ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಬಿ.ಎಲ್.ಡಿ. ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಪಾಟೀಲ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮದಿನವನ್ನು ಇಂದು ರವಿವಾರ ಗಣ್ಯರೊಂದಿಗೆ ಸೇರಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ವೃಕ್ಷಥಾನ್ ಹೆರಿಟೇಜ್ ರನ್ ಸಮಿತಿ, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಗ್ರುಪ್ ಜಂಟಿಯಾಗಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸನಗೌಡ ಎಂ. ಪಾಟೀಲ, ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ಶಾಸ್ತ್ರ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊ. ಕುಸಾಲ ದಾಸ ಮತ್ತೀತರ ಗಣ್ಯರು ಜನ್ಮದಿನದ ಅಂಗವಾಗಿ ಸಸಿ ನೆಟ್ಟರು.ಈ…

Read More

ಅಸಮಾನತೆ ಹೋಗಲಾಡಿಸಲು ಶ್ರಮಿಸಿ: ಪ್ರೊ.ಅಡವಿಸ್ವಾಮಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9:ನೊಂದವರಿಗೆ ಆತ್ಮಸ್ಥೈರ್ಯವನ್ನು ತುಂಬಿ ಶೋಷಿತ ವರ್ಗದವರ ದನಿಯಾಗಿ ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಮಾನವತವಾದಿ ಕನಕದಾಸರು ಎಂದು ಸಾಹಿತಿ ಪ್ರೊ. ಅಡವಿಸ್ವಾಮಿ ಕೊಳಮಲಿ ಅಭಿಪ್ರಾಯಪಟ್ಟರು.ವಿಜಯಪುರ ನಗರದ ರೇಲ್ವೆ ನಿಲ್ದಾಣದ ಆವರಣದಲ್ಲಿ ನೈರುತ್ಯ ರೇಲ್ವೆ ಇಲಾಖೆ ನೌಕರರ ಸಂಘ ವಿಜಯಪುರ ಇವರ ವತಿಯಿಂದ ಹಮ್ಮಿಕೊಂಡ ಮಹಾನ್ ಮಾನವತವಾದಿ ಕನಕದಾಸರ 538 ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದ ಅವರು, ಕನಕದಾಸರು ತಮ್ಮ ವಿಶಿಷ್ಟವಾದ ಜ್ಞಾನದಿಂದ ಶಕ್ತಿಯಿಂದ ಕಣ್ಣಿದ್ದವರ ಕಣ್ಣು ತೆರೆಸಿದ…

Read More

ನಾಡಿಗೆ ಸಮಾನತೆಯ ಸಂದೇಶ ಸಾರಿದ ದಾಸಶ್ರೇಷ್ಠರು ಕನಕದಾಸ: ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ ವಿಜಯಪುರ, ನ. 8: “ಸಮಾಜದಲ್ಲಿದ್ದ ಅಸಮಾನತೆ, ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ದಾಸಶ್ರೇಷ್ಠರು ಕನಕದಾಸರು. ಅವರ ಚಿಂತನೆಗಳು, ವಿಚಾರಗಳು ಮತ್ತು ಸಮಾಜ ಸುಧಾರಣೆಯ ದೃಷ್ಟಿಕೋನಗಳು ಇಂದಿಗೂ ಪ್ರಸ್ತುತ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ಅವರು ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.“ಮೂಲತಃ…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

10ರಂದು ಶಿವ ಚಿದಂಬರ ಜಯಂತ್ಯುತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ವಿಜಯಪುರದ ಚಿದಂಬರ ನಗರದಲ್ಲಿರುವ ಶ್ರೀ ಚಿದಂಬರ ದೇವಾಲಯದಲ್ಲಿ ಇದೇ ದಿನಾಂಕ ೧೦ ರಂದು ಶ್ರೀ ಶಿವಚಿದಂಬರ ಜಯಂತೋತ್ಸವ ನಡೆಯಲಿದೆ.ಶ್ರೀ ಚಿದಂಬರ ಸೇವಾ ಸಮಿತಿ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ.ಅಂದು ಬೆಳಿಗ್ಗೆ ೬ ಕ್ಕೆ ಕಾಕಡಾರತಿ, ಬೆಳಿಗ್ಗೆ ೭ ಕ್ಕೆ ರಜತ ನಾಗಭೂಷಣ, ನಂತರ ಶ್ರೀ ಶಿವಚಿದಂಬರೇಶ್ವರರಿಗೆ ಅಭಿಷೇಕ ನಡೆಯಲಿದೆ.ನಂತರ ಸುವರ್ಣ ಮಹೋತ್ಸವ ಪ್ರಯುಕ್ತ ಆರು ಕೋಟಿ ಶ್ರೀ ಶಿವ ಚಿದಂಬರ ನಾಮಜಪ ಸಂಕಲ್ಪ…

Read More

ಬಿಜೆಪಿ ವತಿಯಿಂದ ಕನಕ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಕನಕದಾಸರ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ಕನಕದಾಸರ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕನಕದಾಸರು ಶ್ರೇಷ್ಠ ದೈವಭಕ್ತರು, ಅವರಲ್ಲಿರುವ ಅದಮ್ಯ ದೈವ ಭಕ್ತಿ ಪ್ರತಿಯೊಬ್ಬರಿಗೂ ಸ್ಪೂರ್ತಿ, ಕನಕದಾಸರ ಶ್ರೇಷ್ಠ ಭಕ್ತಿಗೆ ಕೇಶವ…

Read More

ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವಿನೂತನವಾಗಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8: ಕ್ಷೀರ ಯೋಜನೆಗೆ ಚಾಲನೆ ಸಿಕ್ಕಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲಿ ಅತೀ ಹೆಚ್ಚು ಹಾಲು ಉತ್ಪಾದಿಸುವ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಅಸೆಲ್ ಕಂಪನಿ ಸಂಸ್ಥಾಪಕ ಪ್ರಶಾಂತ ಪ್ರಕಾಶ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು…

Read More

ಶ್ರೀ ಸಿದ್ಧಲಿಂಗನ ಸನ್ನಿದಾನದಲ್ಲಿ ಕಾರ್ತಿಕ ದೀಪೋತ್ಸವ

ಸಪ್ತಸಾಗರ ವಾರ್ತೆ, ಇಂಡಿ, ನ. 8: ತಾಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದ ಕೈವಲ್ಯಧಾಮ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಕಾರ್ತಿಕ ಮಾಸದ ಅಂಗವಾಗಿ ನಿತ್ಯ ಸಂಜೆ ದೀಪೋತ್ಸವ ನಡೆಯುತಿದೆ. ಈ ನಿಮಿತ್ಯ ಶುಕ್ರವಾರ ಸಂಜೆ ಭಕ್ತರು ಮಣ್ಣಿನ ಪಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ತೈಲದ ದೀಪದಲ್ಲಿ ಸ್ವಸ್ಥಿಕ್ ಚಿತ್ರ, ಲಿಂಗದ ಚಿತ್ರ, ಓಂ ನಮ: ಶಿವಾಯ ಎಂಬ ಶಿವನಾಮ, ಶ್ರೀ ಸಿದ್ಧಲಿಂಗನ ನಾಮಸ್ಮರಣೆ, ಗುರು ಬಂಥನಾಳ ಶಿವಯೋಗಿಗಳ ನಾಮಸ್ಮರಣೆ ಮಾಡಿದರು.ಮಹಿಳೆಯರು ಮಕ್ಕಳು ಆದಿಯಾಗಿ ಈ ಕಾರ್ಯಕ್ರಮದಲ್ಲಿ…

Read More