ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More

ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 20:ರೌಡಿ ರೋಡ್ ರೋಮಿಯೋಗಳ ಕಾಟ, ಲವ್ ಜಿಹಾದ್ ನಂತಹ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆಗೆ ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಅವರು ಆಗ್ರಹಿಸಿದ್ದಾರೆ.ಜಿಲ್ಲಾ ಪೊಲೀಸ್ ಇಲಾಖೆ ಅತ್ಯುತ್ತಮ ಕಾರ್ಯ ಮಾಡುತ್ತಿದ್ದು, ಈಗಾಗಲೇ ದರೋಡೆಕೋರರು, ಕಳ್ಳರು, ಸಮಾಜಘಾತಕರು ಮೇಲೆ ಕ್ರಮ ಕೈಗೊಳ್ಳುವದರ ಜೊತೆಗೆ ಜನತೆಗೆ ಕಿರಿಕಿರಿ ಉಂಟುಮಾಡಿ ಶಬ್ದ ಮಾಲಿನ್ಯ ಮಾಡುತ್ತಿರುವ ವಾಹನಗಳ ಸೈಲೆನ್ಸರ್ ಗಳನ್ನು ವಶಪಡಿಸಿಕೊಂಡು, ನಾಶಪಡಿಸಿ ಕೇಸ್ ದಾಖಲಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನೈತಿಕ ಚಟುವಟಿಕೆ ಮಾಡುವವರು, ಮದ್ಯಪಾನ…

Read More

ಮೂಲವ್ಯಾದಿ:ಉಚಿತ ತಪಾಸಣೆ, ಚಿಕಿತ್ಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 20:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಉರುಪು ಮೂಲವ್ಯಾದಿ (Anal Fissure) ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಮಾರ್ಚ್ 23 ರಿಂದ 27ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಇಂಥ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್ ಮಹಾವಿದ್ಯಾಲಯದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ…

Read More

ವಿದ್ಯುತ್ ವ್ಯತ್ಯಯ: ತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಸೂಚನೆ

ಸಪ್ತಸಾಗರವಾರ್ತೆ,ವಿಜಯಪುರ,ಮಾ.20:ಮಳೆ ಗಾಳಿಯಿಂದಾಗಿ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ತುರ್ತು ಸೇವಾ ಕೇಂದ್ರ ಹಾಗೂ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹೆಸ್ಕಾಂನ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ‌ಹೆಸ್ಕಾಂ ವಿಜಯಪುರ ನಗರ ಉಪ ವಿಭಾಗ-1ಕ್ಕೆ ಸಂಬಂಧಿಸಿದಂತೆ,ನಗರದ ಗಾಂಧಿ ವೃತ್ತದಿಂದ ಉತ್ತರ ಈಶಾನ್ಯ ಮತ್ತು ವಾಯುವ್ಯ ದಿಕ್ಕಿನ ಪ್ರದೇಶಕ್ಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಡಿ.ಎಂ. ಮೂಲಿಮನಿ ಮೊಬೈಲ್ :9448370250 ಹಾಗೂ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ:08352-250036, ಮತ್ತು ಹೆಸ್ಕಾಂ ವಿಜಯಪುರ ನಗರ ಉಪ ವಿಭಾಗ-2ಕ್ಕೆ…

Read More

ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಸೂಕ್ತ ನಿರ್ಧಾರ:ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 19:ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ಬಗ್ಗೆ ಬಿ ಫಾರಂ ಯಾರಿಗೆ ದೊರೆಯುತ್ತದೆ ಎಂಬುದನ್ನು ತಿಳಿದುಕೊಂಡು ಪ್ರಚಾರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿಬಿಜೆಪಿ ಪಕ್ಷದಿಂದದಾವಣಗೆರೆಗೆ ಶ್ರೀನಿವಾಸ ಹಾಗೂ ಬಾಗಲಕೋಟೆಗೆ ವೀರಣ್ಣ ಚರಂತಿಮಠ ಅಭ್ಯರ್ಥಿ ಘೋಷಣೆ ಕುರಿತು ಪ್ರಚಾರದ ಬಗ್ಗೆ ಅವರು ನಗರದಲ್ಲಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ನಮ್ಮ ಅವಶ್ಯಕತೆ ಕುರಿತು…

