
ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….