ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಸಾಹಿತಿ ಭಜಂತ್ರಿಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17: ಸಾಹಿತಿ ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ನಗರದ ಶ್ರೀ ಏಳು ಮಕ್ಕಳ ತಾಯಿ ಜಾತ್ರಾ ಮಹೋತ್ಸವ ಸಮಿತಿಯು ದೊಡ್ಡಣ್ಣ ಅವರು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಸತ್ಕರಿಸಲಾಯಿತು.ಯುವ ಧುರೀಣ ರಾಮನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Read More

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 17:ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಫ್ಯಾಶನ್‌ ಟೆಕ್ನಾಲಜಿ (ಎನ್.ಐ.ಎಫ್.ಟಿ) ಸಂಸ್ಥೆಯ ವಿದ್ಯಾರ್ಥಿಗಳು ಕ್ಷೇತ್ರಾಧ್ಯಯನಕ್ಕಾಗಿ ಆಗಮಿಸಿದ್ದಾರೆ. ಇದರ ಜೊತೆಗೆ ದೇಶದ ನಾನಾ ಭಾಗಗಳು ವಸ್ತ್ರ ವಿನ್ಯಾಸ ಸಂಸ್ಥೆಗಳು ಕೂಡ ಈ ಬಗ್ಗೆ ಆಸಕ್ತಿ ತೋರಿಸಿ, ಸಂಪರ್ಕಿಸುತ್ತಿವೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ ಪಾಟೀಲ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ʻವಿಜಯಪುರ ಜಿಲ್ಲೆಯಲ್ಲಿ ಮೊದಲಿನಿಂದಲೂ ಲಂಬಾಣಿ ಕಲೆ, ಕಸೂತಿ ಇತ್ಯಾದಿಗಳು ಬೇರೂರಿಕೊಂಡು ಬಂದಿದ್ದವು. ಈ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

17 ರಂದು ಬಾನು ಮುಷ್ತಾಕ್ ಅವರ ಬರಹಗಳ ಕುರಿತು ವಿಚಾರ ಸಂಕಿರಣ.

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಅಂಜುಮನ್-ಇ-ಇಸ್ಲಾಂ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಭೂಕರ್ ಪ್ರಶಸ್ತಿ ಪಡೆದ ಡಾ. ಬಾನು ಮುಷ್ಕಾಕ್ ಅವರ ಬರಹಗಳ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜು.17 ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತಿಗಳು ಹಾಗೂ ಡಿವಾಯ್ಎಸ್ಪಿ ಬಸವರಾಜ ಯಲಿಗಾರ ಉದ್ಘಾಟಿಸುವರು.ಸಂಸ್ಥೆಯ ಅಧ್ಯಕ್ಷ ಸಜ್ಜಾದೆ ಪೀರಾ ಮುಶ್ರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಷಯ ನಿರೂಪಕರಾಗಿ ಸಾಹಿತಿಗಳಾದ ಡಾ. ಮುರ್ತುಜಾಬೇಗಂ ಕೊಡಗಲಿ, ಡಾ….

Read More