ಗೋವಿಂದಪುರ ಹತ್ಯಾಕಾಂಡ: ಮತ್ತೆ ಆರು ಜನರ ಬಂಧನ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಭೀಮಾತೀರದ 6 ಜನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಫೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ ಸೇರಿದಂತೆ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ, ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್‌, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್‌ ಅತ್ತಾರ ಅವರು ಭೀಕರವಾಗಿ ಕೊಲೆಯಾಗಿದ್ದರುಜೂನ್ 1 ರಂದು…

Read More

ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ-ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 3: ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ…

Read More

ನಿಸ್ವಾರ್ಥದಿಂದ ಬದುಕಿ ಬೇರೊಬ್ಬರಿಗೆ ಬೆಳಕಾಗಿ: ಎನ್.ಎಂ. ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 2:ಐಸ್‌ಕ್ರೀಮ್ ಹಾಗೂ ಮೇಣದ ಬತ್ತಿಗೆ ಕರಗುವ ಗುಣವಿದೆ. ಆದರೆಕರಗುವಿಕೆಯ ಹಿಂದಿರುವ ಉದ್ಧೇಶ ವಿಭಿನ್ನವಾಗಿರುತ್ತದೆ. ಐಸ್‌ಕ್ರೀಮ್ಸಮಯ ಇರುವ ಮೊದಲೆ ನನ್ನನ್ನು ತಿಂದು ತೃಪ್ತನಾಗು ಎಂದುಹೇಳಿದರೆ ಮೇಣದ ಬತ್ತಿ ನಾನು ಕರಗುವ ಮೊದಲೇ ಈ ಜಗತ್ತಿಗೆ ಒಂದಷ್ಟುಬೆಳಕನ್ನು ಕೊಡುತ್ತೇನೆ ಎನ್ನುವ ಸಾರ್ಥಕತೆ ತೋರುತ್ತದೆ. ನಮ್ಮಬದುಕು ಸಹ ಮೇಣದ ಬತ್ತಿಯಂತೆ ಬೇರೊಬ್ಬರಿಗೆ ಬೆಳಕುನೀಡುವಂತಾಗಬೇಕು. ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ. ಬಿರಾದಾರ ಹೇಳಿದರು.ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ…

Read More

ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಜಗದೀಶ ಶೆಟ್ಟರ್

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 2 :ಬಿಜೆಪಿ ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.ಕೊಲ್ಹಾಪೂರ ಕನೇರಿಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸನ್ನಿಧಿಯಲ್ಲಿ ನಡೆದ ವಿಜಯಪುರ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಶಿಬಿರವನ್ನು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಎಂಬುದು ತತ್ವಾಧಾರಿತ ಸಿದ್ಧಾಂತವುಳ್ಳ ಪಕ್ಷ, ಆದರೆ ಕಾಂಗ್ರೆಸ್ ಪಕ್ಷ ಕೇವಲ ಕುಟುಂಬ ಹಾಗೂ ವೋಟ್ ಬ್ಯಾಂಕ್ ಆಧಾರಿತ ರಾಜಕಾರಣವನ್ನು ಮೈಗೂಢಿಸಿಕೊಂಡಿದೆ. ಕೋಟ್ಯಂತರ…

Read More

ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 2 :ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನ ಸಂಚಾಲಕ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ.ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ,ಟ್ರಾಮಾ ಸೆಂಟರ್…

