ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…