ಚೀಟಿ ಕಂಪನಿ :ಆಕ್ಷೇಪಣೆ ಆಹ್ವಾನ

ಸಪ್ತಸಾಗರವಾರ್ತೆ,ವಿಜಯಪುರ,ಮಾ.23:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೇ ಇರುವ ಹಾಗೂ ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರುತಿಳಿಸಿದ್ದಾರೆ.ಈ ಪ್ರಕಟಣೆ ಹೊರಡಿಸಿದ 07 ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್‌ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು…

Read More

ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…

Read More

ಆನೆ ಬೆಲೆ ಎತ್ತಿಗೆ, ಎತ್ತಿನ ಬೆಲೆ ಕುರಿಗೆ, ಕುರಿ ಬೆಲೆ ಕೋಳಿಗೆ, ಕೋಳಿ ಬೆಲೆ ಮನುಷ್ಯನಿಗೆ ಅಂದರೆ ಮನುಷ್ಯನಿಗೆ ಯಾವ ಕಿಮ್ಮತ್ತೂ ಉಳಿದಿಲ್ಲ:ಶಿವಯ್ಯ ಸ್ವಾಮೀಜಿಗಳ ಕಾಲಜ್ಞಾನ ಭವಿಷ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಶುದ್ಧ, ನಂಬಿಕೆ, ಕರ್ತವ್ಯ ಒಂದೆಡೆ ಸೇರಿದರೆ ಜಗತ್ತು ಉದ್ಧಾರವಾಗುತ್ತದೆ. ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ನಡೆದರೆ ಇಲ್ಲಿಯೂ ಇದ್ದಂತೆ. ಅಕ್ರಾಳ, ವಿಕ್ರಾಳ, ಕರಾಳ ಈ ಬಾರಿಯೂ ಇದ್ದದ್ದೇ, ಯುದ್ದ ಅಲ್ಲಿ ಅಷ್ಟೇ ಅಲ್ಲ ಇಲ್ಲಿಯೂ ಇದ್ದಂತೆಯೇ ಎಂದು ಕತಕನಹಳ್ಳಿಯ ಶ್ರೀ ಶಿವಯ್ಯ ಮಹಾಸ್ವಾಮೀಜಿ ಕಾಲಜ್ಞಾನದ ಹೇಳಿಕೆ ನುಡಿದರು.ಸುಕ್ಷೇತ್ರ ಕತಕನಹಳ್ಳಿಯಲ್ಲಿ ಶ್ರೀ ಗುರುಚಕ್ರವರ್ತಿ ಸದಾಶಿವ ಮುತ್ತ್ಯಾ ಅವರ ಜಾತ್ರಾ ಮಹೋತ್ಸವ ಪ್ರಯುಕ್ತ ಗುರು ಕರುಣೆಯ ಮೂಲಕ ಶ್ರೀ ಶಿವಯ್ಯ ಮಹಾಸ್ವಾಮೀಜಿ ಭವಿಷ್ಯದ ಕಾಲಜ್ಞಾನ ಹೇಳಿಕೆ…

Read More

ಸ್ತ್ರೀಪುರುಷರಿಬ್ಬರಿಗೂ ಸಮಾನ ಸ್ಥಾನಮಾನಗಳು ಇದ್ದಾಗ ಮಾತ್ರ ಸಮ ಸಮಾಜ ಕಟ್ಟಲು ಸಾಧ್ಯ-ಡಾ. ರಂಜಿತಾ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿನಿ ಚಂದನಾ ಶೃಂಗೇರಿ ಅವರು ಭರತನಾಟ್ಯ ಮಾಡುವುದರೊಂದಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.“ವೀರಾಂಗನ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ” ಪಡೆದಿದ್ದಕ್ಕಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭಾರತಿ. ವಾಯ್.ಖಾಸನೀಸ ಮತ್ತು ಪ್ರೆಸಿಡೆನ್ಸಿ ಬಿ. ಇಡಿ ಕಾಲೇಜ್ ಪ್ರಾಚಾರ್ಯ ಡಾ.ಸುಮಾ. ಬೋಳರಡ್ಡಿ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ನ್ಯಾಯವಾದಿ ಡಾ.ರಂಜಿತಾ.ಕೆ.ಆರ್ ಅವರು ಮಾತನಾಡಿ, “ದಶಪುತ್ರ ಸಮ ಕನ್ಯಾ”…