Read More

ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ- ಪ್ರಕಾಶ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ,ಮಾ. 18 :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು‌ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಸುಜಲಾಮ್ ಆಪ್ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜನರಿಗಾಗಿ ಇರುವ…

Read More

ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ದೇಶ ಕಾಯುವ ಸೈನಿಕರು ಜೈ ಜವಾನ್. ಅನ್ನ ನೀಡುವ ರೈತರು ಜೈ ಕಿಸಾನ್. ಅದೇ ರೀತಿ ದೇಶ ಕಟ್ಟುವ ಶಿಕ್ಷಕರು ಜೈ ಶಿಕ್ಷಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶ ಕಟ್ಟುವುದು ಮತ್ತು ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು…

Read More

ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ಸಂಶೋಧನೆ ಕ್ಷೇತ್ರದಲ್ಲಿ ಕೌಶಲ್ಯದ ಜೊತೆಗೆ ಒಳ್ಳೆಯ ಆದರ್ಶ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಔಷಧ ಮಂಡಳಿ ಮತ್ತು ಭಾರತದ ಔಷಧ ಶಿಕ್ಷಕರ ಸಂಘದ ರಾಜ್ಯ ಶಾಖೆ ಆಯೋಜಿಸಿರುವ ಔಷಧೀಯ ಶಿಕ್ಷಣ, ಸಂಶೋಧನೆ ಮತ್ತು ಉದ್ಯಮದಲ್ಲಿ ಪ್ರಗತಿಗಳು ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ…

Read More

ಎಸ್ಸೆಸ್ಸೆಲ್ಸಿ‌ ಸುಸೂತ್ರ‌ ಪರೀಕ್ಷೆಗೆ ಜಿಲ್ಲಾಡಳಿತ‌‌ ಸಂಪೂರ್ಣ ಸಜ್ಜು: ಮಾ.18ರಿಂದ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ‌ ಪರೀಕ್ಷೆ‌ ಆರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಜಿಲ್ಲೆಯಾದ್ಯಂತ ಒಟ್ಟು 137 ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮಾರ್ಚ್ 18 ರಿಂದ ಎಸ್ ಎಸ್ ಎಲ್‌ಸಿ‌ ಪರೀಕ್ಷೆ ಆರಂಭಗೊಳ್ಳಲಿದ್ದು, ನಕಲು ಮುಕ್ತ ಹಾಗೂ ಪಾರದರ್ಶಕ‌ ಪರೀಕ್ಷೆ ನಡೆಸಲು ಜಿಲ್ಲಾಡಳಿತ‌ ಸಕಲ‌ ಸಿದ್ಧತೆ ಮಾಡಿಕೊಂಡಿದೆ.ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜಿಲ್ಲೆಯ 7 ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ನೋಡಲ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯುವ‌ ನಿಟ್ಟಿನಲ್ಲಿ‌ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಆನಂದ‌…

Read More

ಆರೋಗ್ಯದ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17 :ಜೀವನದಲ್ಲಿ ಪ್ರತಿಯೊಬ್ಬರೂ ಆರೋಗ್ಯದಿಂದ ಇದ್ದರೆ ಮಾತ್ರ ತಾವು ಸಂಪಾದಿಸಿದ ಐಶ್ವರ್ಯವನ್ನು ಅನುಭವಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಬೆಳಗಿನ ಸಮಯದಲ್ಲಿ ವಾಯುವಿಹಾರ, ಯೋಗ,ಧ್ಯಾನ, ಪ್ರಾಣಾಯಾಮ ಮಾಡುವುದರ ಮೂಲಕ ಆರೋಗ್ಯ ಭಾಗ್ಯವನ್ನು ಹೊಂದಬೇಕೆಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಡಾ. ಬಿ.ಎಂ ಪಾಟೀಲ್ ಗುರೂಜಿ ಹೇಳಿದರು.ಮಂಗಳವಾರ ನಗರದ ಐತಿಹಾಸಿಕ ಸ್ಮಾರಕ ಗೋಲಗುಂಬಜ್ ವಾಯುವಿಹಾರಿಗಳನ್ನು ಉದ್ದೇಶಿಸಿ ಆರೋಗ್ಯ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಬ್ಯಾಂಕಿನ ಹಿಂದಿನ ಅಧ್ಯಕ್ಷ ವಿಜಯಕುಮಾರ ಇಜೇರಿ, ಮಾಜಿ ಉಪ…

Read More