Read More

ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಜೂನ್ 9 ಮತ್ತು 10 ರಂದು ಬೃಹತ್ ಹೋರಾಟ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 31:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಸಭೆಯಲ್ಲಿ ಪ್ರಶಿಕ್ಷಣಾರ್ಥಿಗಳು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿ ದೊರೆಯುತ್ತಿಲ್ಲ. ಜೊತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಸುಮಾರು ಎರಡುವರೆ ಲಕ್ಷ ರೂಪಾಯಿವರೆಗೆ ನಿಯಮಬಾಹಿರವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆದ ಕಾಂಗ್ರೆಸ್ ಹೈಕಮಾಂಡ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕಿ ಹಿಂದುಳಿದ ನಾಯಕನ ಬಲಿ ಕೊಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಥ ಹಿನ್ನಲೆ ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.ಬಕ್ರೀದ್ ಹಬ್ಬದ ದಿನವೇ ಸಿದ್ದರಾಮಯ್ಯರನ್ನು ಬಲಿ ಪಡೆಯಲಾಗಿದೆ.2028 ರ ಚುನಾವಣೆಯಲ್ಲಿ ಹಿಂದುಳಿದ, ದಲಿತ ವರ್ಗಗಳು ಕಾಂಗ್ರೆಸ್ ಬಲಿ ಪಡೆಯುತ್ತವೆ. ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಿ ಅತಿರೇಕ ಮಾಡಿದ್ದರು. ಮಮತಾ ಬ್ಯಾನರ್ಜಿ ಬಳಿಕ ಸಿದ್ದರಾಮಯ್ಯ ಮುಸ್ಲಿಂ ತುಷ್ಟೀಕರಣ…

Read More

ಸಿದ್ದರಾಮಯ್ಯ ಪದತ್ಯಾಗ: ಅಹಿಂದ ವರ್ಗ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28 :ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿರುವುದನ್ನು ಅಹಿಂದ ವರ್ಗ ಹಾಗೂ ಜಿಲ್ಲಾ ಕುರುಬ ಸಂಘವು ಖಂಡಿಸುತ್ತದೆ ಎಂದು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಕಾತ್ರಾಳ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ಬಡವರ ಮುಖ್ಯಮಂತ್ರಿ, ಅನ್ನಭಾಗ್ಯ, ಕ್ಷೀರ ಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆಯಂತಹ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿ ಜನಪರ ಆಡಳಿತ ನೀಡಿದ ಧೀಮಂತ ನಾಯಕ. ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿ ಹಸಿವು…

Read More

ಮಯೂರವರ್ಮ ಕನ್ನಡದ ಸ್ವಾಭಿಮಾನದ ಸಂಕೇತ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಕನ್ನಡಿಗರ ಸಾಮೂಹಿಕ ಪ್ರಜ್ಞೆಯಲ್ಲಿ ‘ಅಸ್ಮಿತೆ’ಯ ಬೀಜ ಬಿತ್ತಿ, ಕನ್ನಡ ಭಾಷೆ, ನೆಲ, ಸಂಸ್ಕೃತಿಯ ಸಂಕೇತವಾದ ಮಯೂರವರ್ಮನ ಆದರ್ಶಗಳು ಇಂದಿನ ಜಾಗತೀಕರಣದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವಲ್ಲಿ ನಮಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ೧೬೮೧ ನೇ ಕನ್ನಡ ಸಾಮ್ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಯೂರವರ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡಾಭಿಮಾನದ ಕುರಿತು ಅವರು ಮಾತನಾಡಿದರು.ಕದಂಬರ ಮಯೂರವರ್ಮನು ಕನ್ನಡದ…

Read More

ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು: ಡಾ. ಶ್ರೀಕಾಂತ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಅತಿಯಾದ ಆಮ್ಲೀಯತೆ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಹೇಳಿದ್ದಾರೆ.ಮಂಗಳವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಆಯೋಜಿಸಿದ್ದ ಜಠರದ ಕ್ಯಾನ್ಸರ್ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.40 ವರ್ಷ ದಾಟಿದ ವಯಸ್ಕರು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿರ್ಲಕ್ಷಿಸಬಾರದರು. ಔಷಧ ಅಂಗಡಿಗಳಲ್ಲಿ ಸ್ವಚಿಕಿತ್ಸೆಯನ್ನು ಪಡೆಯದೆ…

Read More