ಕನಸಿನ ಮನೆಗೆ ‘ಎಂ. ಬಿ. ಪಾಟೀಲ ನಿಲಯ’ ಹೆಸರು: ಕೃತಜ್ಞತೆಯ ಮೂಲಕ ಗಮನ ಸೆಳೆದ ರೈತ ಕುಟುಂಬ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಬರದ ನಾಡಿನಲ್ಲಿ ನೀರಾವರಿಯಿಂದ ಬದುಕು ಬದಲಾದ ಕೃತಜ್ಞತೆಯ ಸಂಕೇತವಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ಹಿರೇಮಠ ಅವಿಭಕ್ತ ಕುಟುಂಬ ತಮ್ಮ ನೂತನ ಮನೆಗೆ ‘ಶ್ರೀ ಎಂ. ಬಿ. ಪಾಟೀಲ ನಿಲಯ’ ಎಂದು ನಾಮಕರಣ ಮಾಡಿ ಗಮನ ಸೆಳೆದಿದೆ.30 ಸದಸ್ಯರನ್ನು ಹೊಂದಿರುವ ಹಿರೇಮಠ ಕುಟುಂಬದ ಸಿದ್ದಯ್ಯ, ಸಾತಯ್ಯ, ಬಸಯ್ಯ ಹಾಗೂ ಮಲ್ಲಯ್ಯ ಸಹೋದರರು ವಿಜಯಪುರ ನಗರದ ಅಥಣಿ ರಸ್ತೆಯ ರಾಜಕುಮಾರ ಲೇಔಟ್‌ನ ಸುವರ್ಣನಗರದಲ್ಲಿ ಬೃಹತ್ ಮನೆ ನಿರ್ಮಿಸಿದ್ದು, ಭಾನುವಾರ ವಾಸ್ತುಶಾಂತಿ ಹಾಗೂ…

Read More

ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ”ಕ್ಕೆ ಕೃತಿಗಳ ಆಹ್ವಾನ

ಸಪ್ತಸಾಗರ ವಾರ್ತೆ,ಸಿಂದಗಿ, ಜು.12: ಸಿಂದಗಿಯ ವಿದ್ಯಾಚೇತನ ಪ್ರಕಾಶನವು ಪ್ರತಿವರ್ಷದಂತೆ 2025ನೇ ಸಾಲಿನ ರಾಜ್ಯ ಮಟ್ಟದ “ಬಾಲ ಸಾಹಿತ್ಯ ಪುರಸ್ಕಾರ” ಕ್ಕಾಗಿ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.2025ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಪ್ರಥಮ ಮುದ್ರಣಗೊಂಡ ಮಕ್ಕಳ ಸಾಹಿತ್ಯ ಕೃತಿಗಳು ಮಾತ್ರ ಸ್ಪರ್ಧೆಗೆ ಅರ್ಹವಾಗಿವೆ. ಕಥೆ, ಕವನ ಹಾಗೂ ಕಾದಂಬರಿ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿ ವಿಭಾಗದ ವಿಜೇತರಿಗೆ ₹5,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.ಹದಿನೆಂಟು ವರ್ಷದೊಳಗಿನ ಬಾಲ ಲೇಖಕರೂ ತಮ್ಮ…

Read More

ಟಿಇಟಿ ರದ್ದುಪಡಿಸಲು ಸಂಸತ್ತಿನಲ್ಲಿ ಧ್ವನಿ ಎತ್ತಿ: ಸಂಸದ ಜಿಗಜಿಣಗಿ ಅವರಿಗೆ ಶಿಕ್ಷಕರ ಸಂಘ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಕಷ್ಟ ಉಂಟುಮಾಡುತ್ತಿರುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಹಾಗೂ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕವು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿತು.ಜಿಲ್ಲಾ ಅಧ್ಯಕ್ಷ ಅರ್ಜುನ ಲಮಾಣಿ ಹಾಗೂ ಪ್ರಧಾನ ಕಾರ್ಯದರ್ಶಿ ಹಣಮಂತ ಕೊಣದಿ ಮಾತನಾಡಿ, ಈಗಾಗಲೇ ಸಿಇಟಿ ಹಾಗೂ ಟಿಇಟಿ ಉತ್ತೀರ್ಣರಾಗಿ ಸೇವೆಗೆ ಸೇರಿರುವ…

Read More

ಜನತಾ ನ್ಯಾಯಾಲಯದಲ್ಲಿ 16,678 ಪ್ರಕರಣ ಇತ್ಯರ್ಥ: ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ನ್ಯಾಯಾಧೀಶರ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುವುದರಿಂದ ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ (ಜನತಾ ನ್ಯಾಯಾಲಯ) ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಸಲಹೆ ನೀಡಿದರು.ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಷಗಳ ಕಾಲ ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ ಪರಸ್ಪರ ರಾಜಿ ಸಂಧಾನದ…

