ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಬಸವರಾಜ ಬಾಗೇವಾಡಿ ಭಾಜನ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದ ಬಸವರಾಜ ಬಾಗೇವಾಡಿ ಅವರಿಗೆ ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ–2026 ನೀಡಿ ಗೌರವಿಸಲಾಗಿದೆ.ಆಗಸ್ಟ್ 1 ಮತ್ತು 2ರಂದು ಹೈದರಾಬಾದ್‌ನ ಚಂಪಾಪೇಟೆಯ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ 2ನೇ ಅಂತರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಅಂಗವಾಗಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಮಾರ್ಷಲ್ ಆರ್ಟ್ಸ್ ಶಿಕ್ಷಕರು, ತರಬೇತುದಾರರು ಹಾಗೂ ತೀರ್ಪುಗಾರರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಮಾರ್ಷಲ್ ಆರ್ಟ್ಸ್ ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ, ಉತ್ನಾಳ…

Read More

ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.ಬಳಿಕ ರೈತರು ಒಂದು…

Read More

‘ಗೂಂಡಾ ಸರ್ಕಾರ’ ಎಂದು ಕಾಂಗ್ರೆಸ್‌ಗೆ ಯತ್ನಾಳ ಟಾಂಗ್, : ಸಚಿವ ಸಂಪುಟ ವಿಸ್ತರಣೆ ವಿರುದ್ಧ ತೀವ್ರ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸಚಿವರ ಪಟ್ಟಿಯನ್ನು “ಗೂಂಡಾ ಸರ್ಕಾರದ ಸಂಪುಟ” ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದವರು, ಗೂಂಡಾಗಿರಿ ಪ್ರವೃತ್ತಿಯವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ನಿಷ್ಠಾವಂತ ಕಾಂಗ್ರೆಸ್ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ…

Read More

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘ (ರಿ) ರಾಜ್ಯ ಘಟಕ ಆಗ್ರಹಿಸಿದೆ.ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,…

Read More

ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More

ಕೆಎಸ್‌ಸಿಎ ಅಂಡರ್-19 ಇಂಟರ್ ಝೋನಲ್ ಟಿ-20ಗೆ ವಿಜಯಪುರದ ತನೂಶ್ರೀ ಇಜೇರಿ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರದ ಪ್ರತಿಭಾವಂತ ಯುವ ಕ್ರಿಕೆಟಿಗರಾದ ತನೂಶ್ರೀ ಇಜೇರಿ ಅವರು 2026–27ನೇ ಸಾಲಿನ ಕೆಎಸ್‌ಸಿಎ ಅಂಡರ್-19 ಮಹಿಳಾ ಇಂಟರ್ ಝೋನಲ್ ಟಿ-20 ಪಂದ್ಯಾವಳಿಯ ಕಂಬೈನ್ಡ್ ಮೊಫಸ್ಸಿಲ್ XI ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯು ಆಗಸ್ಟ್ 6ರಿಂದ 12ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕೆಎಸ್‌ಸಿಎ ಮಹಿಳಾ ಇಂಟರ್ ಮೊಫಸ್ಸಿಲ್ ಪಂದ್ಯಾವಳಿಯಲ್ಲಿ ರಾಯಚೂರು ವಲಯ ಮಹಿಳಾ ತಂಡವನ್ನು ಪ್ರತಿನಿಧಿಸಿದ ತನೂಶ್ರೀ ಅವರು ಆಲ್‌ರೌಂಡ್ ಪ್ರದರ್ಶನ ನೀಡಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ.ಎಡಗೈ ಆರಂಭಿಕ ಬ್ಯಾಟರ್ ಹಾಗೂ ಎಡಗೈ…

Read More

ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಎಂ.ಬಿ. ಪಾಟೀಲರನ್ನು ದೂಷಿಸುವುದು ಸರಿಯಲ್ಲ: ಡಾ. ಗಂಗಾಧರ ಸಂಬಣ್ಣಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲರನ್ನು ಹೊಣೆಗಾರರನ್ನಾಗಿ ಮಾಡುವುದು ಸಂಪೂರ್ಣ ಅಸಮರ್ಥನೀಯ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ತಿಳಿಸಿದ್ದಾರೆ.ಜಿಲ್ಲೆಯ ಕಾಂಗ್ರೆಸ್‌ನ ಆರೂ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ಈ ಬಾರಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತು. ಈ ಸಂಬಂಧ ಎಂ.ಬಿ. ಪಾಟೀಲರೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ…

Read More

ಬಸವ ಜನ್ಮಸ್ಥಳ ಇಂಗಳೇಶ್ವರದಿಂದ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಶ್ವಗುರು ಬಸವಣ್ಣ ಅವರ ಜನ್ಮಸ್ಥಳ ಇಂಗಳೇಶ್ವರದಿಂದ ಬಸವಕಲ್ಯಾಣ ಮಾರ್ಗವಾಗಿ ಐಕ್ಯಸ್ಥಳ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.ಇಂಗಳೇಶ್ವರ ಗ್ರಾಮದ ಅಗ್ಗಳ ಕವಿ ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಪರವಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಪರ ಜಿಲ್ಲಾಧಿಕಾರಿ ಈದ್ರಾಮ್ ಅವರ ಮೂಲಕ ಶನಿವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಗ್ಗಳ ಕವಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಾಗಪ್ಪ ಚಿಗರಿ ಮಾತನಾಡಿ, ಇಂಗಳೇಶ್ವರದಿಂದ ಆರಂಭವಾಗುವ ರೈಲು…

Read More

ಓಎಂಆರ್ ಶೀಟ್–ಪ್ರಶ್ನೆ ಪತ್ರಿಕೆ ವ್ಯತ್ಯಾಸ, ಪರೀಕ್ಷೆ ವಿಳಂಬದಿಂದ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆ; ಕೇಶವ್ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಯಲ್ಲಿನ ವ್ಯತ್ಯಾಸ, ಓಎಂಆರ್ ಶೀಟ್ ವಿತರಣೆಯಲ್ಲಿನ ಅವ್ಯವಸ್ಥೆ ಹಾಗೂ ಪರೀಕ್ಷೆ ವಿಳಂಬವಾಗಿ ಆರಂಭವಾದ ಘಟನೆಗಳು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಅನುಮಾನಕ್ಕೆ ಕಾರಣವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಇಂತಹ ಗಂಭೀರ ಗೊಂದಲ ಉಂಟಾಗಿರುವುದರಿಂದ ಅವರು ನೈತಿಕ…

Read More

ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಸರ್ಕಾರವೇ ಹೊಣೆ: ಉಸ್ತುವಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ಹಾಗೂ ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿ ಪ್ರಹಾರ ಪ್ರಕರಣ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಘಟನೆಗೆ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು…

Read More