ಪ್ರತಿಯೊಬ್ಬರು ಸಸಿಯನ್ನು ನೆಟ್ಟು ಪರಿಸರ ಸಂರಕ್ಷಿಸಿ- ಡಾ. ರವೀಂದ್ರ ಬೆಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಪರಿಸರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರ ಹೊಣೆಯಾಗಿದ್ದು, ಪ್ರತಿಯೊಬ್ಬರು ಸಸಿಯನ್ನು ನೆಟ್ಟು, ಪೋಷಣೆ ಮಾಡಿ, ಪರಿಸರ ಸಂರಕ್ಷಣೆ ಮಾಡಬೇಕೆಂದು ಕೃಷಿ ಮಹಾವಿದ್ಯಾಲಯ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ನಗರದ ಸುಲ್ತಾನ ಡೈಮಂಡ್ಸ್ ಅಂಡ್ ಗೋಲ್ಡ್ ಶೋರೂಮ್ ವತಿಯಿಂದ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪರಿಸರ ಸಂರಕ್ಷಣೆ ಮತ್ತು ವಿನಾಶ ಮನುಕುಲದಿಂದ ಮಾತ್ರ ಸಾಧ್ಯ. ಇಂದು ಗಿಡ ಮರಗಳ ಕಟಾವಿನಿಂದ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮವಾಗಿ ಬಿರುಬಿಸಿಲು, ಬಿರುಗಾಳಿ,…

Read More

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಕೃತಿ ಬಿಡುಗಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್ ಆ್ಯಂಡ್ ಡೆಮೆನ್ಶಿಯಾ (Advance Care Planning for Alzheimer’s Disease and Dementia) ಕೃತಿಯನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಗುರುವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಕೃತಿ…

Read More

ಕಳೆದ 10 ವರ್ಷದ ನನ್ನ ಸಾಧನೆ: ಜಿಗಜಿಣಗಿ ವಿವರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಕಳೆದ 10 ವರ್ಷಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೇಲ್ಸೇತುವೆ ಸೇರಿ ವಿವಿಧ 3516.67 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ವಿಜಯಪುರದ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಡಿ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದಾಜು 1668.88 ಕೋಟಿ ರೂ.ಅನುದಾನದಡಿ ಒಟ್ಟು 208.04 ಕಿಮೀ ಉದ್ದದಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಎರಡು ರೈಲ್ವೆ ಸೇತುವೆ ಸಹ ಒಳಗೊಂಡಿದೆ…

Read More

ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ನುಡಿ ನಮನ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 12:ಇಲ್ಲಿನ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ಕಛೇರಿಯಲ್ಲಿ ದಲಿತ ಕವಿ,ಬಂಡಾಯ ಕವಿ ನಾಡೋಜ ಪ್ರಶಸ್ತಿ ಪಡೆದ ಬಡವರ ನಗುವಿನ ಶಕ್ತಿ, ಮಾನಸ ಪುತ್ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿದ್ದಲಿಂಗಯ್ಯನವರ ನುಡಿ ನಮನ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.ಸಿದ್ಧಲಿಂಗಯ್ಯನವರ 5ನೇ ಪುಣ್ಯ ತಿಥಿ ದಿನದ ನಿಮಿತ್ತ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿಕವಿ ಸಿದ್ದಲಿಂಗಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಣ್ಯತಿಥಿ ಆಚರಿಸಲಾಯಿತು.ಜಿಲ್ಲಾ ಅಧ್ಯಕ್ಷ ಬಿ.ಎಚ್. ನಾಡಗಿರಿ ಅವರು ಮಾತನಾಡಿ, ಕನ್ನಡ…

Read More

ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, 12:ಮಕ್ಕಳು ದೇಶದ ಭವಿಷ್ಯದ ಆಸ್ತಿ. ಮಕ್ಕಳ ಕೈಯಲ್ಲಿ ಪುಸ್ತಕವಿರಬೇಕು, ದುಡಿಮೆಯ ಆಯುಧ ಅಲ್ಲ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ, ಆರೋಗ್ಯ, ಶಿಕ್ಷಣ ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಅದು ದೇಶದ ಭವಿಷ್ಯಕ್ಕೆ ಮಾರಕ….