Read More

ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ಶಿವರಾಜ್ ಕೆಂಗನಾಳ್ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಜಿಲ್ಲೆಯಾದ್ಯಂತ ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿಗೆ ಅವಲಂಬಿತರಾಗಿರುವ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಯಾವುದೇ ವಿಳಂಬ ಮಾಡದೆ ರೈತರ ಪರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ…

Read More

ಕಾತ್ರಾಳದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪಕ್ಷದ ಸಂಘಟನೆಗೆ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದರು.ನಗರದಲ್ಲಿ ಶನಿವಾರ ನಡೆದ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸರ್ವಜನರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಹಳಬರು ಮತ್ತು ಹೊಸಬರು ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ…

Read More

ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಶಿಕ್ಷಣ, ಆಡಳಿತ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ ಪಿ. ಬಳಿಗಾರ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ ಸಮಾರಂಭದಲ್ಲಿ ಮಾಜಿ ಸಚಿವೆ ರಾಣಿ ಸತೀಶ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ. ಆರ್. ಸುನಂದಮ್ಮ, ಹಿರಿಯ…

Read More

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಪ್ರಶ್ನೆ ಅನಗತ್ಯ: ರಾಜ್ಯ ಸರ್ಕಾರದ ವಿರುದ್ಧ ಶ್ರೀಹರ್ಷಗೌಡ ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಪಥಸಂಚಲನವು ಶಿಸ್ತು, ಸೇವೆ ಹಾಗೂ ದೇಶಾಭಿಮಾನದ ಪ್ರತೀಕವಾಗಿದ್ದು, ಅದಕ್ಕೆ ಅನುಮತಿ ಹಾಗೂ ನೋಂದಣಿ ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್‌ಎಸ್‌ಎಸ್‌ ಪಥಸಂಚಲನವು ಶಿಸ್ತುಬದ್ಧ ಮೆರವಣಿಗೆ, ದೇಶಭಕ್ತಿ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಕಾರ್ಯಕ್ರಮವಾಗಿದೆ. ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಇಂತಹ ಚಟುವಟಿಕೆಗಳಿಗೆ ಅನುಮತಿ…

Read More

ಮಸೀದಿಯಲ್ಲಿ ಬಿಎಲ್‌ಒ ಸಭೆ: ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮಕ್ಕೆ ಯತ್ನಾಳ್ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಸಾಂವಿಧಾನಿಕ ಹುದ್ದೆಯಲ್ಲದ ಕಾಂಗ್ರೆಸ್ ಮುಖಂಡ ಅಬ್ದುಲ್ ರಜಾಕ್ ಹೊರ್ತಿ ನೇತೃತ್ವದಲ್ಲಿ ನಗರದ ಬಬಲೇಶ್ವರ ನಾಕಾ ಸಮೀಪದ ಅಲಿಖಾನ್ ಮಸೀದಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಭೆ ನಡೆಸಲಾಗಿದೆ ಎಂದು ಆರೋಪಿಸಿರುವ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಶನಿವಾರ ಸಂಜೆ ನಡೆದ ಈ ಸಭೆಯಲ್ಲಿ ವಾರ್ಡ್ 32, 33 ಮತ್ತು 34ರ ಬಿಎಲ್‌ಒಗಳನ್ನು ಭಾಗವಹಿಸಲು ಶಿಕ್ಷಣ ಇಲಾಖೆಯ ಸಿಬ್ಬಂದಿ…

Read More

ಗಾನ ಕೋಗಿಲೆ ಎಸ್. ಜಾನಕಿ ನಿಧನ: ಕರ್ನಾಟಕ ಕಲಾ ಸಂಘದ ಸಂತಾಪ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ಕಲಾ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.ಸಂಘದ ಅಧ್ಯಕ್ಷ ಬಾಬುರಾವ ಕುಲಕರ್ಣಿ ಅವರು ಸಂತಾಪ ಸಂದೇಶದಲ್ಲಿ, ಸಂಗೀತದ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಅಪಾರ ಪ್ರತಿಭೆ, ಸಂಗೀತದ ಮೇಲಿನ ಅಪಾರ ಪ್ರೀತಿ ಹಾಗೂ ನಿರಂತರ ಪರಿಶ್ರಮದಿಂದ ಸುಮಾರು ಆರು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಅಮೋಘ ಸಾಧನೆ ಮಾಡಿದ ಎಸ್. ಜಾನಕಿ ಅವರು ಸುಮಾರು 48 ಸಾವಿರಕ್ಕೂ ಅಧಿಕ ಹಾಡುಗಳನ್ನು…

Read More