ಡಾ.ರಾಜಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.17:ಡಾ. ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಏಪ್ರಿಲ್ 24ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು,ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಏ.18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ವಿದ್ಯುತ್ ಕುಂದುಕೊರತೆಗಳ ಆಲಿಕೆಗೆ ಏ.18ರಂದು ಗ್ರಾಹಕರ ಸಂವಾದ ಸಭೆ

ಸಪ್ತಸಾಗರ ವಾರ್ತೆವಿಜಯಪುರ,ಏ.16:ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಏ.18ರಂದು ಮಧ್ಯಾಹ್ನ 3.30ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಛೇರಿಯಲ್ಲಿ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಛೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಹಾಗೂ ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿಜಯಪುರ ಗ್ರಾಮೀಣ ಉಪ ವಿಭಾಗದ ಹೆಸ್ಕಾಂನ…

Read More

ಏ. 23 ರಿಂದ ಜಾನುವಾರುಗಳ ಕಾಲು ಬಾಯಿ ಜ್ವರದ ವಿರುದ್ದ ಉಚಿತ ಲಸಿಕಾ ಅಭಿಯಾನ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಏ.23 ರಿಂದ ಮೇ.22 ರವರೆಗೆ ಜಿಲ್ಲೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದ್ದಾರೆ.ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ 9ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ರ್ನಿಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ…

Read More

ಶಿವಗಂಗಾಗೆ ಪಿಎಚ್ ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶಿವಗಂಗಾ ಅವರು ಸಲ್ಲಿಸಿದ್ದ “ಅಸೆಸ್‌ಮೆಂಟ್ ಆಫ್ ಲೈಬ್ರರಿ ಆ್ಯಂಕ್ಸೆಟಿ ಅಮಂಗ್ ಡಿಫರಂಟ್ ಕೆಟಗರೀಸ್ ಆಫ್ ಯುಸರ್ಸ: ಎ ಕಂಪ್ಯಾರೇಟಿವ್ ಅನಾಲಿಸಸ್ ಆಫ್ ಸೆಲೆಕ್ಟಡ್ ಯುನಿವರ್ಸಿಟಿ ಇನ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಶಿವಗಂಗಾ ಅವರು ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಪ್ರೊ. ಪಿ.ಜಿ ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶಿವಗಂಗಾ ಅವರನ್ನು ಕುಲಪತಿ…

Read More

ರಸಗೊಬ್ಬರ ಕೃತಕ ಅಭಾವ ಸ್ಟಷ್ಟಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ರಸಗೊಬ್ಬರ ಮಾರಾಟ ಸಂಬಂಧಿಸಿದಂತೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ, ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಸಂಬಂಧಪಟ್ಟವರ ವಿರುದ್ಧ ‌ನಿಯಮಾನುಸಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಎಚ್ಚರಿಕೆ ನೀಡಿದರು.ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಸಗೊಬ್ಬರ ಉತ್ಪಾದಕರು ಹಾಗೂ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ರಸಗೊಬ್ಬರಗಳನ್ನು ಪಿಒಎಸ್ (ಪಾಯಿಂಟ್ ಆಫ್‌ ಸೇಲ್) ಯಂತ್ರದ ಮೂಲಕವೇ ಕಡ್ಡಾಯವಾಗಿ…

Read More

ಒಂದು ಕಲಾಕೃತಿ ಒಂದು ಕಾದಂಬರಿಗೆ ಸಮ- ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16:ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ವಿಶ್ವ ದೃಶ್ಯಕಲಾ ದಿನಾಚರಣೆಯ ಅಂಗವಾಗಿ ಕ್ಯಾನವಾಸ್ ಆರ್ಟ್ ಫೌಂಡೇಶನ್ ನಾಡಿನ ಶ್ರೇಷ್ಠ ಕಲಾವಿದರ ಕಲಾಕೃತಿಗಳ ಪ್ರದರ್ಶನ ವಿಜಯಪುರದಲ್ಲಿ ಆಯೋಜಿಸಿರುವುದು ಅತ್ಯಂತ ಸಂತಸದ ಸಂಗತಿ. ದೃಶ್ಯಕಲಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿ ವರ್ಣಶಿಲ್ಪಿ ವೆಂಕಟಪ್ಪ ಪುರಸ್ಕೃತ ಕಲಾವಿದರ ಕಲಾಕೃತಿಗಳು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ವಾಸುದೇವ ಕಾಮಾತ್ ಅವರ ಕಲಾ ಕೃತಿ ಜೊತೆಗೆ ನಾಡಿನ ಹಿರಿಯ ಮತ್ತು ಯುವ ಕಲಾವಿದರ ಕಲಾಕೃತಿಗಳು ಒಂದೆಡೆ…

Read More

ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಇ.ಡಿ ಸೆಲ್(ED Cell)ವತಿಯಿಂದ, ಆಯುರ್ವೇದ ವೈದ್ಯಕೀಯ ಪದ್ಧತಿಯ ತತ್ವಗಳನ್ನು ನವೀಕರಿಸುವ ಹೊಸ ತರ್ಕ ಮಂಡನೆಯ ಕುರಿತು ವಿದ್ಯಾರ್ಥಿಗಳಿಗೆ ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ ಶನಿವಾರ ನಡೆಯಿತು.ಈ ಕಾರ್ಯಕ್ರಮವನ್ನು ಉದ್ಘಾಟಸಿದ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಡಾ.ಬಿ.ಶ್ರೀನಿವಾಸ ಪ್ರಸಾದ, ಇಂದಿನ ದಿನಗಳಲ್ಲಿ ಆಯುರ್ವೇದ ಪದ್ಧತಿಯನ್ನು ವೈಜ್ಞಾನಿಕರಣ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್…

Read More

ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನುಡಬೇಕು- ಡಾ. ಗುಡ್ಡಾ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಲು ಸಾಧ್ಯ ಎಂದು ನವದೆಹಲಿ ಎನ್.ಸಿ.ಐ.ಎಸ್.ಎಂ ಬೋರ್ಡ್ ಆಫ್ ಆಯುರ್ವೇದ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡಾ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನದ ಕೇಂದ್ರದ ವತಿಯಿಂದ ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ…

Read More

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ: ಬಿಎಲ್ ಡಿಇ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆ ನೂರಕ್ಕೆ ನೂರರಷ್ಟು ಸಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯು ಶೇ. 100 ರಷ್ಟು ಪಲಿತಾಂಶ ದಾಖಲಿಸಿದೆ.ಶಾಲೆಯ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಶೇ. 97.80 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದರೆ, ಸಾನ್ವಿ ಬಸವರಾಜ ಎಲಿಗಾರ ಶೇ. 97.20 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ನೇಹಾ ಗಿರೀಶ ಪಾಟೀಲ ಶೇ. 95.40 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾಳೆ.ಪರೀಕ್ಷೆಗೆ…

Read More

ಏ.21ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು,ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು.ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ…

Read More