Read More

ಹಸಿವು ಮುಕ್ತ ಸೇವೆಯ 100ನೇ ವಾರ: ನೂರಾರು ನಿರ್ಗತಿಕರಿಗೆ ಅನ್ನದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ದೇಶ ರಕ್ಷಕರ ಪಡೆ ಸಂಚಾಲಿತ ಅನ್ನ ಸ್ನೇಹಿ ಸೇವಾ ಬಳಗ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ “ಹಸಿವು ಮುಕ್ತ ಸೇವಾ ಕಾರ್ಯಕ್ರಮ”ದ 100ನೇ ವಾರವನ್ನು ಶುಕ್ರವಾರ ಯಶಸ್ವಿಯಾಗಿ ಆಚರಿಸಲಾಯಿತು.ನಗರದ ವಿವಿಧ ಭಾಗಗಳಲ್ಲಿ ಬೇರೆ ಊರಿಗೆ ತೆರಳುವ ಪ್ರಯಾಣಿಕರು, ನಿರ್ಗತಿಕರು ಹಾಗೂ ಆಶ್ರಯಹೀನರಿಗೆ ಉಚಿತವಾಗಿ ಬಿಸಿ ಊಟ ವಿತರಿಸಲಾಯಿತು.ಈ ಉದಾತ್ತ ಅನ್ನದಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ, ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತಗಳ ರಸ್ತೆ ಬದಿಯಲ್ಲಿ ವಾಸಿಸುವ…

Read More

ಕೋ.ಚನ್ನಬಸಪ್ಪ ರಾಜ್ಯ ದತ್ತಿಪ್ರಶಸ್ತಿಗೆ ಸಾಹಿತಿ ರೂಪಾ ರಜಪೂತ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 11:ಕೋ.ಚನ್ನಬಸಪ್ಪನವರ 2026ರ ರಾಜ್ಯಮಟ್ಟದ ದತ್ತಿ ಪ್ರಶಸ್ತಿಯನ್ನು ಗ್ರಾಮೀಣ ಮಹಿಳೆ ಕವಿ, ಲೇಖಕಿರೂಪಾ ರಜಪೂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.ಗೌರವ ಕಾರ್ಯದರ್ಶಿಗಳಾದ ಡಾ.ಮಾಧವ ಗುಡಿ, ಶಿಲ್ಪಾ ಭಸ್ಮೆ ಗೌರವ ಕೋಶಾಧ್ಯಕ್ಷರಾದಅಭಿಷೇಕ ಚಕ್ರವರ್ತಿ, ಮಹಾದೇವಿ ತೆಲಗಿ ಆಯ್ಕೆ ಸಮಿತಿಯಲ್ಲಿಉಪಸ್ಥಿತರಿದ್ದರು.ಜೂ. 14ರಂದು ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಸಭಾಂಗಣದಲ್ಲಿ ರಾಜ್ಯಮಟ್ಟದ ದತ್ತಿ ನಿಧಿ ಪ್ರಶಸ್ತಿಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ…

Read More

ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಬುಧವಾರ…

Read More

ಜೂನ್ 15ರಂದು ಅಪ್ರೆಂಟಿಸ್ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜೂನ್ 15ರಂದು ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ‌.ಜಾನ್ಸನ್ ಲಿಫ್ಟ್ ಅಂಡ್ ಎಸ್ಕಲೇಟರ್ಸ ಕಂಪನಿ ಈ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ನ ನಾಬಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಯಲಿದೆ.ಆಸಕ್ತ ತರಬೇತಿದಾರರು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸಂತೋಷ ಕರಿಗಾರ ಮಾಧ್ಯಮ…

Read More

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ ತರಬೇತಿಗೆ ವಿಜಯಪುರ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…

Read More