ವಿಜಯಪುರಕ್ಕೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ: ಸಚಿವ ಶಿವಾನಂದ ಪಾಟೀಲ
ವಿಜಯಪುರಕ್ಕೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ: ಸಚಿವ ಶಿವಾನಂದ ಪಾಟೀಲ
ವಿಜಯಪುರಕ್ಕೆ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ಬೇಡ: ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಆ. 20:ಜಿಲ್ಲೆಯಲ್ಲಿ ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಬರುವ ಹಿನ್ನೆಲೆಯಲ್ಲಿ ಎಂಟು ಜನ ರೌಡಿಶೀಟರ್ ಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕೊಲೆ, ಕೊಲೆಗೆ ಯತ್ನ, ಆಯುಧ ಕಾಯ್ದೆ, ದೊಂಬಿ, ಹಲ್ಲೆ, ಕನ್ನಾ ಕಳವು ಮುಂತಾದ ಅಪರಾಧಿಕ ಪ್ರಕರಣಗಳಲ್ಲಿ ಈ ರೌಡಿ ಶೀಟರ್ ಗಳು ಭಾಗಿಯಾಗಿದ್ದರು.ಇನ್ನು 19 ಜನ ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲು…
ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…
ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಸ್ಟ್ 18 ರಿಂದ ಹಮ್ಮಿಕೊಳ್ಳಲಾಗಿದೆ.ಆ.18ರಂದು ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಆಗಸ್ಟ್ 19ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ ಹಾಗೂ ದೇವರ ಹಿಪ್ಪರಗಿಯ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ಮೈದಾನದಲ್ಲಿ, ಆಗಸ್ಟ್ 21ರಂದು ತಾಳಿಕೋಟೆ ತಾಲೂಕಿನ ಕ್ರೀಡಾಕೂಟವನ್ನು ಬ್ರಿಲಿಯಂಟ್ ಹೈಸ್ಕೂಲಿನಲ್ಲಿ ಹಾಗೂ ಆಲಮೇಲ ತಾಲೂಕಿನ ಕ್ರೀಡಾಕೂಟವನ್ನು ಸರಕಾರಿ ಹಿರಿಯ ಮಾದರಿ ಶಾಲೆಯ ಆವರಣದಲ್ಲಿ,…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…
ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಇದು ವಿಜಯಪುರ ನಗರದ ಮನಗೂಳಿ- ಬಸವನ ಬಾಗೇವಾಡಿ ರಸ್ತೆ ಪಕ್ಕದ ಇಬ್ರಾಹಿಂಪುರ ಬಡಾವಣೆಯಲ್ಲಿರುವ ಪ್ರಾಚೀನವಾದ ಐತಿಹಾಸಿಕ ಹಿರೇಬಾವಿ. ಇದನ್ನು ವಿಜಯಪುರದ ಎರಡನೇ ‘ತಾಜ್ ಬಾವಡಿ’ ಎಂದರೂ ತಪ್ಪಾಗಲಿಕ್ಕಿಲ್ಲ.ಇಬ್ರಾಹಿಂಪುರದ ಹಿರೇಬಾವಿ ನೋಡಿದ ಯಾರಿಗೇ ಆಗಲಿ ಥಟ್ಟನೆ ‘ತಾಜ್ ಬಾವಡಿ’ ಅವರ ನೆನಪಿಗೆ ಬರದೇ ಇರದು.ತಾಜ್ ಬಾವಡಿಯಂತೆಯೇ ವಿಶಾಲವಾಗಿದೆ ಆದಿಲಶಾಹಿ ಕಾಲದ ಈ ಹಿರೇಬಾವಿ. ನೂರಕ್ಕೂ ಅಧಿಕ ಕಟ್ಟೆಗಳು, ಹಲವು ಕಮಾನುಗಳಿರುವ ಅದ್ಭುತ, ಸುಸಜ್ಜಿತ ಹಾಗೂ ಅತ್ಯಾಕರ್ಷಕ ಕಟ್ಟಡವನ್ನು ಈ ಹಿರೇಬಾವಿ ಹೊಂದಿದೆ.ಈ…