ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.12:ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 21ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-1: 7760992263, ವಿಜಯಪುರ-2: 7760992264,…

Read More

ಡಿ.22 ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11:ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2025-26ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಡಿ.22 ರಂದು ಬೆಳಿಗ್ಗೆ 10:30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಸಭೆಯಲ್ಲಿ ಸದಸ್ಯರು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More

ಶಂಕರ ಶ್ರೀ ದತ್ತಿ ನಿಧಿ ಪ್ರಶಸ್ತಿಗೆ ಪ್ರೊ. ಶಾಂತ ನಾಯಕ್ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8:ಪ್ರಸಕ್ತ ಸಾಲಿನ “ಶಂಕರ ಶ್ರೀ” ದತ್ತಿ ನಿಧಿ ಪುರಸ್ಕಾರಕ್ಕೆ ಪ್ರೊ. ಸಿರಗಾನಹಳ್ಳಿ ಶಾಂತನಾಯ್ಕ್ ಅವರು ಆಯ್ಕೆಯಾಗಿದ್ದಾರೆ.ಬಂಜಾರಾ ಸಮುದಾಯದ ಪ್ರೊಫೆಸರ್ ಸಿರಗಾನಹಳ್ಳಿ ಶಾಂತನಾಯ್ಕ್ ಸಾಮಾಜಿಕ ಜೀವನದಿಂದ ದೂರ ಉಳಿದ ತಾಂಡಾ ಬದುಕನ್ನು ಕಂಡುಂಡವರು. ತಾಂಡಾದಿಂದ ಅಮೇರಿಕಾದ Wisconsin ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ ಹೆಗ್ಗಳಿಕೆ ಇವರದು. ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವಿದ್ಯಾರ್ಥಿಗಳಿಗೆ ನಾಟಕ, ಜಾನಪದ ಗೀತೆ, ಭಾವಗೀತೆಗಳನ್ನು ಹೇಳಿ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಕರೆದೊಯ್ದರು. ಕಲ್ಯಾಣ ಕರ್ನಾಟಕದ ಗಡಿ ಭಾಗದ…

Read More

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರ- ಡಾ. ಬನುದೇವಿ ಸಂಕಣ್ಣವರ

ಸಪ್ತ ಸಾಗರ ವಾರ್ತೆ, ವಿಜಯಪುರ,ಡಿ.8: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ದೇಶದ ಘನತೆ ಸಂಸ್ಕೃತ ಮತ್ತು ಸಂಸ್ಕೃತಿ ಎಂಬ ಎರಡು ಅಸ್ತಿವಾರಗಳಲ್ಲಿ ನಿಂತಿದೆ ಎಂದು ವಿಶ್ರಾಂತ ಉಪನ್ಯಾಸಕಿ ಡಾ. ಬನುದೇವಿ ಸಂಕಣ್ಣವರ ಹೇಳಿದರು.ನಗರದ ಪಿಡಿಜೆ ಹೈಸ್ಕೂಲಿನಲ್ಲಿ ಬೆಂಗಳೂರಿನ ಅಗರಖೇಡ ಪ್ರತಿಷ್ಠಾನ ಮತ್ತು ಇಲ್ಲಿಯ ವಿಜಯಪುರ ಸಂಸ್ಕೃತ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸಂಸ್ಕೃತವು ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ನಾಸಾ ಸಂಶೋಧನೆಗಳಲ್ಲಿ ಸಂಸ್ಕೃತದ ಉಪಯೋಗದ ಸಾಧ್ಯತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ….

Read More

ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನ ಬಳಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು…

Read More

ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಶಾಸ್ತ್ರಿ ನಗರದ ಇಂಡಿಯನ್ ಪಬ್ಲಿಕ್  ಶಾಲೆಯ ವಿದ್ಯಾರ್ಥಿ ಅಫ್ಫಾನ್  ಇ. ಬಾಗವಾನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.ಇತ್ತೀಚೆಗೆ KBHPS No.5 ವಿಜಯಪುರ ಶಾಲೆಯಲ್ಲಿ  ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ M. Y. Vaggar, ಇಟಗಿ ಕಾಲೋನಿ ವಿಜಯ ಪುರ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

2030 ರೊಳಗೆ 2.5 ಲಕ್ಷ ಮನೆಗಳಿಗೆ ಸಿ.ಎನ್.ಜಿ ಗ್ಯಾಸ್ ಸಂಪರ್ಕ ಗುರಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಮನೆಗಳಿಗೆ ನೇರವಾಗಿ ಸಿ.ಎನ್.ಜಿ ಸರಬರಾಜು ಮಾಡಿ, ನಗರವನ್ನು ಮಾಲಿನ್ಯ ಮುಕ್ತವಾಗಿಡುವ ಬಹಳ ದಿನಗಳ ಕನಸು ಥಿಂಕ್ ಗ್ಯಾಸ್ ಸಿ.ಎನ್.ಸಿ ಮೂಲಕ ನಡೆಯುತ್ತಿದೆ. 2030 ರೊಳಗೆ 2.5 ಲಕ್ಷ ಮನೆಗಳಿಗೆ ನೇರವಾಗಿ ಪಿ.ಎನ್.ಜಿ ಗ್ಯಾಸ್ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರದಲ್ಲಿ ಶುಕ್ರವಾರ ಥಿಂಕ್ ಗ್ಯಾಸ್ ಸಿ.ಎನ್.ಜಿ ಸ್ಟೇಶನ್ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ ನಗರದಲ್ಲಿ 120 ಮನೆಗಳು ಮತ್ತು…

Read More

ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾದ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.6: ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾಧ್ಯ. ಉತ್ತಮ ಪರಿಸರದಿಂದಲೇ ಉತ್ತಮ ಆರೋಗ್ಯ ಹೊಂದಬಹುದು. ನಮ್ಮ ಸುತ್ತಮುತ್ತಲಿನ ಪರಿಸರ ನಮ್ಮ ನಡವಳಿಕೆ ಹಾಗೂ ವಿಚಾರಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ಚಿಂತಕರು, ಇತಿಹಾಸ ತಜ್ಞರು, ಹಿರಿಯ ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೇಳಿದ್ದಾರೆ.ವೃ,ಕ್ಷಥಾನ್ ಹೆರಿಟೇಜ್ ರನ್-2025ರ ಮುನ್ನಾ ದಿನವಾದ ಇಂದು ಶನಿವಾರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾನಾ ಚರ್ಚಾಗೋಷ್ಠಿಯಲ್ಲಿ ಮಾತನಾಡಿದ ಗಣ್ಯರು ಪರಿಸರ ಸಂರಕ್ಷಣೆ, ಪ್ರಾಚೀನ…

Read More