ಯೋಜನೆಗಳ ಜಾರಿಗೆ ಅನುದಾನ ನೀಡದ ಸರ್ಕಾರ: ಕಾರಜೋಳ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದೆ. ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅನೇಕ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಈ…

Read More

ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 8:ಜಿಲ್ಲೆಯ ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮದಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಜರುಗಿತು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸಲೂ ಸಹ ಹಿಂದೇಟು ಹಾಕುವಂತಹ ವ್ಯವಸ್ಥೆ ಆಗಿನ ಕಾಲದಲ್ಲಿತ್ತು. ಈ ನಿಟ್ಟಿನಲ್ಲಿ ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ, ಲಿಂಗ ಅಸಮಾನತೆ ಮತ್ತು ಶೈಕ್ಷಣಿಕ ಅಸಮಾನತೆ ವ್ಯವಸ್ಥೆಯನ್ನು ಹೋಗಲಾಡಿಸಲು ಮತ್ತು ಉತ್ತಮ…

Read More

ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More

ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರ್ ಗಳನ್ನು…

Read More

ಜಿಲ್ಲಾಧಿಕಾರಿ ಡಾ.ಆನಂದ ವಿವಿಧೆಡೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 7: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ…

Read More

ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.7 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ…

Read More

ಸಂಸದ ರಮೇಶ ಜಿಗಜಿಣಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ್ ಶಿಂಧೆ ಜೊತೆಗೆ ಸೌಹಾರ್ದ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.

Read More

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಸಾವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 7:ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಗರ ಹೊರ ವಲಯದ ಯೋಗಾಪುರ ಗ್ರಾಮದಲ್ಲಿ ನಡೆದಿದೆ.ಶ್ರೀ ಸತ್ಯ ಸಾಯಿಬಾಬಾ ಶಾಲೆಯ ವಿದ್ಯಾರ್ಥಿ ಅನ್ಸ್ (11) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಸುನೀಲ್ ಪುತ್ರ ಅನ್ಸ್5ನೇ ತರಗತಿಯಲ್ಲಿ ಓದುತ್ತಿದ್ದ. ಕೈಯಲ್ಲಿ ಕಟ್ಟುವ ವಾಚ್ ಗಾಗಿ ಬಾಲಕ ಅನ್ಸ್ ಈತನ ಮೇಲೆ 9ನೇ ತರಗತಿ ಬಾಲಕರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದ ಅನ್ಸ್ ಈತನನ್ನು ಅವರ ಪೋಷಕರು…

Read More

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More