Read More

ಕದಂಬ ಸೈನ್ಯ ವತಿಯಿಂದನಾಡಗೀತೆ ಅರ್ಥ ಬರೆಯುವ ಸ್ಪರ್ಧೆ: ವಿವಿಧ ಕ್ಷೇತ್ರದಸಾಧಕರಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ನಾಡಗೀತೆ ಅರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಆರು ಶಾಲೆಯ ಒಂದನೂರ ಮೂವತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿಜೇತರಾಗಿದ್ದರು. ಇವರಿಗೆ ಮಂಡ್ಯದ ಡಾ.ಹರ್ಡಿಕರ್ ಭವನದಲ್ಲಿ ಮಾರ್ಚ್ 11 ರಂದು ನಾಡಗೀತೆ ಆಥ೯ ಬರೆಯುವ ಸ್ಪರ್ಧೆ ವಿಜೇತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನುಪೂಜ್ಯ ಚೆನ್ನವೀರ ಮಹಾ ಸ್ವಾಮೀಜಿ ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ…

Read More

ವಿಜಯಪುರ: ಸಂಭ್ರಮದ ರಮಜಾನ್ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21 :ವಿಜಯಪುರ ಜಿಲ್ಲೆಯಾದ್ಯಂತ ಈದ್ – ಉಲ್- ಫಿತರ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಳೆದ ಒಂದು ತಿಂಗಳುಗಳಿಂದ ರೋಜಾ, ರಾತ್ರಿ ಹೊತ್ತು ವಿಶೇಷ ತರಾವೀಹ್ ನಮಾಜ್ ಸಲ್ಲಿಸಿದ ಮುಸ್ಲಿಂ ಬಾಂಧವರು ಶನಿವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ಬಟ್ಟೆ ಧರಿಸಿ, ಅತ್ತರ ಎಂಬ ಸುಗಂಧದ್ರವ್ಯ ಹಚ್ಚಿಕೊಂಡು, ಕಣ್ಣಿಗೆ ಸುರಮಾ ಹಚ್ಚಿಕೊಂಡು ನಮಾಜ್ ಸಲ್ಲಿಕೆಗೆ ಮಸಜೀದ್ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡು ಬಂದಿತು.ವಿಜಯಪುರದ ದಖನಿ ಈದ್ಗಾ, ಆಲಂಗೀರ ಈದ್ಗಾ, ಜಾಮೀಯಾ ಮಸಜೀದ್, ಧಾತರಿ…

Read More

ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ‌ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ…

Read More

ರಮಜಾನ್ ಹಬ್ಬದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಶನಿವಾರ ರಂಜಾನ್ ಅಂಗವಾಗಿ ನಗರದ ದಖನಿ‌ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೋಂಡ ನಾನಾ ಮುಖಂಡರು ಮತ್ತು ಜನರೊಂದಿಗೆ ಸಚಿವರು ಶುಭಾಷಯ ವಿನಿಮಯ ಮಾಡಿದರು.ಸಹೋದರತೆ ಮತ್ತು ಸಮಾನತೆ…

Read More

ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 21:ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು 2025-26ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. 29 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.ಗಣೇಶ ಪಾಟೀಲ್(ಶೇ.98.75), ಸಮರ್ಥ ಚವ್ಹಾಣ(97.50), ಶ್ರೀಕರ ಗಗನಮಾಳಿ(97.50), ಕಾರ್ತಿಕ ಸತ್ಯಪ್ಪನವರ(97.50), ಸೃಜನ್ ಗೊರೆ(97.50), ಕೃತಿಕೇಶ ಹೊಂಗಲ್(97.50), ಕರುಣಸಾಗರ ಬಾದವಾಡಗಿ (96.25),…

Read More

ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.ಮಾ…

Read More