ಆದ್ಯ ವಚನಕಾರ ದೇವರ ದಾಸಿಮಯ್ಯ ಜಾಡ ಕುಲತಿಲಕ – ಡಾ. ಎಂ.ಎಸ್. ದಡ್ಡೇನವರ

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 24:ದೇವರ ದಾಸಿಮಯ್ಯನವರು ಬಸವಪೂರ್ವ ಶರಣ, ಆದ್ಯ ವಚನಕಾರನಾಗಿ ಹನ್ನೆರಡನೇ ಶತಮಾನದ ಅನುಭವ ಮಂಟಪದ ಎಲ್ಲ ಶರಣರಿಗೆ ಮಾರ್ಗದರ್ಶಿ ವಚನಗಳನ್ನು ಮೊದಲ ಬಾರಿಗೆ ಸರಳವಾಗಿ ನೀಡಿದ ಮಹಾನುಭಾವರು. ಇಂದು ಅವರ ಹೆಸರಿನಲ್ಲಿ ಸಭಾಭವನ ಉದ್ಘಾಟನೆಗೊಳ್ಳುತ್ತಿರುವದು ಬಹಳ ಸಂತೋಷ. ದಾಸಿಮಯ್ಯನವರು ಜಾಡ ಕುಲತಿಲಕರಾಗಿದ್ದಾರೆ ಎಂದು ಡಾ. ಎಂ. ಎಸ್. ದಡ್ಡೆನವರ ಹೇಳಿದರು.ರವಿವಾರ ನಗರದ ವೇದಮಾತೆ ಗಾಯತ್ರಿ ಪ್ರತಿಷ್ಠಾನದ ಆವರಣದಲ್ಲಿ ಆದ್ಯವಚನಕಾರ ದೇವರ ದಾಸಿಮಯ್ಯ ಸಭಾಭವನ ಉದ್ಘಾಟಿಸಿ ಮಾತನಾಡಿದ ಅವರು, ನೇಕಾರ ಸಮಾಜದ ಆದ್ಯಗುರುವಾದ ದಾಸಿಮಯ್ಯನವರು…

Read More

ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…

Read More

ಹಾಸ್ಟೆಲ್ ಮೆಂಟರ್ ಗಳ ನೇಮಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ,ಆ. ೨೪:ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್ ಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.ಜಿಲ್ಲೆಯ ವಿನೂತನ ಅಭಿಯಾನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್ ಈಗಾಗಲೇ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ಉಜ್ವಲ ಭವಿಷ್ಯದ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವ…

Read More

ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…

Read More

ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More

ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ

ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…

Read More

ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ‌ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More