ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ : ಸಿಎಂ ಸಿದ್ದರಾಮಯ್ಯ
We have not banned the RSS: CM Siddaramaiah.
We have not banned the RSS: CM Siddaramaiah.
ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ ಕಳಸಗೊಂಡ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ ಹುಬ್ಬಳ್ಳಿ, ಅ. 5: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಹೌದು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಬ್ಯಾಗ್ ಮರೆತು ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು.ಘಟನೆ ನಡೆದ ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಮಹಿಳಾ ಪ್ರಯಾಣಿಕರಿಗೆ ಬ್ಯಾಗ್ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಗ್ ಹುಡುಕಿದ್ದು ಹೇಗೆ? : ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರು ಆಕಸ್ಮಿಕವಾಗಿ ತಮ್ಮ ಲಗೇಜ್ ಒಂದನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ಬಿಟ್ಟು,…
ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…
ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…
ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…
ಸಪ್ತಸಾಗರ ವಾರ್ತೆ ರಾಮನಗರ, ಸೆ.19:“ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…
ಸಪ್ತಸಾಗರ ವಾರ್ತೆ, ಕೊಯಮತ್ತೂರು, ಸೆ.9:ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ….
ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…