ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ‌ ಕಲ್ಯಾಣ ಇಲಾಖೆಯ‌ ಉಪ‌ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ‌ ಕಳಸಗೊಂಡ‌ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕಲ್ಯಾಣ ಕರ್ನಾಟಕದಲ್ಲಿ ನೆರೆ: ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ

ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…

Read More

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ

ಸಪ್ತಸಾಗರ ವಾರ್ತೆ ರಾಮನಗರ, ಸೆ.19:“ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More

ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More