮಾಣದ ಮೌಲ್ಯವರ್ಧಿತ ಸಂಸ್ಕರಣೆ ಘಟಕಗಳು, ಔಷಧಿ ಮತ್ತು ಸುಗಂಧ ದ್ರವ್ಯಗಳ ಘಟಕಗಳನ್ನೊಳಗೊಂಡಂತೆ, ಪ್ರಾಯೋಗಿಕ ಉತ್ಪಾದನೆ ಮತ್ತು ವಾಣಿಜ್ಯ ಉತ್ಪಾದನೆ ಕೈಗೊಳ್ಳುವ ಘಟಕಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಒದಗಿಸಲಾಗುವ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದ್ರಾಕ್ಷಾರಸ ಉತ್ಪಾದನಾ ಘಟಕ, ಹಣ್ಣು ಮತ್ತು ತರಕಾರಿ ಸಂಸ್ಕರಣೆ-ಕ್ಯಾನಿಂಗ್ ಘಟಕ, ಉಪ್ಪಿನಕಾಯಿ ಘಟಕ, ಸುಗಂಧದ್ರವ್ಯ-ಔಷಧಿ ಸಸ್ಯಗಳ ಸಂಸ್ಕರಣಾ ಘಟಕಗಳು, ಗರ್ಕಿನ್ ಘಟಕಗಳು ಇತ್ಯಾದಿ ಘಟಕಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದು. ಈ ಕುರಿತಂತೆ…

Read More

ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More