ಜಾರ್ಜೀಯಾ ದೇಶದಲ್ಲಿ ಎಂಬಿಬಿಎಸ್ ಪೂರೈಸಿದ ವಿವಿಧಾ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಜಾರ್ಜೀಯಾ ದೇಶದ ರಾಜದಾನಿ ಟೀಬ್ಲೀಸಿಯ ಜಾರ್ಜೀಯನ್ ನ್ಯಾಶನಲ್ ವೈದ್ಯಕೀಯ ವಿಶ್ವವಿದ್ಯಾಲಯದಿಂದ ವಿಜಯಪುರದ ವಿವಿಧಾ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಎಂಬಿಬಿಎಸ್ ಪದವಿಯನ್ನು ಪಡೆದುಕೊಂಡಿದ್ದಾರೆ.ವಿಶ್ವ ವಿದ್ಯಾಲಯದ ಘಟಕೋತ್ಸವದಲ್ಲಿ ವಿಜಯಪುರದ ವಿವಿಧಾ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಅವರಿಗೆ ಎಂಬಿಬಿಎಸ್ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. ಯೂನಿರ್ವಸಿಟಿ ಪೌಂಡರ್ GIA KAVTELISHVILLI, ಲೇಡಿ ಡೀನ್ MAIA ADVADGE ಹಾಗೂ ಡೈರೆಕ್ಟರ್ MARTVILI CANYON ಉಪಸ್ಥಿತರಿದ್ದರು.ಕಳೆದ ಎರಡು ವರ್ಷಗಳ ಹಿಂದೆ ಉಕ್ರೇನ್ ಯುದ್ದದಲ್ಲಿ ಸಿಲುಕಿ ತೊಂದರೆ ಅನುಭವಿಸಿದ ವಿವಿಧಾ ನಂತರ…

Read More

ಬಸವರಾಜಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29 :ಇಲ್ಲಿನ ಸಂಗನಬಸವ ಶಿಶುನಿಕೇತನ (ಸಿ.ಬಿ.ಎಸ್.ಇ) ಶಾಲೆಯ ಚಿತ್ರಕಲಾ ಶಿಕ್ಷಕ ಬಸವರಾಜ ಹನಮಪ್ಪ ಹಡಪದ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಬಸವರಾಜ ಅವರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಚಿತ್ರಕಲಾ ಕ್ಷೇತ್ರದಲ್ಲಿ ಹಲವಾರು ಗುಂಪು ಚಿತ್ರಕಲಾ ಪ್ರದರ್ಶನ, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಹಲವಾರು ಕಲಾಕೃತಿಗಳಿಗೆ ನಗದು ಬಹುಮಾನ, ಹಲವಾರು ಕಲಾಕೃತಿಗಳಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿಗಳು ಮತ್ತು ಹಲವಾರು ಕಲಾ ಶಿಬಿರಗಳು ಹಾಗೂ 2023-24…

Read More

ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.5ರ ಉಪ ಚುನಾವಣೆ:ಚುನಾವಣಾ ವೇಳಾ ಪಟ್ಟಿ ನಿಗದಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 6 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ…

Read More

ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More

ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28 :ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ, ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ…

Read More

ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ವಿಜಯಪುರ ಉತ್ತರ ರೋಟರ ಸಂಸ್ಥೆ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ವಿಜಯಪುರದ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಜು. 28 ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಮುದ್ದು ನಾಯಿಗಳಿಗೆ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.ಸುಮಾರು 70ಕ್ಕೂ…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More

ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ…