ಬೆಂಬಲ ಬೆಲೆಯಡಿ ಕುಸುಬೆ ಖರೀದಿ
ಸಪ್ತಸಾಗರ ವಾರ್ತೆ,ವಿಜಯಪುರ, ಏ.7: 2026 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 6540.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ 5 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುತ್ತದೆ.ನೋಂದಣಿ ಅವಧಿ 80 ದಿನಗಳವರೆಗೆ ಇದೆ. ಖರೀದಿ ಅವಧಿ 90 ದಿನ ಇರುತ್ತದೆ. ನೋಂದಣಿಯೊಂದಿಗೆ…


